ಮಧುಗಿರಿ:

     ಅಧಿಕಾರ ಇದ್ದರೂ, ಇಲ್ಲದಿದ್ದರೂ ನಾವು ಎಂದಿಗೂ ಬಡವರ ಪರ ಕೆಲಸ ನಿರ್ವಹಿಸುತ್ತೇವೆ ಎಂದು ರಾಷ್ಟ್ರೀಯ ಕ್ರಿಬ್ಕೋ ನಿರ್ದೇಶಕ ಆರ್. ರಾಜೇಂದ್ರ ತಿಳಿಸಿದರು.

      ಪಟ್ಟಣದ ಎಂ.ಎನ್.ಕೆ ಸಮುದಾಯ ಭವನದಲ್ಲಿ ಶನಿವಾರ ಬಡವರ ಬಂದು ಯೋಜನೆಯಡಿಯಲ್ಲಿ 62 ಜನ ಬೀದಿಬದಿ ವ್ಯಾಪಾರಿಗಳಿಗೆ 6.20 ಲಕ್ಷ ಸಾಲದ ಚೆಕ್ ವಿತರಿಸಿ ಮಾತನಾಡಿದರು. ಲಾಕ್‍ಡೌನ್‍ನಿಂದಾಗಿ ಬೀದಿಬದಿ ವ್ಯಾಪಾರಿಗಳಿಗೆ ಮತ್ತು ಬಡವರಿಗೆ ವ್ಯಾಪಾರ ವಹಿವಾಟು ನಡೆಸಲು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದು, ಸಣ್ಣ ಮತ್ತು ಅತೀ ಸಣ್ಣ ವ್ಯಾಪಾರಿಗಳು ಜೀವನ ನಿರ್ವಹಣೆಗೆ ಸಾಲ ಮಾಡಿ ದಲ್ಲಾಳಿಗಳ ಕೈಗೆ ಸಿಲುಕಿ ತೊಂದರೆ ಅನುಭವಿಸಬಾರದು ಎಂಬ ಉದ್ದೇಶದಿಂದ ಡಿಸಿಸಿ ಬ್ಯಾಂಕಿನ ವತಿಯಿಂದ ಸಾಲ ಸೌಲಭ್ಯ ಕಲಿಸಲಾಗಿದ್ದು, ಈ ಯೋಜನೆಯಡಿಯಲ್ಲಿ 1 ಸಾವಿರದಿಂದ 10 ಸಾವಿರದವರೆಗೆ ಸಾಲ ಸೌಲಭ್ಯ ದೊರೆಯಲಿದೆ. ಇದರ ಸದುಪಯೋಗಪಡಿಸಿಕೊಂಡು ಜೀವನ ರೂಪಿಸಿಕೊಳ್ಳಿ ಎಂದರು.

       ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಎನ್. ಗಂಗಣ್ಣ ಮಾತನಾಡಿ, ಕೆ.ಎನ್. ರಾಜಣ್ಣನವರು ಶಾಸಕರಾಗಿದ್ದ ಅವಧಿಯಲ್ಲಿ ಬಹಳಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಈಗ ತೊಂದರೆಗೀಡಾಗಿರುವ ಸಣ್ಣ ಮತ್ತು ಅತೀ ಸಣ್ಣ ವ್ಯಾಪಾರಿಗಳು ಮತ್ತೆ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂಬ ಉದ್ದೇಶದಿಂದ ಅವರ ನೆರವಿಗೆ ದಾವಿಸಿದ್ದು, ಡಿಸಿಸಿ ಬ್ಯಾಂಕ್ ವತಿಯಿಂದ ಜಿಲ್ಲೆಯ ಪ್ರತೀ ತಾಲೂಕಿನಲ್ಲೂ 1 ಕೋಟಿ ಸಾಲ ಸೌಲಭ್ಯ ವಿತರಿಸುವ ಗುರಿ ಹೊಂದಲಾಗಿದೆ ಎಂದರು.

      ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ. ನಂಜುಂಡಯ್ಯ, ಸದಸ್ಯರಾದ ಮಂಜುನಾಥ್ ಆಚಾರ್, ಲಾಲಾಪೇಟೆ ಮಂಜುನಾಥ್, ತಿಮ್ಮರಾಯಪ್ಪ, ಗಿರಿಜಾ ಮಂಜುನಾಥ್, ತಾ.ಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ, ತುಮುಲ್ ಮಾಜಿ ಅಧ್ಯಕ್ಷ ಬಿ. ನಾಗೇಶ್‍ಬಾಬು, ಮುಖಂಡರಾದ ಎಂ.ಎಸ್. ಶಂಕರನಾರಾಯಣ್, ಎಂ.ಎಸ್. ಮಲ್ಲಿಕಾರ್ಜುನಯ್ಯ, ರಾಜಗೋಪಾಲ್, ಉಮೇಶ್, ಸಾದಿಕ್, ಎಸ್.ಬಿ.ಟಿ ರಾಮು, ಅಲೀಂ, ಅಯೂಬ್, ಆನಂದ್, ತಲ್ಲಿ ಮಂಜಣ್ಣ, ಪಾವಗಡ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಸೀತಾರಾಂ, ವಕೀಲರ ಸಂಘದ ಅಧ್ಯಕ್ಷ ಪಿ.ಸಿ. ಕೃಷ್ಣಾರೆಡ್ಡಿ ಇತರರಿದ್ದರು.

(Visited 10 times, 1 visits today)