ತುಮಕೂರು : ತಂಬಾಕು ಕಾರ್ಯಚರಣೆಯಿಂದ 1200 ದಂಡ ಸಂಗ್ರಹ!!

ತುಮಕೂರು:

      ಕೋವಿಡ್-19 ನಿಯಂತ್ರಣ ಸಲುವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತುಮಕೂರು ನಗರದಲ್ಲಿ ಕಾರ್ಯಾಚರಣೆ ನಡೆಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವರ ಹಾಗೂ ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುತ್ತಿದ್ದವರ ವಿರುದ್ಧ ಒಟ್ಟು 9 ಪ್ರಕರಣಗಳನ್ನು ದಾಖಲಿಸಿ 1200 ರೂ. ದಂಡ ವಸೂಲಿ ಮಾಡಲಾಗಿದೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸಲಹೆಗಾರರಾದ ರವಿಪ್ರಕಾಶ. ಎಂ.ಆರ್ ತಿಳಿಸಿದ್ದಾರೆ.

       ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ತಂಬಾಕು, ಪಾನ್ ಮಸಾಲ, ಜರ್ದಾ, ಚೈನಿ, ಇತ್ಯಾದಿಗಳನ್ನು ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನಿಮೋನಿಯ ಮತ್ತು ಕೋವಿಡ್-19 ವೈರಸ್‍ಗಳು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‍ಗಳು ಮಾನವನ ದೇಹವನ್ನು ಪ್ರವೇಶಿಸಿ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಂಭವವಿದೆ.

      ಕೋವಿಡ್-19 ಹರಡದಂತೆ ಮಾನ್ಯ ಜಿಲ್ಲಾಧಿಕಾರಿಗಳ ಆದೇಶವನ್ನು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಪಾಲಿಸಬೇಕು ಎಂದು ಮನವಿ ಮಾಡಿದರಲ್ಲದೇ ಮುಂದಿನ ದಿನಗಳಲ್ಲಿ ಈ ಕುರಿತಂತೆ ಹೆಚ್ಚಿನ ನಿಗಾವಹಿಸಲಿದ್ದು, ಕಾನೂನು ಉಲ್ಲಂಘಿಸುವವರು ಕಂಡು ಬಂದಲ್ಲಿ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

(Visited 18 times, 1 visits today)

Related posts

Leave a Comment