ಲಕ್ನೋ:

      ಅಯೋಧ್ಯೆಯ ಸರಯೂ ನದಿ ತೀರದಲ್ಲಿ ಶ್ರೀರಾಮಚಂದ್ರನ ಪ್ರತಿಮೆ ಸ್ಥಾಪಿಸಲು ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ.

      ಸುಮಾರು 151 ಮೀಟರ್​ ಎತ್ತರದ ಪ್ರತಿಮೆ ನಿರ್ಮಾಣ ಮಾಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ಹೇಳಿದ್ದಾರೆ. ಸಂತ ತುಳಸೀದಾಸ್ ಘಾಟ್ ಬಳಿ ಸುಮಾರು 330 ಕೋಟಿ ರು ವೆಚ್ಚದಲ್ಲಿ 151 ಮೀಟರ್ ಎತ್ತರದ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ, ದೀಪಾವಳಿ ಸಂದರ್ಭದಲ್ಲಿ ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಅವರು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಅಯೋಧ್ಯ ನಗರದ ಮೇಯರ್ ಋಷಿಕೇಶ್ ಉಪಾಧ್ಯಾಯ್ ಅವರು ಹೇಳಿದ್ದಾರೆ.

      ‘ಈ ಬಾರಿ ದೀಪವಾಳಿಗೆ ರಾಮನಿಗಾಗಿ ದೀಪ ಬೆಳಗುತ್ತೇವೆ. ಕೆಲಸ ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ. ದೀಪಾವಳಿ ನಂತರ ಈ ಕಾರ್ಯ ಆರಂಭವಾಗಲಿದೆ,” ಎಂದು ಯೋಗಿ ಆದಿತ್ಯನಾಥ್​ ಹೇಳಿದ್ದಾರೆ. 

 

  

(Visited 13 times, 1 visits today)