ಲಕ್ನೋ:
ಅಯೋಧ್ಯೆಯ ಸರಯೂ ನದಿ ತೀರದಲ್ಲಿ ಶ್ರೀರಾಮಚಂದ್ರನ ಪ್ರತಿಮೆ ಸ್ಥಾಪಿಸಲು ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ.
ಸುಮಾರು 151 ಮೀಟರ್ ಎತ್ತರದ ಪ್ರತಿಮೆ ನಿರ್ಮಾಣ ಮಾಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿದ್ದಾರೆ. ಸಂತ ತುಳಸೀದಾಸ್ ಘಾಟ್ ಬಳಿ ಸುಮಾರು 330 ಕೋಟಿ ರು ವೆಚ್ಚದಲ್ಲಿ 151 ಮೀಟರ್ ಎತ್ತರದ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ, ದೀಪಾವಳಿ ಸಂದರ್ಭದಲ್ಲಿ ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಅವರು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಅಯೋಧ್ಯ ನಗರದ ಮೇಯರ್ ಋಷಿಕೇಶ್ ಉಪಾಧ್ಯಾಯ್ ಅವರು ಹೇಳಿದ್ದಾರೆ.
‘ಈ ಬಾರಿ ದೀಪವಾಳಿಗೆ ರಾಮನಿಗಾಗಿ ದೀಪ ಬೆಳಗುತ್ತೇವೆ. ಕೆಲಸ ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ. ದೀಪಾವಳಿ ನಂತರ ಈ ಕಾರ್ಯ ಆರಂಭವಾಗಲಿದೆ,” ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
(Visited 10 times, 1 visits today)