ವಿದ್ಯಾರ್ಥಿನಿಯನ್ನು ಬಲಿ ಪಡೆದ ಶಾಲಾ ಶೌಚಾಲಯದ ಕಟ್ಟಡ

ಕೋಲಾರ:

      ಶಾಲಾ ಶೌಚಾಲಯದ ಕಟ್ಟಡ ಕುಸಿದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮುಳಬಾಗಿಲು ಪಟ್ಟಣದ‌ ಗುಣಿಗುಂಟೆ ಪಾಳ್ಯದಲ್ಲಿ ನಡೆದಿದೆ.

      ಮೊರಾರ್ಜಿ ದೇಸಾಯಿ ಶಾಲೆಯ ಶೌಚಾಲಯದ ಕಟ್ಟಡ‌ ಕುಸಿದು ದುರ್ಘಟನೆ ಸಂಭವಿಸಿದ್ದು, ಪರಿಣಾಮ 6ನೇ ತರಗತಿ ವಿದ್ಯಾರ್ಥಿನಿ ಜೋಸ್ನಾ ಮೃತಪಟ್ಟಿದ್ದಾಳೆ.

      ದೇವರಾಯ ಸಮುದ್ರದ ಕೀಳುಹೊಳಲಿಯ 12 ಎಕರೆ ಜಮೀನಿನಲ್ಲಿ 21 ಕೋಟಿ ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಆದರಿಂದ ವಸತಿ ಶಾಲೆಯನ್ನು ಇರ್ಷಾದ್ ಎಂಬುವವರಿಗೆ ಸೇರಿದ ಖಾಸಗಿ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು. ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದ ವೇಳೆ ಏಕಾಏಕಿ ಕಟ್ಟಡ ಕುಸಿದ ಪರಿಣಾಮ ಆಕೆ ಅವಶೇಷಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

       ಖಾಸಗಿ‌ ಕಟ್ಟಡದಲ್ಲಿದ್ದ ಈ ಶಾಲೆಯು ರಾಜಕಾಲುವೆ ಪಕ್ಕದಲ್ಲಿ ಇದ್ದುದರಿಂದ ತೇವಾಂಶ ಹೆಚ್ಚಾಗಿ ಕುಸಿದಿರುವ ಶಂಕೆ ವ್ಯಕ್ತವಾಗಿದೆ. 

ಸ್ಥಳಕ್ಕೆ ಜಿಲ್ಲಾಧಿಕಾರಿ ಜೆ.ಮಂಜುನಾಥ್, ತಹಶೀಲ್ದಾರ್ ಪ್ರವೀಣ್ ಹಾಗೂ ಮುಳಬಾಗಿಲು ನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

(Visited 9 times, 1 visits today)

Related posts

Leave a Comment