ತುಮಕೂರು :

      ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರಿಗೆ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಪ್ರಚಾರ ವಾಹಿನಿ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ಇಂದು ಚಾಲನೆ ನೀಡಿದರು.

      ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಭಾರತೀಯ ರೆಡ್‍ಕ್ರಾಸ್ ಸೊಸೈಟಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಹಯೋಗದಲ್ಲಿ ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

      ಚಾಲನೆ ನೀಡಿದ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಪ್ರಚಾರ ವಾಹಿನಿ ಕಾರ್ಯಕ್ರಮದಲ್ಲಿ ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕು ಹಾಗೂ ಕಾರ್ಮಿಕ ವಲಯಗಳಲ್ಲಿ ಜಾಗೃತಿ ವಾಹನ ಸಂಚರಿಸಿ ಕೊರೋನಾ ವೈರಸ್ ಸೋಂಕು ತಡೆಯುವ ಬಗ್ಗೆ ಪ್ರಚಾರ ಮಾಡುವ ಮೂಲಕ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೊನ ವಂಶಿಕೃಷ್ಣ, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆಯ ಉಪನಿರ್ದೇಶಕ ಪಾರ್ಥಸಾರಥಿ, ಕಾರ್ಮಿಕ ಅಧಿಕಾರಿ ಸುಭಾಷ್ ಎಂ.ಆಲದಕಟ್ಟಿ, ಭಾರತೀಯ ರೆಡ್‍ಕ್ರಾಸ್ ಸೊಸೈಟಿಯ ಪದಾಧಿಕಾರಿಗಳು ಮತ್ತಿತರರು ಹಾಜರಿದ್ದರು.

(Visited 3 times, 1 visits today)