BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ
  • ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಕಲ ಸರ್ಕಾರಿ ಗೌರವಗಳೊಂದಿಗೆ ಸಮಾಜಮುಖಿ ಡಾ: ಸೂಲಗಿತ್ತಿ ನರಸಮ್ಮ ಅವರ ಅಂತ್ಯಕ್ರಿಯೆ
Trending

ಸಕಲ ಸರ್ಕಾರಿ ಗೌರವಗಳೊಂದಿಗೆ ಸಮಾಜಮುಖಿ ಡಾ: ಸೂಲಗಿತ್ತಿ ನರಸಮ್ಮ ಅವರ ಅಂತ್ಯಕ್ರಿಯೆ

By News Desk BenkiyabaleUpdated:December 26, 2018 4:33 pm

 ತುಮಕೂರು:

      ನಿನ್ನೆ ನಿಧನರಾದ “ಪದ್ಮಶ್ರೀ” ಪುರಸ್ಕತೆ ಡಾ: ಸೂಲಗಿತ್ತಿ ನರ ಸಮ್ಮ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಗರದ ಗಂಗಸಂದ್ರದಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ನೆರವೇರಿಸಲಾಯಿತು.

Displaying DSC_3556.JPG

      ಇದಕ್ಕೂ ಮುನ್ನ ಸಚಿವರಾದ ವೆಂಕಟರಮಣಪ್ಪ, ಯು.ಟಿ.ಖಾದರ್, ಎಸ್.ಆರ್.ಶ್ರೀನಿವಾಸ್, ಆರ್.ಬಿ.ತಿಮ್ಲಾಪುರೆ, ಮಾಜಿ ಸಚಿವರಾದ ಎಚ್. ಆಂಜನೇಯ, ಸೊಗಡು ಶಿವಣ್ಣ, ಸಂಸದರಾದ ಎಸ್.ಪಿ. ಮುದ್ದಹನುಮೇಗೌಡ, ಚಂದ್ರಪ್ಪ, ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ, ತಿಮ್ಮರಾಯಪ್ಪ, ಶಾಸಕರಾದ ಜ್ಯೋತಿಗಣೇಶ್, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಮಾಜಿ ಸಂಸದ ಜಿ.ಎಸ್.ಬಸವರಾಜು, ಎಲೆರಾಂಪುರ ಮಠದ ಹನುಮಂತನಾಥ ಸ್ವಾಮೀಜಿ ಸೇರಿದಂತೆ ಹಲವಾರು ಗಣ್ಯರು ಹಾಗೂ ಅಭಿಮಾನಿಗಳು ನಗರದ ಗಾಜಿನ ಮನೆಯಲ್ಲಿಡಲಾಗಿದ್ದ ಮೃತ ಸೂಲಗಿತ್ತಿ ನರಸಮ್ಮ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.Displaying DSC_3355.JPG

      ಸೂಲಗಿತ್ತಿ ನರಸಮ್ಮರವರು ಆಗಿನ ಕಾಲದಲ್ಲೇ ಆರೋಗ್ಯದ ಬಗ್ಗೆ ಹೆಚ್ಚಿನ ಮಹತ್ವ ಹೊಂದಿದ್ದರಲ್ಲದೆ, ಅನಕ್ಷರಸ್ಥರಾಗಿದ್ದರೂ ತಮ್ಮ ಆರೋಗ್ಯದ ನೈಪುಣ್ಯತೆಯಿಂದ ಸಮಾಜದ ಒಳಿತಿಗಾಗಿ ಶ್ರಮಿಸಿದ್ದರು. ಇವರು ಸಮಾಜಕ್ಕೆ ನೀಡಿದ ವಿಶೇಷ ಕೊಡುಗೆಯನ್ನು ಗುರುತಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿತ್ತು. ಇವರ ಅಗಲಿಕೆಯನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಅಂತಿಮ ದರ್ಶನ ಪಡೆದ ಗಣ್ಯರು ಸಂತಾಪ ವ್ಯಕ್ತಪಡಿಸಿದರು.Displaying DSC_3457.JPG

      ಸೂಲಗಿತ್ತಿ ನರಸಮ್ಮ ಅವರ ಪಾರ್ಥೀವ ಶರೀರಕ್ಕೆ ಹೂ-ಗುಚ್ಚವಿಟ್ಟು, ಗೌರವ ಸಲ್ಲಿಸಿ ನಂತರ ಮಾತನಾಡಿದ ಸಂಸದ ಎಸ್.ಪಿ. ಮುದ್ದಹನುಮೇಗೌಡ, ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಕೃಷ್ಣಾಪುರವೆಂಬ ಪುಟ್ಟ ಗ್ರಾಮದಲ್ಲಿ ಹುಟ್ಟಿ ತನ್ನ ಸೇವೆಯ ಮೂಲಕವೇ ಜನರ ಮನಸ್ಸನ್ನು ಗೆದ್ದು, 98 ವರ್ಷಗಳ ಕಾಲ ಸಾರ್ಥಕ ಜೀವನವನ್ನು ನಡೆಸಿ ವೈದ್ಯಕೀಯ ಕ್ಷೇತ್ರದಲ್ಲಿ ಪರಿಣಿತರು ಮಾಡದಂತಹ ಅನನ್ಯ ಸೇವೆಯನ್ನು ಮಾಡಿದ್ದಾರೆ ಎಂದರು.

Displaying DSC_3517.JPG

      ಮೃತರ ಅಂತ್ಯಕ್ರಿಯೆಯನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಿಕೊಟ್ಟರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ದಿವ್ಯಾ ಗೋಪಿನಾಥ್, ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಉಪವಿಭಾಗಾಧಿಕಾರಿ ಶಿವಕುಮಾರ್, ತಹಶೀಲ್ದಾರ್ ನಾಗರಾಜ್ ಸೇರಿದಂತೆ ಹಲವು ಅಧಿಕಾರಿಗಳು ಅಂತಿಮ ದರ್ಶನ ಪಡೆದರು.

(Visited 35 times, 1 visits today)
Previous Articleಗಣಿತ ಕ್ಷೇತ್ರದ ಮಹಾನ್ ಸಾಧಕ ಶ್ರೀನಿವಾಸ ರಾಮಾನುಜನ್ – ಸಿ.ಎ.ಸೋಮೇಶ್ವರ್ ಗುಪ್ತ
Next Article SSLC ಹಾಲ್ ಟಿಕೆಟ್ : ದೋಷವಿದ್ದಲ್ಲಿ ತಿದ್ದುಪಡಿಗೆ ಅವಕಾಶ
News Desk Benkiyabale

Related Posts

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news
ತಾಜಾ ಸುದ್ಧಿಗಳು
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm
news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
Our Youtube Channel
Our Picks

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

By News Desk BenkiyabaleOctober 17, 2026 6:00 pm

ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಭಾಷೆಯ ಮೇಲಿನ ಹಿಡಿತ ಮತ್ತು ಪರಿಣಾಮಕಾರಿ ಬರವಣಿಗೆಯ ಕೌಶಲ ಅತ್ಯಂತ ಅಗತ್ಯ. ನಿರಂತರ ಅಧ್ಯಯನ,…

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.