ತುಮಕೂರು:

      ಸ್ಮಾರ್ಟ್ ಸಿಟಿ ಕಾಮಗಾರಿಗಳು ಚಾಲನೆಗೆ ಬಂದು ವರ್ಷಗಳೇ ಕಳೆದಿದ್ದರೂ ಸಹ ನಗರದಲ್ಲಿ ಕೈಗೊಂಡಿರುವ ಅವೈಜ್ಞಾನಿಕ ಕಾಮಗಾರಿಗಳು ತುಂಬಾ ವಿಳಂಬವಾಗಿ ಸಾಗುತ್ತಿರುವುದು ನಗರದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು, ಗುತ್ತಿಗೆ ಪಡೆದಿರುವವರು ಇಡೀ ನಗರವನ್ನೇ ಧೂಳುಮಯವಾಗಿಸಿದ್ದಾರೆಂದು ಆರೋಪಿಸಿ ಜಯ ಕರ್ನಾಟಕ ತುಮಕೂರು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

      ನಗರದಲ್ಲಿ ಸಂಚರಿಸುವವರಿಗೆ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ವ್ಯವಹಾರ ಮಾಡುತ್ತಿರುವವರು ತೀವ್ರ ಸ್ವರೂಪದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇಂದಿನ ಆಧುನಿಕ ತಂತ್ರಜ್ಞಾನದ ಯಂತ್ರೋಪಕರಣಗಳನ್ನು ಉಪಯೋಗಿಸಿ ಅತಿ ಶೀಘ್ರವಾಗಿ ಮುಗಿಸಬಹುದಾದ ಕಾಮಗಾರಿಗಳನ್ನು ಸಹ ಗುತ್ತಿಗೆ ಪಡೆದಿರುವವರು ವರ್ಷಾನುಗಟ್ಟಲೆ ವಿಳಂಬ ಮಾಡುತ್ತಾ ಮುಂದುವರೆಸಿಕೊಂಡು ಬಂದಿರುವುದು ಈ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿರುವ ಸಂಶಯವನ್ನು ಮೂಡಿಸುತ್ತದೆ.

      ಆದ್ದರಿಂದ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಅತಿ ಶೀಘ್ರವಾಗಿ ಕಾಮಗಾರಿ ಮುಗಿಸುವ ಗುತ್ತಿಗೆದಾರರಿಗೆ ಟೆಂಡರ್ ನೀಡುವುದರ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲಗಳನ್ನು ತಪ್ಪಿಸಬೇಕೆಂದು ಜಯ ಕರ್ನಾಟಕ ಘಟಕದ ಜಿಲ್ಲಾಧ್ಯಕ್ಷ ಸಿ.ಪಿ.ಸುಧೀರ್, ಉಪಾಧ್ಯಕ್ಷ ಗಿರೀಶ್‍ಗೌಡ, ಅನಿಲ್ ನಾಯಕ್, ತಿಮ್ಮರಾಜು, ಮುತ್ತುರಾಜು, ಮಹಿಳಾ ಜಿಲ್ಲಾಧ್ಯಕ್ಷೆ ಯಸ್ಮಿನ್ ತಾಜ್, ಗೌರವಾಧ್ಯಕ್ಷೆ ಮಂಜುಳ, ಆಟೋ ಘಟಕದ ದಾದಾಪೀರ್, ಶಿವು ಸೇರಿದಂತೆ ಮುಂತಾದವರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

(Visited 13 times, 1 visits today)