ಕೊರಟಗೆರೆ


ನಿಮ್ಮ ಆಧಾರ್ ಕಾರ್ಡು ಮನೆಗೆ ಇನ್ನೂ ಬಂದಿಲ್ವಾ.. ಬ್ಯಾಂಕು ಚೇಕ್ ಬುಕ್ ನಿಮ್ಮ ಕೈಗೆ ಇನ್ನೂ ಸೇರಿಲ್ವಾ.. ರಿಜಿಸ್ಟರ್ ಪೋಸ್ಟ್-ಸ್ಪೀಡ್ ಪೋಸ್ಟ್ ಮನೆಗೆ ಬರ್ತಾ ಇಲ್ವಾ.. ಕೆಲಸದ ಆಹ್ವಾನದ ತುರ್ತುಕರೆ ನಿಮಗೇ ಬರೋದೇ ಇಲ್ಲ ಬೀಡಿ.. ಯಾಕೆ ಗೋತ್ತಾ ಮಲ್ಲೇಕಾವು ಅಂಚೆ ಕಚೇರಿಯ ಅಂಚೆ ಪಾಲಕ ಕಳೆದ 45ದಿನಗಳಿಂದ ಕಚೇರಿಗೆ ಬಂದೇ ಇಲ್ವಂತೆ..!!
ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮಲ್ಲೇಕಾವು ಗ್ರಾಮದ ಅಂಚೆ ಕಚೇರಿಯ ಅಂಚೆ ಪಾಲಕ ನಾಗೇಂದ್ರ ಎಂಬಾತ ಕಳೆದ 45ದಿನಗಳಿಂದ ಕತ್ಯವ್ಯಕ್ಕೆ ಗೈರುಹಾಜರಿ. ಹತ್ತಾರು ಗ್ರಾಮಗಳಿಗೆ ತುರ್ತುಸೇವೆ ನೀಡಬೇಕಾದ ಅಂಚೆ ಪಾಲಕ ನಾಗೇಂದ್ರ ಕರ್ತವ್ಯಕ್ಕೆ ಗೈರಾಗಿ ನೂರಾರು ಸಮಸ್ಯೆಗಳು ಸೃಷ್ಟಿಯಾಗಿವೆ.
ಬ್ಯಾಂಕು ಚೇಕ್, ಆಧಾರ್ ಕಾರ್ಡು, ಕೋರ್ಟ್ ನೊಟೀಸ್, ಎಟಿಎಂ ಕಾರ್ಡು, ರೇಷನ್‍ಕಾರ್ಡು, ಎಲ್‍ಐಸಿ ಬಾಂಡ್, ರಿಜೀಸ್ಟರ್ ಪೊಸ್ಟ್, ಸ್ಪೀಡ್ ಪೋಸ್ಟ್, ಜಾಬ್ ನೊಟೀಸ್, ಕೂರೀಯರ್, ಪಾರ್ಸಲ್‍ಗಳು ಹತ್ತಾರು ಗ್ರಾಮದ ನೂರಾರು ಜನ ಗ್ರಾಹಕರ ಕೈಸೇರದೇ ಕಳೆದ 45ದಿನಗಳಿಂದ ಮಲ್ಲೇಕಾವು ಅಂಚೆ ಕಚೇರಿಯಲ್ಲಿ ಧೂಳು ಹಿಡಿಯುತ್ತೀದ್ದು ಕರ್ತವ್ಯಲೋಪ ಪ್ರಶ್ನಿಸುವ ಅಂಚೆ ನಿರೀಕ್ಷಕರು ನಿರ್ಲಕ್ಷ ವಹಿಸಿದ್ದಾರೆ.
ಅಂಚೆ ಪಾಲಕ ಕಚೇರಿಗೆ ಬರೋದೆ ಇಲ್ವಂತೆ..
ಮಲ್ಲೇಕಾವು ಅಂಚೆ ಇಲಾಖೆಯ ಅಂಚೆ ಪಾಲಕನ ತಂದೆಯ ಕೆಲಸವನ್ನು ಮಗ ನಾಗೇಂದ್ರನಿಗೆ ನೀಡಲಾಗಿದೆ. ನಾಗೇಂದ್ರ ತನ್ನ ಕೆಲಸವನ್ನೇ ಮರೆತು ಸಂಬಳ ಪಡೆಯುವುದಕ್ಕೇ ಮಾತ್ರ ಸೀಮಿತ ಆಗಿದ್ದಾರೆ. ಅಂಚೆ ಇಲಾಖೆಯ ದಾಖಲೆಗಳು ತನ್ನ ಮನೆಯಲ್ಲಿಯೇ ಶೇಖರಣೆ ಮಾಡಿ ಕೊಂಡಿರುವ ಆರೋಪವು ಸಹ ಇದೆ. 30ದಿನದ ಹಿಂದೆಯೇ ತನಿಖೆ ನಡೆಸಿರುವ ಅಂಚೆ ನಿರೀಕ್ಷಕ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಪರಿಣಾಮ ಸಮಸ್ಯೆಯು ದ್ವೀಗುಣವಾಗಿದೆ.
ಮಲ್ಲೇಕಾವು ಅಂಚೆ ಉಪಕಚೇರಿಯ ಚನ್ನರಾಯನದುರ್ಗ, ಬೇಂಡೋಣಿ, ಮಲ್ಲೇಕಾವು, ಗೌರಿಗಲ್ಲು, ದೊಗ್ಗನಹಳ್ಳಿ, ಹಂಚಿಮಾರನಹಳ್ಳಿ ಸೇರಿದಂತೆ ಹತ್ತಾರು ಗ್ರಾಮಗಳಿಗೆ ತುರ್ತುಸೇವೆ ನೀಡಬೇಕಾದ ಇಲಾಖೆಯು ಮೌನಕ್ಕೆ ಶರಣಾಗಿದೆ. ಅಂಚೆ ಆಯುಕ್ತರು ಮತ್ತು ಜಿಲ್ಲಾ ಅಧಿಕ್ಷಕರು ಕೊರಟಗೆರೆ ಅಂಚೆ ನಿರೀಕ್ಷಕ ಹರ್ಷ ಮತ್ತು ಮಲ್ಲೇಕಾವು ಅಂಚೆ ಪಾಲಕ ನಾಗೇಂದ್ರ ಮೇಲೆ ಕರ್ತವ್ಯಲೋಪದ ಅಡಿಯಲ್ಲಿ ತುರ್ತು ಕ್ರಮ ಕೈಗೊಳ್ಳಬೇಕಿದೆ.

(Visited 1 times, 1 visits today)