ಶಿವಕುಮಾರಸ್ವಾಮೀಜಿಗಳ ಆರೋಗ್ಯ ಸ್ಥಿರ : ಸಿದ್ಧಲಿಂಗಸ್ವಾಮೀಜಿ

ತುಮಕೂರು:

      ಸಿದ್ಧಗಂಗಾಶ್ರೀ ಡಾ.ಶಿವಕುಮಾರಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಿದ್ಧಗಂಗಾ ಮಠದ ಕಿರಿಯಶ್ರೀಗಳಾದ ಸಿದ್ಧಲಿಂಗಸ್ವಾಮೀಜಿ ತಿಳಿಸಿದರು.

      ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಆರೋಗ್ಯದ ವಿಚಾರವಾಗಿ ಮಾಧ್ಯಮಗಳಲ್ಲಿ ಸಾಕಷ್ಟು ಮಾಹಿತಿ ನೀಡಲಾಗುತ್ತಿದ್ದು, ಟಿವಿಗಳಲ್ಲಿ ಪ್ರಸಾರವಾಗುತ್ತಿರುವ ಮಾಹಿತಿಯಿಂದ ಜನರಲ್ಲಿ ಆತಂಕ ಉಂಟಾಗುತ್ತಿದ್ದು, ಮಾಧ್ಯಮಗಳು ಮಠದಲ್ಲಿ ಉಳಿದುಕೊಂಡಿರವುದು ಜನರಲ್ಲಿ ಹೆಚ್ಚಿನ ಕುತೂಹಲವನ್ನುಂಟು ಮಾಡುತ್ತಿದೆ. ಶ್ರೀಗಳ ಆ ರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಮಾಧ್ಯಮಗಳಿಗೆ ಬೆಳಿಗ್ಗೆ ಮತ್ತು ಸಂಜೆ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡ ಲಾಗುವುದು ಎಂದು ಹೇಳಿದರು.

     ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್, ಕಣ್ಣೂರು ಸ್ವಾಮೀಜಿ, ಮಠದ ಮಹದೇವು ಇತರರು ಚಿತ್ರದಲ್ಲಿದ್ದಾರೆ.

(Visited 9 times, 1 visits today)

Related posts

Leave a Comment