ತುಮಕೂರು:

      ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ 1952 ರಿಂದ 2014ರವರೆಗಿನ ಚುನಾವಣಾ ಹಿನ್ನೋಟ ಕೈಪಿಡಿಯನ್ನು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಬಿಡುಗಡೆ ಮಾಡಿದರು.

      ತಮ್ಮ ಕಚೇರಿಯಲ್ಲಿಂದು ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಏ.18ರಂದು ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮಾಧ್ಯಮ ಮಿತ್ರರಿಗೆ ಅನುಕೂಲವಾಗುವಂತೆ ಈ ಕೈಪಿಡಿಯನ್ನು ತಯಾರಿಸಲಾಗಿದ್ದು, ಕೈಪಿಡಿಯಲ್ಲಿ ಪ್ರಸಕ್ತ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ವಿವರ, 2019ರ ಏ.9ಕ್ಕೆ ಇದ್ದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರವಾರು ಮತದಾರರ ಸಂಖ್ಯೆ, ಮತಗಟ್ಟೆಗಳ ವಿವರದೊಂದಿಗೆ 1952-2014ರವರೆಗಿನ ಲೋಕಸಭಾ ಚುನಾವಣಾ ಅಂಕಿ-ಅಂಶಗಳನ್ನು ನೀಡಲಾಗಿದೆ. ಕೈಪಿಡಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕಿ ಆರ್.ರೂಪಕಲಾ ಅವರು ಸಿದ್ಧಪಡಿಸಿದ್ದು, 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾಧ್ಯಮ ಮಿತ್ರರಿಗೆ ಈ ಕೈಪಿಡಿ ಸದುಪಯೋಗವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.

      ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಅವರು ಕೈಪಿಡಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಚುನಾವಣಾ ಶಾಖೆಯ ಶಿರಸ್ತೇದಾರ ನಾಗಭೂಷಣ್, ವಾರ್ತಾ ಸಹಾಯಕಿ ಆರ್.ರೂಪಕಲಾ ಹಾಗೂ ಕು|| ಸುಜಾತ ಅವರು ಉಪಸ್ಥಿತರಿದ್ದರು.

(Visited 14 times, 1 visits today)