ತುಮಕೂರು:

      ಇದೇ ಜನವರಿ 5 ಮತ್ತು 6 ರಂದು ಏರ್ಪಡಿಸಿರುವ “ಸಾವಯವ ಸಿರಿಧಾನ್ಯ ಮೇಳ”ದಲ್ಲಿ ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳದ ಪ್ರಯೋಜನ ಪಡೆಯಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋರಿದರು.

       ಸಾವಯವ ಸಿರಿಧಾನ್ಯ ಮೇಳದ ಅಂಗವಾಗಿ ಇಂದು ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಿಂದ ಸಿರಿಧಾನ್ಯ ಮೇಳದ ಪ್ರಚಾರದ ಬಗ್ಗೆ ಏರ್ಪಡಿಸಿದ್ದ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

      ಜಾಥಾವು ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಿಂದ ಎಸ್.ಎಸ್.ಪುರಂ ಮುಖ್ಯ ರಸ್ತೆ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ಸಾಗಿತು. ಜಾಥಾದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಉಪಕೃಷಿ ನಿರ್ದೇಶಕರು, ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಲೀಡ್ ಬ್ಯಾಂಕ್ ಮ್ಯಾನೇಜರ್, ನಿರ್ಮಿತಿ ಕೇಂದ್ರದ ಅಭಿಯಂತರರು, ಇತರೆ ಇಲಾಖಾಧಿಕಾರಿಗಳು ಸೇರಿದಂತೆ ಸಾವಯವ ರೈತರು, ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.

(Visited 35 times, 1 visits today)