ತುಮಕೂರು:

      ಪ್ರಾಥಮಿಕ ಶಿಕ್ಷಣ ಸಚಿವರ ನೇಮಕ ಸೇರಿದಂತೆ ವಿವಿಧ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

      ಸಚಿವರಿಲ್ಲದೇ ಶಿಕ್ಷಣ ಇಲಾಖೆ ನಿರ್ಜೀವವಾಗಿದ್ದು ಇದರಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಲಿದೆ, ಪರೀಕ್ಷೆಗಳು ಹತ್ತಿರವಾಗುತ್ತಿದ್ದರು, ಶಿಕ್ಷಣ ಸಚಿವರನ್ನು ನೇಮಿಸದೇ ರಾಜ್ಯ ಸರ್ಕಾರ ಶಿಕ್ಷಣ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟವಾಗಿದ್ದು, ಕಳೆದ ಮೂರು ವರ್ಷಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ. ಈ ಭಾರೀ ಪರೀಕ್ಷೆಗಳು ಸಮೀಪಿಸುತ್ತಿದ್ದರು, ಇಲಾಖೆಗೆ ಸಚಿವರಿಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಮಹಮ್ಮದ್ ತಪ್ಸೀರ್ ಅಸಮಾಧಾನ ವ್ಯಕ್ತಪಡಿಸಿದರು.

      ಶಿಕ್ಷಣ ಇಲಾಖೆಯನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ರಾಜಕೀಯ ಕಚ್ಚಾಟದಿಂದ ಶಿಕ್ಷಣ ಇಲಾಖೆಗೆ ಸಚಿವರನ್ನು ನೇಮಿಸದೇ ಇರುವುದು ಖಂಡನಾರ್ಹವಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆಯೂ ಮಾಡಿಲ್ಲ, ಶೈಕ್ಷಣಿಕ ವರ್ಷ ಮುಗಿಯುತ್ತ ಬಂದರೂ ಸೈಕಲ್ ವಿತರಿಸದೇ ತುಕ್ಕು ಹಿಡಿಸಲಾಗುತ್ತಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಪೂರ್ಣವಧಿ ನಿರ್ದೇಶಕರಿಲ್ಲದೆ ಇಲಾಖೆ ಸ್ಥಗಿತಗೊಂಡಿದೆ ಎಂದು ದೂರಿದರು.

      ಶಿಕ್ಷಣ ಇಲಾಖೆಗೆ ಸಚಿವರನ್ನು ನೇಮಿಸಬೇಕು, ಪ್ರಶ್ನೆಪತ್ರಿಕೆಗಳು ಸೋರಿಕೆಯಾಗದಂತೆ ಪಾರದರ್ಶಕತೆ ಕಾಯ್ದುಕೊಳ್ಳಬೇಕು, ಸೈಕಲ್ ವಿತರಣೆಯಲ್ಲಿ ಆಗಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಯಿತು. ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಪಾಲ್ಗೊಂಡಿದ್ದರು.

(Visited 19 times, 1 visits today)