ಶಿವಕುಮಾರ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದ ಪ್ರಧಾನಿ ಮೋದಿ

ತುಮಕೂರು :

      ಪ್ರಧಾನಿ ನರೇಂದ್ರ ಮೋದಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯ ಗದ್ಧುಗೆ ದರ್ಶನ ಪಡೆದರು.

      ಮಧ್ಯಾಹ್ನ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಾಲು ಹೊದೆಸಿ, ಮೈಸೂರು ಪೇಟಾ ತೊಡಿಸಿ ಸ್ವಾಗತಿಸಿದರು. ನಂತರ ವಿಶೇಷ ಹೆಲಿಕಾಫ್ಟರ್ ಮೂಲಕ ತುಮಕೂರಿಗೆ ತೆರಳಿದರು.

      ತುಮಕೂರು ಹೆಲಿಪ್ಯಾಡ್‍ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪ್ರಧಾನಿಯವರನ್ನು ಸ್ವಾಗತಿಸಿದರು. ಈ ವೇಳೆ ಯಡಿಯೂರಪ್ಪ ಸಹ ಇದ್ದರು. ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಠದ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಸ್ವಾಗತಿಸಿದರು.

       ಮೋದಿ ಅವರು ಡಾ.ಶಿವಕುಮಾರ ಸ್ವಾಮೀಜಿ ವಸ್ತು ಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ಮತ್ತು ಮಠದ ಆವರಣದಲ್ಲಿ ಬಿಲ್ವಪತ್ರೆ ಗಿಡ ನೆಟ್ಟು ಮಕ್ಕಳ ಜತೆ ಸಂವಾದ ನಡೆಸುವರು.

(Visited 4 times, 1 visits today)

Related posts

Leave a Comment