ವಸತಿ ನಿಲಯಕ್ಕೆ ತಾ.ಪಂ ಅಧ್ಯಕ್ಷೆ ದಿಡೀರ್ ಬೇಟಿ!

ಮಧುಗಿರಿ :

      ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಶೌಚಾಲಯಗಳನ್ನು ಸ್ವಚ್ಚಗೊಳಿಸಲು ಮಕ್ಕಳನ್ನು ಬಳಸಿಕೊಳ್ಳುತ್ತಿದ್ದು, ಇದರ ಬಗ್ಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ತಾ.ಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ ತಿಳಿಸಿದರು.

      ಪಟ್ಟಣದ ದಂಡಿನ ಮಾರಮ್ಮ ದೇವಸ್ಥಾನದ ಸಮೀಪವಿರುವ ಹಿಂದುಳಿದ ವರ್ಗಗಳ ವಸತಿ ನಿಲಯಕ್ಕೆ ಶನಿವಾರ ಬೆಳಗ್ಗೆ ದಿಡೀರ್ ಬೇಟಿ ನೀಡಿ ಹಾಸ್ಟೆಲ್ ಅವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಮಕ್ಕಳ ಕೈಯಲ್ಲಿ ಶೌಚಾಲಯಗಳನ್ನು ಸ್ವಚ್ಚಗೊಳಿಸುವುದು ಅಪರಾಧ. ಸರ್ಕಾರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್ ನಲ್ಲಿ ಹಲವಾರು ಸೌಲಭ್ಯಗಳನ್ನು ಕಲ್ಪಿಸಿದೆ. ಆದರೆ ಇಲ್ಲಿನ ಹಾಸ್ಟೆಲ್‍ನಲ್ಲಿ ಸ್ವಚ್ಚತೆಯನ್ನು ಕಾಯ್ದುಕೊಂಡಿಲ್ಲ. ಮಕ್ಕಳಿಗೆ ವಿತರಿಸಲಾಗಿರುವ ಜಾಮೂನಿನ ಪೊಟ್ಟಣದಲ್ಲಿ ಯಾವುದೇ ದಿನಾಂಕ ನಮೂದಿಸಿಲ್ಲ. ಪೌಸ್ಟಿಕಾಂಶುಳ್ಳ ಆಹಾರವನ್ನು ಮಕ್ಕಳಿಗೆ ನೀಡುತ್ತಿಲ್ಲ ಅಲ್ಲದೇ ಹಾಸ್ಟೆಲ್ ನಲ್ಲಿ 25 ವಿದ್ಯಾರ್ಥಿಗಳಿದ್ದು, ಉಳಿದವರು ಎಲ್ಲಿ ತಂದು ಹಾಸ್ಟೆಲ್ ವಾರ್ಡನ್‍ಗೆ ತರಾಟೆಗೆ ತೆಗೆದುಕೊಂಡು ಇದರ ಜಿಲ್ಲಾ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

(Visited 11 times, 1 visits today)

Related posts

Leave a Comment