ಚನ್ನೈ:
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಚೆನ್ನೈನ ರೇಲಾ ಇನ್ಸ್ಟಿಟ್ಯೂಟ್ ಆಂಡ್ ಮೆಡಿಕಲ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಸಿದ್ದಗಂಗಾ ಮಠ ಇವರ ಆರೋಗ್ಯ ವಿಚಾರಿಸಿದರು.
ಶ್ರೀಗಳು ಶೀಘ್ರವೇ ಗುಣಮುಖರಾಗಿ ಜನತಾ ಜನಾರ್ದನನ ಸೇವೆಯಲ್ಲಿ ತೊಡಗಲಿ. ಶ್ರೀಗಳು ಮಾಡುತ್ತಿರುವ ತ್ರಿವಿಧ ದಾಸೋಹ ಕೈಂಕರ್ಯ ಇಡೀ ದೇಶಕ್ಕೆ ಮಾದರಿಯಾಗಿದ್ದು ಅವರ ಆಶೀರ್ವಾದ ಎಲ್ಲರ ಮೇಲೂ ನಿರಂತರವಾಗಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
(Visited 12 times, 1 visits today)