ಸಂಸದ ಪ್ರತಾಪ್ ಸಿಂಹ ಮೇಲೆ ಗರಂ ಆದ ಸಿಎಂ ಹೆಚ್ಡಿಕೆ

ಕೊಡಗು :

      ಇಂದು ಸಿಎಂ, ಸಂಸದರ ನಡುವೆ ವಾಕ್ಸಮರ ಏರ್ಪಟ್ಟು, ಸಂಸದ ಪ್ರತಾಪ್ ಸಿಂಹ ಮೇಲೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ  ಕೆಂಡಾಮಂಡಲರಾದ  ಘಟನೆ ನಡೆದಿದೆ.

     ಇಂದು ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ನೂರಾರು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಮನೆ‌ ನಿರ್ಮಾಣ ಕಾಮಗಾರಿ ಹಾಗೂ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮ ಇಂದು ನಡೆಯಿತು. ಇದೇ ವೇಳೆ ಕಾರ‍್ಯಕ್ರಮದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಅವರು ಮಾತನಾಡಿದರು.

     ಕೇಂದ್ರ ಸರ್ಕಾರ ಕೂಡ ಜಿಲ್ಲೆಯ ಜನರಿಗೆ ಸ್ಪಂದಿಸಿದೆ. ಕೇರಳಕ್ಕೆ ಮಾತ್ರ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್​ ನೀಡಿದೆ. ಕೊಡಗನ್ನು ನಿರ್ಲಕ್ಷ್ಯ ಮಾಡಿದೆ ಎಂದು ಸುಳ್ಳು ಪ್ರಚಾರ ಮಾಡಲಾಗಿದೆ ಎಂದು ಹೇಳಿದರು. ಇನ್ನು ಸಾರಾ ಮಹೇಶ್​, ಪರಮೇಶ್ವರ್​ ಹೇಳಿಕೆಗೆ ಟಾಂಗ್​ ನೀಡಿದ ಪ್ರತಾಪ್​ ಸಿಂಹ ಹೇಳಿಕೆಯಿಂದ ಗರಂ ಆದ ಸಿಎಂ  ನೇರ ಸಂಸದರತ್ತ ಕೈ ಸನ್ನೆ ಮಾಡಿ ನಿಲ್ಲಿಸಿ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ಆಯ್ತು ಆಯ್ತು ಎಂದರು. ಏನೇನೋ ಹೇಳಿ ಜನರ ದಾರಿ ತಪ್ಪಿಸಬೇಡಿ. ಇರುವ ವಾಸ್ತವತೆಯನ್ನು ಹೇಳಿ ಎಂದರು. ಈ ವೇಳೆ ಸಿಎಂ ಪಕ್ಕದಲ್ಲೇ ಕುಳಿತಿದ್ದ ಸಚಿವ ಸಾ ರಾ ಮಹೇಶ್ ವಿರುದ್ಧ ರೇಗಿದ ಸಿಎಂ ಎಚ್‍ಡಿಕೆ, ಸಂಸದರಿಗೆ ಭಾಷಣ ನಿಲ್ಲಿಸುವಂತೆ ಹೋಗಿ ಹೇಳಿ ಎಂದು ಸೂಚನೆ ನೀಡಿದರು.

     ಭಾಷಣ ಮುಗಿಸಿ ತಮ್ಮ ಕುರ್ಚಿಯ ಬಳಿ ಪ್ರತಾಪ್ ಸಿಂಹ ಬಂದ ಬಳಿಕವೂ ಸಿಎಂ ಎಚ್‍ಡಿಕೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ಸೈಲೆಂಟ್ ಆಗಿ ಕುಳಿತ್ತಿದ್ದರು.

 

(Visited 9 times, 1 visits today)

Related posts

Leave a Comment