ಹಾಡಹಗಲೇ ಜೆಡಿಎಸ್‌ ಮುಖಂಡನ ಬರ್ಬರ ಕೊಲೆ

ಮಂಡ್ಯ :

      ಮಂಡ್ಯ ಜಿಲ್ಲೆಯ ಮದ್ಧೂರಿನಲ್ಲಿ ಜೆಡಿಎಸ್ ಮುಖಂಡನನ್ನು ಹತ್ಯೆ ಮಾಡಲಾಗಿದೆ. ಮದ್ದೂರು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಧಾವಿಸಿದ್ದಾರೆ.

      ಮಂಡ್ಯ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪತಿ, ಜೆಡಿಎಸ್ ಮುಖಂಡ ಹೊನ್ನಲಗೆರೆ ಪ್ರಕಾಶ್ (50) ಅವರ ಕತ್ತುಸೀಳಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸೋಮವಾರ ಸಂಜೆ ಮದ್ದೂರಿನ ಟಿ.ಬಿ.ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ.

      ಗಂಭೀರವಾಗಿ ಗಾಯಗೊಂಡಿದ್ದ ಹೊನ್ನಲಗೆರೆ ಪ್ರಕಾಶ್ ಅವರನ್ನು ಮದ್ದೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ನೂರಾರು ಜನರು ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ.

      ಹೊನ್ನಲಗೆರೆ ಪ್ರಕಾಶ್ ಅವರು ಕಾರಿನಲ್ಲಿ ಕುಳಿತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರ ಕತ್ತು ಸೀಳಿ ಪರಾರಿಯಾಗಿದ್ದಾರೆ. ಚಾಕುವಿನಿಂದ ಅವರ ಕತ್ತು ಕೊಯ್ದಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಮೃತಪಟ್ಟಿದ್ದಾರೆ.

 ಹೊನ್ನಲಗೆರೆ ಪ್ರಕಾಶ್ ಅವರ ಅಭಿಮಾನಿಗಳು ಮದ್ದೂರಿನ ಸರ್ಕಾರಿ ಆಸ್ಪತ್ರೆ ಕಿಟಕಿ ಗಾಜುಗಳನ್ನು ಒಡೆದುಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

(Visited 10 times, 1 visits today)

Related posts

Leave a Comment