ಹುಳಿಯಾರು:

     ಹುಳಿಯಾರು ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದ್ದು ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಇವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

      ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ಬಿಡಾಡಿ ನಾಯಿಗಳು ಉಪಟಳದಿಂದ ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿವೆ.

      ಐಬಿ ರಸ್ತೆ, ಮಸೀದಿ ರಸ್ತೆಗಳಲ್ಲಿ ಮಾಂಸ ದಂಗಡಿಗಳು ಇವೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳು ಕಾಣಿಸುತ್ತವೆ. ಅಂಗಡಿದಾರರು ಸಾರ್ವಜನಿಕ ಸ್ಥಳ, ಕಸದ ತೊಟ್ಟಿಯಲ್ಲಿ ಮಾಂಸದ ತ್ಯಾಜ್ಯ ಹಾಕುವುದರಿಂದ ನಾಯಿಗಳು ಚೆಲ್ಲಾಟ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

      ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಈ ಹಿಂದೆ ಸ್ಥಳೀಯರು ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಪಟ್ಟಣದ ಅನೇಕ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಈಗಲಾದರೂ ಅಧಿಕಾರಿಗಳು ನಾಯಿಗಳನ್ನು ಹಿಡಿಸುವ ಅಥವ ಸಂತಾನ ಹರಣ ಚಿಕಿತ್ಸೆ ಮಾಡಿಸುವ ಮೂಲಕ ನಿಯಂತ್ರಣ ಮಾಡಬೇಕೆಂದು ಒತ್ತಾಯಿಸಿದ್ದಾರೆ.

(Visited 9 times, 1 visits today)