ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ – ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ತುಮಕೂರು:

      ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜಿಲ್ಲಾಸ್ಪತ್ರೆಯ ಮುಂಭಾಗ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.

      ರಾಜ್ಯ ಸರ್ಕಾರದ ಆರೋಗ್ಯ ಕ್ಷೇತ್ರದ ಬಜೆಟ್ ಶೇಕಡವಾರು ಹೆಚ್ಚಿಸಬೇಕು ಮತ್ತು ಈ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡುವ ಜೊತೆಗೆ ಅಗತ್ಯವಿರುವ ನೆರವನ್ನು ಕೇಂದ್ರ ಸರ್ಕಾರವು ನೀಡಬೇಕು, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಅಭಿವೃದ್ಧಿಗೆ ಆದ್ಯತೆ ನೀಡಲು ಕ್ರಮವಹಿಸಬೇಕು, ಗುತ್ತಿಗೆ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆಯನ್ನು ಒದಗಿಸಿ, ಕಾಯಂಗೊಳಿಸಬೇಕು. ಎಲ್ಲಾ ಹುದ್ದೆಗಳಿಗೆ ವೇತನ ಭತ್ಯೆಗಳು ಮತ್ತು ವೇತನ ಶ್ರೇಣಿಯನ್ನು ನೀಡಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿದರು.

      ಹರಿಯಾಣ ಮಾದರಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಜಾರಿ ಮಾಡಿರುವ ಏಕರೂಪ ವೇತನದ ಮಾದರಿಯಲ್ಲಿ ನಮ್ಮ ರಾಜ್ಯದ ಎಲ್ಲಾ ನೌಕರರಿಗೂ ಜಾರಿಮಾಡಲು ಕ್ರಮ ವಹಿಸಬೇಕು, ಎನ್‍ಎಚ್‍ಎಂ ಅಡಿಯಲ್ಲಿ ಕೆಲಸ ಮಾಡುವ ನೌಕರರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಬೋನಸ್ ಹೆಚ್ಚಳವನ್ನು ಕಾರ್ಯ ಗತಗೊಳಿಸಬೇಕು, ಆರೋಗ್ಯ ಭಾಗ್ಯ ಯೋಜನೆ ಯನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೂ ವಿಸ್ತರಿಸಬೇಕು. ನಮ್ಮ ಸಂಘದ ಅಧಿಕೃತ ಮುಷ್ಕರದ ದಿನಗಳಲ್ಲಿ ಕಡಿತವಾದ ವೇತನವನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಮತ್ತು ನೌಕರರ ಕಲ್ಯಾಣ ನಿಧಿ ಅಥವಾ ಕಲ್ಯಾಣ ಮಂಡಳಿ ಸ್ಥಾಪಿಸಲು ಕ್ರಮ ಜರುಗಿಸಬೇಕು.

      ಸರ್ಕಾರಿ ನೇಮಕಾತಿಯಲ್ಲಿ ವಯಸ್ಸಿನ ಮಿತಿಯನ್ನು ವಿಸ್ತರಿಸುವುದು ಸೇವಾ ಅನುಭವಕ್ಕೆ ತಕ್ಕಂತೆ ಸೇವಾ ನೀಡುವುದು, ಪರಸ್ಪರ ವರ್ಗಾವಣೆ ಹಾಗೂ ಖಾಲಿ ಇರುವ ಜಾಗದಲ್ಲಿ ಸಾಮಾನ್ಯ ವರ್ಗಾವಣೆ ಅವಕಾಶ ನೀಡುವುದು, ಖಾಯಂ ನೇಮಕಾತಿಯಾದ ಕಾರಣದಿಂದ ಹಾಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯಬಾರದು ಮತ್ತು ಅನಗತ್ಯವಾಗಿ ಸ್ಥಳ ಬದಲಾವಣೆ ಮಾಡಬಾರದು, ಗುತ್ತಿಗೆ ಹಾಗೂ ಹೊರಗುತ್ತಿಗೆ
ನೌಕರರಿಗೆ ಖಾಯಂ ನೌಕರಿಯಲ್ಲಿ ನೀಡುವಂತೆ ಸಾವು ಅಥವಾ ಅಂಗವೈಕಲ್ಯ ಸಂದರ್ಭದಲ್ಲಿ ಸರಿ ಸಮನಾದ ಪರಿಹಾರ ನೀಡುವುದು ಹಾಗೂ ಕಳೆದ ಹತ್ತು ವರ್ಷಗಳ ಅವಧಿಯಿಂದ ಇಂತಹ ಪ್ರಕರಣಗಳನ್ನು ಗುರುತಿಸಿ ನೌಕರ ಹಾಗೂ ಅವರ ಕುಟುಂಬಗಳ ವರ್ಗದವರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರ ನಡೆಸಲಾಯಿತು.

      ಈ ವೇಳೆ ಮಾತನಾಡಿದ ಸಂಘದ ಮಾಧ್ಯಮ ಕಾರ್ಯದರ್ಶಿ ಎಸ್.ವಿ ಹುಚ್ಚೇಗೌಡ, ಸರ್ಕಾರಿ ನೌಕರರು ಹಾಗೂ ಗುತ್ತಿಗೆ ನೌಕರರು ಮಾಡುವ ಕಾರ್ಯವನ್ನು ಯಾಗಿದ್ದರು ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಹಾಗಾಗಿ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡಬೇಕು, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ಖಾಯಂಮಾತಿ ಮಾಡಬೇಕು, ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಅವರಿಗೂ ಗೊರವನ ಸೋಂಕು ತಗುಲಿ ಮೃತಪಟ್ಟಿದ್ದು, ಸರ್ಕಾರದಿಂದ ಇಲ್ಲಿಯವರೆಗೂ ಮೃತಪಟ್ಟ ವೈದ್ಯರಿಗೆ ಅಥವಾ ಅವರ ಕುಟುಂಬಕ್ಕೆ ಯಾವುದೇ ರೀತಿಯ ಪರಿಹಾರ ಹಣ ದೊರೆತಿಲ್ಲ ಜೊತೆಗೆ ಗುತ್ತಿಗೆ ಹೊರಗುತ್ತಿಗೆ ಎಂಬ ರೀತಿಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಮುಷ್ಕರದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಆರ್. ಚೇತನ್, ಜಗದೀಶ್, ಅನಿಸ್, ಮಂಜುಳಾ, ರಮೇಶ್, ಯಶ್ ಪಾಲ್, ರವಿಪ್ರಕಾಶ್ ಇದ್ದರು.

(Visited 4 times, 1 visits today)

Related posts

Leave a Comment