ತುಮಕೂರು:
       ಮೈಸೂರಿನ ಮಹರಾಜ ಯದುವೀರ್ ಒಡೆಯರ್ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.

      ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್ ಒಡೆಯರ್, ನಾನು ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದೆ. ಹಾಗೇ ಶ್ರೀಗಳನ್ನು ನೋಡಲು ಬಂದಿದ್ದೇನೆ. ಶ್ರೀಗಳು ಆರೋಗ್ಯವಾಗಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಅಂತ ಚಾಮುಂಡೇಶ್ವರಿ ತಾಯಿಯಲ್ಲಿ ಪ್ರಾರ್ಥನೆ ಮಾಡ್ತೇನೆ.

     ಶ್ರೀಗಳು ವಿಶ್ರಾಂತಿಯಲ್ಲಿದ್ದರಿಂದ ಅವರನ್ನು ಎಚ್ಚರಿಸಲು ಹೋಗಲಿಲ್ಲ. ಅವರ ಜೊತೆ ಮಾತನಾಡುವ ಅವಕಾಶ ಸಿಗಲಿಲ್ಲ. ಹಾಗಾಗಿ ನಾನು ಅವರ ಆಶೀರ್ವಾದ ಪಡೆದುಕೊಂಡು, ಅವರನ್ನು ನೋಡಿಕೊಂಡು ಬಂದೆ” ಎಂದು ಹೇಳಿದರು.

 

(Visited 31 times, 1 visits today)