ಸಮ್ಮಿಶ್ರ ಸರ್ಕಾರ ಸತ್ತು ಹೋಗಿದೆ : ಜಗದೀಶ್‌ ಶೆಟ್ಟರ್‌

ಬೆಂಗಳೂರು:

      ಸಮ್ಮಿಶ್ರ ಸರ್ಕಾರದ ಸಿಎಂ ಹೇಳುವುದೊಂದು, ಮಾಡುವುದೊಂದು. ಸರ್ಕಾರ ದಿವಾಳಿಯಾಗಿದೆ. ಸರ್ಕಾರ ಸತ್ತು ಹೋಗಿದೆ. ರಾಜ್ಯದಲ್ಲಿ ಸರ್ಕಾರ ಎಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಿಡಿಕಾರಿದ್ದಾರೆ.

      ಶುಕ್ರವಾರ ವಿಧಾನಸೌಧದಲ್ಲಿನ ವಿಪಕ್ಷ ನಾಯಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಮೈತ್ರಿ ಸರಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಈ ಸರಕಾರ ಅಸ್ತಿತ್ವದಲ್ಲೆ ಇಲ್ಲ, ಸತ್ತು ಹೋಗಿದೆ’ ಎಂದು  ಟೀಕಿಸಿದ್ದಾರೆ.

       ಐದಾರು ತಿಂಗಳಿಂದ ಪಿಂಚಣಿ ನೀಡಲು ಈ ಸರಕಾರದ ಬಳಿ ಹಣವಿಲ್ಲ. ವಿವಿಧ ಕಾಮಗಾರಿಗಳ 6 ಸಾವಿರ ಕೋಟಿ ರೂ.ಬಿಲ್ ಬಾಕಿ ಇದೆ. ಇನ್ನೂ 46 ಸಾವಿರ ಕೋಟಿ ರೂ.ರೈತರ ಸಾಲಮನ್ನಾವೂ ಆಗಿಲ್ಲ. ಸರಕಾರದ ಖಜಾನೆ ಖಾಲಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

       ಸರ್ಕಾರ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿದೆ. ಸಕ್ಕರೆ ಸಚಿವರು ಇದ್ದಾರೆಂದು ಗೊತ್ತೇ ಇರಲಿಲ್ಲ. ಸಮಸ್ಯೆ ಬಗೆಹರಿಸಿದರೆ ರೈತರು ಏಕೆ ಪ್ರತಿಭಟನೆ ಮಾಡುತ್ತಾರೆ? ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಮೊದಲೇ ಮಾತನಾಡಬೇಕಿತ್ತು. ಮಾಧ್ಯಮದವರ ಬಳಿಯೂ ಕುಮಾರಸ್ವಾಮಿ ಹೀಗೇ ನಡೆದುಕೊಳ್ಳುತ್ತಾರೆ. ಈ ಸರಕಾರ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲವಾಗಿದೆ ಎಂದರು.

 

(Visited 30 times, 1 visits today)

Related posts

Leave a Comment