ತುಮಕೂರು


ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಯಾವುದೇ ಬಾಲ್ಯ ವಿವಾಹ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಗೌರವಾನ್ವಿತ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ನೂರುನ್ನೀಸಾ ಅವರು ಕರೆ ನೀಡಿದರು.
ಮಧುವೆಯಾಗಬೇಕಾದರೆ ಹೆಣ್ಣಿಗೆ 18 ವರ್ಷ ಹಾಗೂ ಗಂಡಿಗೆ 21ವರ್ಷ ಪೂರ್ಣಗೊಂಡಿರತಕ್ಕದ್ದು. ಮೂಢನಂಬಿಕೆ ಹಾಗೂ ಶಿಕ್ಷಣದ ಕೊರತೆ ಬಾಲ್ಯ ವಿವಾಹಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಹಯೋಗದಲ್ಲಿ ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಕುರಿತು ನಿಷೇದಾಧಿಕಾರಿಗಳಿಗೆ ಕ್ರಮಬದ್ಧ ಕಾರ್ಯವಿಧಾನ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಅಂಜಲಿ ರಾಮಣ್ಣ ಅವರು ಮಾತನಾಡುತ್ತಾ, ಬಾಲ್ಯ ವಿವಾಹ ನಿಷೇಧ ಕಾಯ್ದೆಯ ನಿಷೇದಾಧಿಕಾರಿಗಳು ಪರಸ್ಪರ ಸಹಕಾರ ಮತ್ತು ಸಮನ್ವಯತೆ ಸಾಧಿಸಿ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಹಾಗೂ ಅದರ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವಂತೆ ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ರಕ್ಷಣಾಧಿಕಾರಿ ಪವಿತ್ರಾ ಆರ್. ಜೆ. ಅವರು ಸ್ವಾಗತಿಸಿದರು. ಉಪನಿರ್ದೇಶಕರಾದ ಶ್ರೀಧರ್, ಕಾರ್ಮಿಕ ಇಲಾಖೆ ಅಧಿಕಾರಿ ರಮೇಶ್, ಡಿಡಿಪಿಐ ರಂಗಧಾಮಪ್ಪ, ನಂದಕುಮಾರ್, ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

(Visited 1 times, 1 visits today)