ಸಿಎಂ ವಿರುದ್ಧ #MeToo ಆರೋಪ!!

ಶಿವಮೊಗ್ಗ:

    ಕುಮಾರಸ್ವಾಮಿ ತಮ್ಮಕುಟುಂಬದಲ್ಲಿ ರಾಜಕಾರಣ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕುಮಾರ್ ಬಂಗಾರಪ್ಪ, ಕುಮಾರಸ್ವಾಮಿಯವರು ಎಚ್ಚರದಿಂದ ಇರಬೇಕು ಮುಂದಿನ ದಿನಗಳಲ್ಲಿ ಅವರ ವಿರುದ್ಧವೂ ಮಿಟೂ ಬಾಂಬ್ ಸಿಡಿಯುವ ಸಾಧ್ಯತೆ ಇದೆ ಹೊಸ ಬಾಂಬ್ ಸಿಡಿಸಿದ್ದಾರೆ.

      ಅವರು ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು, ಸಿಎಂ ಕುಮಾರಸ್ವಾಮಿ ಅವರು ಸೊರಬಕ್ಕೆ ಬಂದಾಗ ನನ್ನನ್ನೇ ಟಾರ್ಗೆಟ್ ಮಾಡಿ ಮಾತನಾಡಿದ್ದಾರೆ. ಸುಳ್ಳಿಗೆ ಯಾವಾಗಲೂ ಸಾಕ್ಷಿ, ಆಧಾರ ಇರುವುದಿಲ್ಲ. ನನ್ನ ಬಗ್ಗೆ ಮಾತನಾಡಿದರೆ ನಿಮ್ಮ ಬಗ್ಗೆ ಸಾಕ್ಷಿ ಸಮೇತ ನಾನು ಮಾತನಾಡುತ್ತೇನೆ. ಇನ್ನೂ ಹೆಚ್ಚು ಮಾತನಾಡಿದರೆ ಮೀ ಟೂದಲ್ಲಿ ನಿಮ್ಮ ಹೆಸರು ಪ್ರಸ್ತಾಪವಾಗಬಹುದು ಎಂದು ಎಚ್ಚರಿಕೆ ನೀಡಿದರು.

      ಸಿಎಂ ಕುಮಾರಸ್ವಾಮಿ ಕುರಿತಾದ ಬೇಕಾದಷ್ಟು ಸಾಕ್ಷಿಗಳು ಸಾಮಾಜಿಕ ಜಾಲತಾಣದಲ್ಲಿ ಲಿಂಕ್​ ಆಗಿವೆ. ಹುಟ್ಟುಹಬ್ಬ ಆಚರಣೆ ಮಾಡಿರುವುದು, ಮತ್ತೊಂದು ಮಾಡಿರುವುದು, ತಲೆಮರೆಸಿಕೊಂಡಿರುವುದು ಸಾಕಷ್ಟು ಲಿಂಕ್​ಗಳು ಸಿಗುತ್ತವೆ. ನಿಮ್ಮ ಕುಟುಂಬ ಭಾಗವಾದರೆ, ಅವರನ್ನು ಸ್ವೀಕರಿಸಿ ರಾಮನಗರ ಚುನಾವಣೆಯಲ್ಲಿ ಒಟ್ಟಿಗೆ ಚುನಾವಣೆ ಎದುರಿಸಿ, ಅವರನ್ನು ಮತ್ತೊಂದೆಡೆ ಚುನಾವಣಾ ಅಭ್ಯರ್ಥಿಯನ್ನಾಗಿ ಮಾಡಿ. ಇನ್ನೊಬ್ಬರ ಜತೆ ಸಂಬಂಧ ಹೊಂದಬಹುದೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ​ ಎಂದು ರಾಧಿಕಾ ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸಿ ಮಾತನಾಡಿದರು.

 

(Visited 7 times, 1 visits today)

Related posts

Leave a Comment