ಸಪ್ತಪದಿ ರಥಕ್ಕೆ ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ಚಾಲನೆ

ತುಮಕೂರು :

      ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ, ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 26ರಂದು ನಡೆಯುವ ಸಪ್ತಪದಿ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಪ್ತಪದಿ ರಥಕ್ಕೆ ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಚಾಲನೆ ನೀಡಿದರು.

      ಅನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಸಪ್ತಪದಿ ರಥ ಸಂಚರಿಸಲಿದ್ದು, ಜನರಿಗೆ ಸಪ್ತಪದಿ ಸರಳ ಸಾಮೂಹಿಕ ವಿವಾಹದ ಬಗ್ಗೆ ಮಾಹಿತಿ ನೀಡಲಿದೆ. ಜಿಲ್ಲೆಯ ಜನತೆ ಸರಳ ಸಾಮೂಹಿಕ ವಿವಾಹದ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

      ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶೇಖರ್, ತಹಶೀಲ್ದಾರ್ ಮೋಹನ್, ರಾಜ್ಯ ಧಾರ್ಮಿಕ ಪರಿಷತ್‍ನ ಸದಸ್ಯ ಸಿದ್ಧಲಿಂಗ ಪ್ರಭು, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹೆಚ್.ಸವಿತ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

(Visited 6 times, 1 visits today)

Related posts

Leave a Comment