ತುಮಕೂರು

ಕರ್ನಾಟಕ ರತ್ನ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ.ಶ್ರೀ..ಶಿವಕುಮಾರ ಮಹಾಸ್ವಾಮೀಜಿ ಅವರ ೫ನೇ ವರ್ಷದ ಪುಣ್ಯಸ್ಮರಣೆ ಸಂಸ್ಮರಣೋತ್ಸವವನ್ನು ನಾಳೆ ಅಂದರೆ ಜ.೨೧ರಂದು ಬೆಳಿಗ್ಗೆ ೧೧ಕ್ಕೆ ಸಿದ್ಧಗಂಗಾ ಮಠದಲ್ಲಿ ಆಯೋಜಿಸಲಾಗಿದ್ದು, ಸಿಎಂ, ಮಾಜಿ ಸಿಎಂ, ಸಚಿವರು ಸೇರಿ ಹಲವು ಗಣ್ಯರು, ಶ್ರೀಗಳು ಪಾಲ್ಗೊಂಡು ನುಡಿನಮನ ಸಲ್ಲಿಸುವರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿದ್ದಗಂಗಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ನಂಜುAಡಪ್ಪ ಅವರು, ಪೂಜ್ಯ ಡಾ.ಶ್ರೀ.ಶಿವಕುಮಾರಸ್ವಾಮೀಜಿ ಅವರು ಲಿಂಗೈಕ್ಯರಾದ ಜ.೨೧ರ ದಿನವನ್ನು ದಾಸೋಹ ದಿನವನ್ನಾಗಿ ರಾಜ್ಯ ಸರ್ಕಾರ ಆಚರಣೆ ಮಾಡುತ್ತಿದೆ. ಮಠದಿಂದ ಪುಣ್ಯ ಸ್ಮರಣೆ ಕಾರ್ಯಕ್ರಮ ಆಯೋಜಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಸೇರುವ ನಿರೀಕ್ಷೆಯಿದೆ . ಮುಂಜಾನೆಯಿAದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು, ಧಾರ್ಮಿಕ ಕಾರ್ಯಗಳು ನೆರವೇರಲಿದ್ದು, ಶಿವಕುಮಾರ ಸ್ವಾಮೀಜಿ ಪುತ್ಥಳಿಯ ಮೆರವಣಿಗೆ ಮಾಡಲಾಗುತ್ತದೆ. ನಂತರ ವೇದಿಕೆ ಕಾರ್ಯಕ್ರಮ ಇರುತ್ತದೆ ಎಂದರು.
ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ಕಾರ್ಯಕ್ರಮದ ದಿವ್ಯ ನೇತೃತ್ವ ವಹಿಸಲಿದ್ದು, ಗದಗ ಡಂಬಳ ಮಠದ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಅಧ್ಯಕ್ಷರಾದ ಡಾ.ಶ್ರೀ.ತೋಂಟದಸಿದ್ಧರಾಮಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ಸಿದ್ದಗಂಗಾ ಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಉಪಸ್ಥಿತಿರಿರಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭ ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದು ಡಾ.ಶ್ರೀ ಶಿವಕುಮಾರ ಮಹಾ ಸ್ವಾಮೀಜಿ ಆಸ್ಪತ್ರೆಯ ಎಸ್.ಎಂ.ಸಿ.ಆರ್.ಐ ಅನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸುವರು. ಸ್ಮöÈತಿವನವನ್ನು ಸಚಿವ ಈಶ್ವರ್ ಖಂಡ್ರೆ, ಸಿದ್ದಗಂಗಾ ಫಾರ್ಮಸಿ ಕಾಲೇಜು ನೂತನ ಕಟ್ಟಡವನ್ನು ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಲಿದ್ದಾರೆ. ಎಸ್.ಎಂ.ಸಿ.ಆರ್.ಐ ಸ್ನಾತಕೋತ್ತರ ವಿಭಾಗದ ಕಟ್ಟಡ ಶಂಕುಸ್ಥಾಪನೆಯನ್ನು ಸಚಿವ ಎಂ.ಬಿ.ಪಾಟೀಲ್, ವಸತಿ ಗೃಹಗಳ ಕಟ್ಟಡ ಶಂಕುಸ್ಥಾಪನೆಯನ್ನು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್, ಕೃಷಿ ಸಚಿವ ಎನ್. ಚಲುವನಾರಾಯಣಸ್ವಾಮಿ, ಸಂಸದ ಜಿ.ಎಸ್. ಬಸವರಾಜು, ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಎಚ್.ಸಿ.ಬಾಲಕೃಷ್ಣ ಹಾಗೂ ಶ್ರೀನಿವಾಸ್ ಪಾಲ್ಗೊಳ್ಳುವರುಎಂದು ಮಾಹಿತಿ ನೀಡಿದರು.
ಮಠದ ಆಡಳಿತಾಧಿಕಾರಿ ಎಸ್.ವಿಶ್ವನಾಥಯ್ಯ ಮಾತನಾಡಿ, ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು ಬೆಳಗ್ಗೆ ೭ ರಿಂದ ರಾತ್ರಿ ೧೨ ರವರೆಗೆ ದಾಸೋಹದ ವ್ಯವಸ್ಥೆಯನ್ನು ಮಠದ ಆವರಣದಲ್ಲಿ ಮಾಡಲಾಗಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ ಎಂದರು. ಸಿದ್ಧಗಂಗಾ ವಿದ್ಯಾಸಂಸ್ಥೆ ಜಂಟಿ ಕಾರ್ಯದರ್ಶಿ ಹಾಗೂ ಎಸ್‌ಐಟಿಯ ಸಿಇಒ ಡಾ.ಶಿವಕುಮಾರಯ್ಯ, ಅಧಿಕಾರಿ ಮಲ್ಲಿಕಾರ್ಜುನಯ್ಯ ಮತ್ತಿತರರಿದ್ದರು.

(Visited 1 times, 1 visits today)