ತುಮಕೂರು


ವಿವಾದಗಳನ್ನು ಸೌಹಾರ್ದಯುತವಾಗಿ
ಬಗೆಹರಿಸಿಕೊಳ್ಳಲು ಲೋಕ್ ಅದಾಲತ್ ಒಂದು ಉತ್ತಮ ಅವಕಾಶವಾಗಿದ್ದು, ಜಿಲ್ಲೆಯ ಕಕ್ಷಿದಾರರು ಇದರ ಸದುಪಯೋಗ ಪಡೆದು, ಪ್ರಕರಣಗಳಿಂದ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಬೇಕು ಹಾಗೂ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೀತಾ ಕೆ.ಬಿ. ಅವರು ತಿಳಿಸಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನವೆಂಬರ್ 12ರಂದು ತುಮಕೂರು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯದ ಲೋಕ ಅದಾಲತ್ ಆಯೋಜಿಸಲಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಅಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥ ಪಡಿಸಿಕೊಳ್ಳಬಹುದು ಇದರಿಂದ ಪಕ್ಷಗಾರರ ಮಧ್ಯದಲ್ಲಿರುವ ವೈಮನಸ್ಸು ಕಡಿಮೆಯಾಗಿ ಸೌಹಾರ್ದತೆ ಹೆಚ್ಚಾಗುತ್ತದೆ. ಇದರಿಂದ ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ, ಇರುವಂತಹ ಕಾನೂನಿನ ಸಂಕಿರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ನೀಡಿ ನ್ಯಾಯಾಲಯಗಳಲ್ಲಿ ಚಾಲ್ತಿರುವಂತಹ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ.
“ಸರ್ವರಿಗೂ ನ್ಯಾಯ” ಎಂಬುದು ಭಾರತದ ಕಾನೂನು ಸೇವೆಗಳ ಧ್ಯೇಯವಾಗಿದೆ. ಯಾವೊಬ್ಬ ಪ್ರಜೆಯು ತನ್ನ ಅರ್ಥಿಕ ಅಥವಾ ಇತರೆ ದೌರ್ಬಲ್ಯಗಳ ಕಾರಣಗಳಿಂದಾಗಿ ನ್ಯಾಯ ಪಡೆಯುವುದರಿಂದ ವಂಚಿತನಾಗಬಾರದೆಂದು, ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಸಮಾಜದ ದುರ್ಬಲ ವರ್ಗಗಳಿಗೆ ಅತೀ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ಒದಗಿಸುವ ಸಲುವಾಗಿ, ಸಮಾನ ಅವಕಾಶಗಳ ಆಧಾರದ ಮೇಲೆ ನ್ಯಾಯಾಂಗ ವ್ಯವಸ್ಥೆ ಕಾರ್ಯ ನಿರ್ವಹಿಸಿ ನ್ಯಾಂiÀi ಒದಗಿಸುವ ಶ್ರೇಷ್ಠ ಉದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ ಎಂದರು.
ಸದರಿ ರಾಷ್ಟ್ರೀಯ ಲೋಕ್ ಆದಾಲತ್‍ನಲ್ಲಿ ಎಲ್ಲಾ ರೀತಿಯ ರಾಜಿಯಾಗಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನೂ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿದ್ದು, ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ರಾಜ್ಯ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣ, ಕಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಅಕ್ರಮ ಮರಳು ಸಾಗಣೆ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣ ಪ್ರಕರಣ, ಕಾರ್ಮಿಕರ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ
ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ಸಾರ್ವಜನಿಕರ ಉಪಯುಕ್ತತೆ ಸೇವೆಗಳಿಗೆ ಸಂಬಂಧಿಸಿದ ಪ್ರಕರಣ, ಕಂದಾಯ ಪ್ರಕರಣಗಳು (ಜಿಲ್ಲಾ ಹಾಗೂ ಉಚ್ಚ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ) ಸಿವಿಲ್ ಪ್ರಕರಣಗಳು (ಬಾಡಿಗೆ, ಅನುಭೋಗದ ಹಕ್ಕುಗಳು ನಿಬರ್ಂಧಕಾಜ್ಞೆ ದಾವೆಗಳು ಹಾಗೂ ಇತರೆ ದಾವೆಗಳು) ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣ ಹಾಗೂ ವಿಚ್ಛೇದನ ಹೊರತುಪಡಿಸಿ ವೈವಾಹಿಕ ಮತ್ತು ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು
ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.
ಪ್ರತೀ ದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ನಡೆಯುತ್ತಲಿವೆ. ಮಾಹಿತಿಗಾಗಿ ಪ್ರಾಧಿಕಾರಕ್ಕೆ ಮತ್ತು ಕಾನೂನು ಸೇವಾ ಸಮಿತಿಗಳಿಗೆ ಈ ಮೇಲ್ ವಿಳಾಸ: ಜಟsಚಿಣumಞuಡಿ1@gmಚಿiಟ.ಛಿom ಅನ್ನು ಮತ್ತು ಸದಸ್ಯ ಕಾರ್ಯದರ್ಶಿಯವರ ಕಛೇರಿ ದೂರವಾಣಿ ಸಂಖ್ಯೆ 08162255133 ಮತ್ತು 9483899033 ಅನ್ನು ಸಂಪರ್ಕಿಸಬಹುದು, ಖುದ್ದು ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಚಿತ ಸಹಾಯವಾಣಿ:1800-425-90900ಗೆ ಸಂಪರ್ಕಿಸಬಹುದು, ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ನೂರುನ್ನೀಸ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು, ಮತ್ತಿತರು ಉಪಸ್ಥಿತರಿದ್ದರು.

(Visited 2 times, 1 visits today)