BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು
  • ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ
  • ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ
  • ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು
  • ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ
  • ಬೆಂಕಿಗೆ ಸುಟ್ಟು ಬೂದಿಯಾದ ರೇಷ್ಮೆ ಬೆಳೆಗಾರನ ಬದುಕು
  • ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಿರಿಯ ಅಧಿಕಾರಿಗಳ ದಬ್ಬಾಳಿಕೆಗೆ ಕಡಿವಾಣ ಹಾಕಲು ಆಗ್ರಹ!!
Trending

ಹಿರಿಯ ಅಧಿಕಾರಿಗಳ ದಬ್ಬಾಳಿಕೆಗೆ ಕಡಿವಾಣ ಹಾಕಲು ಆಗ್ರಹ!!

By News Desk BenkiyabaleUpdated:July 17, 2019 7:03 pm

ತುಮಕೂರು :

      ಗ್ರಾಮಲೆಕ್ಕಾಧಿಕಾರಿಗಳ ಮುಂಬಡ್ತಿಯಲ್ಲಿ ಉಂಟಾಗುತ್ತಿರುವ ನಿರಂತರ ಅನ್ಯಾಯವನ್ನು ಸರಿಪಡಿಸಿ, ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಮತ್ತು ಗ್ರಾಮಲೆಕ್ಕಿಗರ ಜೇಷ್ಠತೆಗಳನ್ನು ಒಟ್ಟುಗೂಡಿಸಿ, ಪದನವೀಕರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜಿಲ್ಲಾ. ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಕೆ.ಆರ್.ಮುರಳೀಧರ್ ಆಗ್ರಹ ವ್ಯಕ್ತ ಪಡಿಸಿದರು.

      ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘವು ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕುಂದು ಕೊರತೆ ಮತ್ತು ಇತರೆ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸರಿಪಡಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಲ್ಲಿ ಕೋರಲಾಗಿತ್ತು. ನಂತರ ಈ ಬಗ್ಗೆ ಎರಡು ಬಾರಿ ಸಭೆ ಕರೆದು ಚರ್ಚ ಮಾಡಿ ಬೇಡಿಕೆಗಳ ಈಡೇರಿಕೆಗೆ ಆಶ್ವಾಸನೆ ನೀಡಲಾಗಿತ್ತು. ಆದರೆ ಇಲ್ಲಿವರೆಗೆ ಭರವಸೆಗಳು ಈಡೇರಿಲ್ಲ ಎಂದು ಆಕ್ರೋಷ ವ್ಯಕ್ತ ಪಡಿಸಿದರು.

      ಅನ್ಯ ಇಲಾಖೆಯ ಕೆಲಸದ ಒತ್ತಡವನ್ನು ನಮ್ಮ ಇಲಾಖೆ ನೌಕರರ ಮೇಲೆ ಹೇರುತ್ತಿರುವುದನ್ನು ತಪ್ಪಿಸಬೇಕು. ರಜಾ ದಿನಗಳಲ್ಲಿ ಕೆಲಸದ ಒತ್ತಡ ಹೇರುವುದನ್ನು ನಿಷೇಧಿಸಬೇಕು. ಸಾರ್ವತ್ರಿಕ ರಜಾದಿನಗಳಲ್ಲೂ ಕೆಲಸ ಮಾಡುವಂತೆ ಒತ್ತಡ ಹೇರುತ್ತಿರುವುದರಿಂದ ಕೌಟುಂಬಿಕ ಕಲಹಗಳು ಉಂಟಾಗುತ್ತಿವೆ. ಇದರಿಂದ ಇಲಾಖಾ ಕೆಲಸ ಕಾರ್ಯ ಮಾಡಲು ಕೂಡ ಕಷ್ಟ ಸಾಧ್ಯವಾಗುತ್ತಿದೆ. ಗ್ರಾಮಲೆಕ್ಕಾಧಿಕಾರಿಗಳ ಪ್ರಯಾಣ ಭತ್ಯೆ ದರವನ್ನು 1000 ರೂಗಳಿಗೆ ಹೆಚ್ಚಿಸಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ತೀರ್ಮಾನಿಸಿದ್ದರು ಹಾಗೂ ರಾಜ್ಯ ಸಂಘವು 1000 ರೂಗಳಿಗೆ ಹೆಚ್ಚಿಸಲು 6ನೇ ವೇತನ ಆಯೋಗಕ್ಕೂ ಮನವಿ ಸಲ್ಲಿಸಿತ್ತು. ಆದರೆ, ಸರಕಾರ ಕೇವಲ 300 ರೂ ನಿಂದ 500 ರೂಗಳಿಗೆ ಮಾತ್ರ ಹೆಚ್ಚಿಸಿದ್ದು, ಅದನ್ನು ಪುನರ್ ಪರಿಶೀಲಿಸಿ 1000 ರೂಗಳಿಗೆ ಹೆಚ್ಚಿಸುವ ಬಗ್ಗೆ ಕ್ರಮವಹಿಸಬೇಕು ಎಂದು ಒತ್ತಾಯಸಿದರು.

      ಪ್ರಧಾನ ಕಾರ್ಯದರ್ಶಿ ಎಂ.ಮಂಜುನಾಥ್ ಮಾತನಾಡಿ, ಗ್ರಾಮಲೆಕ್ಕಾಧಿಕಾರಿಗಳಿಗೆ ಜಾಬ್ ಚಾರ್ಟು ನೀಡುವ ಬಗ್ಗೆ ತೀರ್ಮಾನಿಸಿದ್ದರೂ ಸಹ ಇದುವರೆವಿಗೂ ಪರಿಷ್ಕøತ ಜಾಬ್ ಚಾರ್ಟು ನೀಡಿಲ್ಲ. ಇತ್ತೀಚೆಗೆ ಗ್ರಾಮಲೆಕ್ಕಾಧಿಕಾರಿ ಸಾಹೇಬ ಪಾಟೀಲ್‍ರು ಮರಳುದಂಧೆ ಕೋರರಿಂದ ಲಾರಿ ಹರಿದು ಮೃತರಾಗಿದ್ದು, ಅವರ ಕುಟುಂಬಕ್ಕೆ ವಿಶೇಷ ಪರಹಾರ ಮಂಜೂರು ಮಾಡಿಲ್ಲ. ಕೂಡಲೇ ವಿಶೇಷ ಪರಿಹಾರವಾಗಿ 20 ಲಕ್ಷ ರೂಪಾಯಿ ಬಿಡುಗಡೆ ಮಾಡಬೇಕು. ಗ್ರಾಮಲೆಕ್ಕಿಗರ ಹುದ್ದೆಯನ್ನು ಮೇಲ್ದರ್ಜೆಗೇರಿಸಲು ಕುರಿತು ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕೂಡ ಆ ಕಡತವನ್ನು ಗಾಮಲೆಕ್ಕಾಧಿಕಾರಿಗಳಿಗೆ ಯಾವುದೇ ಕಾರ್ಯಕ್ಷಮತೆ ಇಲ್ಲವೆಂದು 6ನೇ ವೇತನ ಆಯೋಗದ ಸಮಿತಿಯು ತಿರಸ್ಕರಿಸಿದೆ. ಆದ್ದರಿಂದ ಈ ಕಡತವನ್ನು ಪುನಃ ಪರಿಶೀಲನೆ ಮಾಡಬೇಕು ಎಂದರಲ್ಲದೆ, ಸಂಜೆ 6 ಗಂಟೆಯ ನಂತರವೂ ಮಹಿಳಾ ನೌಕರರೊಂದಿಗೆ ಕೆಲಸ ಮಾಡಿಸುವುದು ಸರಿಯಲ್ಲ ಇದನ್ನು ತಪ್ಪಿಸಬೇಕು. ಜೊತೆಗೆ ಕೆಲಸದ ನಿಮಿತ್ತ ಇತರೆ ಪ್ರದೇಶಗಳಿಗೆ ತೆರಳಲು ಇಲಾಖಾ ವತಿಯಿಂದ ಟಿ.ಎ / ಡಿ.ಎ ನೀಡಬೇಕು ಒತ್ತಾಯಿಸಿದ್ದಾರೆ.

      ಗುಂಚಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ಹಾಗೂ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ರಾಕೇಶ್‍ಕುಮಾರ್, ತಮ್ಮ ಆಡಳಿತ ವ್ಯಾಪ್ತಿಯಲ್ಲಿ ಜರುಗಿಸಬಹುದಾದ ಕ್ರಮಗಳನ್ನು ಜರುಗಿಸಿ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ. ಸರ್ಕಾರದ ವ್ಯಾಪ್ತಿಯಲ್ಲಿ ನಡೆಸಬಹುದಾದ ಕೆಲಸ ಕಾರ್ಯಗಳ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.

      ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು, ಜಿಲ್ಲಾ ಗ್ರಾಮ ಲೆಕ್ಕಿಗರ ಸಂಘದ ಖಜಾಂಚಿ ಎಸ್.ದೇವರಾಜು, ಆದಾಯ ನಿರೀಕ್ಷರು ಮಹೇಶ್, ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ 350ಕ್ಕೂ ಹೆಚ್ಚು ಮಹಿಳಾ ನೌಕರರು ಭಾಗವಹಿಸಿದ್ದರು.

(Visited 10 times, 1 visits today)
Previous Articleರಾಜ್ಯ ರೈತ ಸಂಘದಿಂದ ಛೀ..ಥೂ..ಚಳುವಳಿ!
Next Article ತುರುವೇಕೆರೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಧಿಡೀರ್ ಭೇಟಿ
News Desk Benkiyabale

Related Posts

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm news

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm news

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm news
ತಾಜಾ ಸುದ್ಧಿಗಳು
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm
news

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm
news

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm
news

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm
news

ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ

August 17, 2026 5:07 pm
news

ಬೆಂಕಿಗೆ ಸುಟ್ಟು ಬೂದಿಯಾದ ರೇಷ್ಮೆ ಬೆಳೆಗಾರನ ಬದುಕು

August 17, 2026 5:05 pm
Our Youtube Channel
Our Picks

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm

ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ

August 17, 2026 5:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

By News Desk BenkiyabaleAugust 17, 2026 5:14 pm

ತುರುವೇಕೆರೆ: ತಾಲ್ಲೂಕಿನ ಎನ್.ಡಿ.ಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು ಹರಿದಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ…

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.