ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾದ ಯೂಸೆಮೈಟ್ ನ್ಯಾಶ್ನಲ್ ಪಾರ್ಕ್ ಎಂಬಲ್ಲಿ 800 ಅಡಿ ಎತ್ತರದಿಂದ ಬಿದ್ದು ಭಾರತೀಯ ದಂಪತಿ ಸಾವನ್ನಪ್ಪಿದ ಘಟನೆ ಅ.25 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕ್ಯಾಲಿಫೋರ್ನಿಯಾದ ಯೋಸೆಮೈಟ್ ನ್ಯಾಷನಲ್ ಪಾರ್ಕ್ನಲ್ಲಿ ಆಕ್ಟೋಬರ್ 25 ರಂದು ವಿಷ್ಣು ವಿಶ್ವನಾಥ್ (29) ಮತ್ತು ಪತ್ನಿ ಮೀನಾಕ್ಷಿ ಮೂರ್ತಿ (30) ಅವರು 800 ಅಡಿ ಆಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ. ದಂಪತಿಗಳ ಶವ ಮೊದಲೇ ಸಿಕ್ಕಿದ್ದರೂ ಅವರನ್ನು ಗುರುತಿಸುವುದಕ್ಕೆ ಬಹಳ ಸಮಯ ಹಿಡಿದಿತ್ತು. ಅವರ ಶವಗಳನ್ನು ಸೋಮವಾರ ಮೇಲಕ್ಕೆತ್ತಿ ಗುರುತು ಪತ್ತೆ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ. ಸಿಸ್ಕೊ ಸಂಸ್ಥೆಯಲ್ಲಿ ಸಿಸ್ಟಮ್ ಇಂಜಿನಿಯರ್ ಆಗಿ ಕೆಲಸ ಸಿಕ್ಕಮೇಲೆ ಮೃತ ದಂಪತಿ ನ್ಯೂಯಾರ್ಕ್ನಿಂದ ಅಮೆರಿಕಕ್ಕೆ ತೆರಳಿದ್ದರು ಎನ್ನಲಾಗಿದ್ದು, ಈ ದಂಪತಿಗೆ ವಿಶ್ವ ಸುತ್ತುವ…
ಮುಂದೆ ಓದಿ...Day: October 30, 2018
ಗಾಂಜ ವಶ: ಆರೋಪಿ ಬಂಧನ
ಹುಳಿಯಾರು: ಹಂದನಕೆರೆ ಹೋಬಳಿ ಡಗ್ಗೇನಹಳ್ಳಿ ಗ್ರಾಮದ ಕೃಷಿ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 12.7 ಕೆಜಿ ಗಾಂಜಾವನ್ನು ಹಂದನಕೆರೆ ಪೊಲೀಸರು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಮಂಜುನಾಥ್ ಬಂಧಿತ ಆರೋಪಿ. ದಗ್ಗೇನಹಳ್ಳಿ ಗ್ರಾಮದ ಸರ್ವೆ ನಂ. 28ರ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದಾರೆ ಎಂದು ಹಂದನಕೆರೆ ಪೊಲೀಸ್ ಮೋಹನ್ ಹಾಗೂ ಕಿರಣ್ ಗಸ್ತು ತಿರುಗುತ್ತಿದ್ದಾಗ ಖಚಿತ ಪಡಿಸಿಕೊಂಡು ಸಿಪಿಐ ಎ.ಸುರೇಶ್ ಅವರಿಗೆ ಮಾಹಿತಿ ನೀಡಿದ ಬಳಿಕ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಮುಂದೆ ಓದಿ...ಸಮುದ್ರಕ್ಕೆ ವಿಮಾನ ಪತನ: 189 ಪ್ರಯಾಣಿಕರೂ ಜಲಸಮಾಧಿ
ಜಕಾರ್ತಾ : ಇಂಡೋನೇಷ್ಯಾದ ಲಯನ್ ಏರ್ ಸಂಸ್ಥೆಗೆ ಸೇರಿದ ವಿಮಾನ ಪತನಗೊಂಡು ಸಮುದ್ರಕ್ಕೆ ಬಿದ್ದ ಪರಿಣಾಮ ಭಾರತದ ಪೈಲಟ್ ಭವ್ಯೇ ಸುನೇಜಾ ಸಹಿತ 188 ಮಂದಿ ಪ್ರಯಾಣಿಕರು ಅಸುನೀಗಿದ್ದಾರೆ. ಲಯನ್ ಏರ್ ನ JT610 ವಿಮಾನದಲ್ಲಿದ್ದ ಯಾರೊಬ್ಬರು ಬದುಕುಳಿದಿರುವ ಸಾಧ್ಯತೆ ಇಲ್ಲ. ಅದು ಹೊಸ ಬೋಯಿಂಗ್ 737 MAX8 ವಿಮಾನವಾಗಿದ್ದು, ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಗಳ ಪ್ರಕಾರ, ಅಪಘಾತ ಸಂಭವಿಸಿದ ಕಡಲ ಪ್ರದೇಶದಿಂದ ಹದಿನೈದು ಕಿ.ಮೀ. ದೂರಕ್ಕೆ ಮಾನವ ಅವಶೇಷಗಳು ದೊರೆತಿವೆ. ಸಮುದ್ರಕ್ಕೆ ವಿಮಾನ ಅಪ್ಪಳಿಸಿ ಸುಮಾರು 30-40 ಮೀಟರ್ ಆಳಕ್ಕೆ ಪ್ರವೇಶಿಸಿರಬಹುದು ಎಂದು ಅಂದಾಜಿಸಲಾಗಿದೆ. ವಿಮಾನದಲ್ಲಿ ಐವರು ಸಿಬಂದಿ, ಇಬ್ಬರು ಪೈಲಟ್ಗಳು, 178 ಮಂದಿ ಪ್ರಯಾಣಿಕರು, ಒಂದು ಮಗು, ಎರಡು ಶಿಶುಗಳು ಇದ್ದವು ಎಂದು ಇಂಡೋನೇಷ್ಯಾ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯದ ನಿರ್ದೇಶಕ…
ಮುಂದೆ ಓದಿ...ಬೆಂಗಳೂರಿಗೆ ಶೀಘ್ರ ತಟ್ಟಲಿದೆ ಆಟೋ ಪ್ರಯಾಣ ದರ ಬಿಸಿ
ಬೆಂಗಳೂರು: ರಾಜಧಾನಿ ಬೆಂಗಳೂರಿಗರಿಗೆ ಶೀಘ್ರ ಆಟೋ ಪ್ರಯಾಣ ದರ ಏರಿಕೆಯ ಬಿಸಿ ತಟ್ಟಲಿದೆ. ಆಟೋ ಪ್ರಯಾಣ ದರ ಏರಿಕೆ ಮಾಡುವ ಕುರಿತು ಪ್ರಸ್ತಾಪ ಕೇಳಿಬಂದಿದೆ. ಒಂದೆಡೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬಿಸಿ ಜನರಿಗೆ ತಟ್ಟಿದ್ದರೆ, ಮತ್ತೊಂದೆಡೆ ಆಟೋ ಪ್ರಯಾಣ ದರ ಏರಿಕೆಯ ಕಾವು ಸಹ ತಟ್ಟಲು ದಿನಗಣನೆ ಆರಂಭಗೊಂಡಿದೆ. ಕೆಜಿ ರಸ್ತೆಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಹಾಗೂ ರಸ್ತೆ ಸುರಕ್ಷತಾ ಸಮಿತಿಗಳ ಸಭೆಯಲ್ಲಿ ಆಟೋ ಪ್ರಯಾಣದ ದರ ಏರಿಕೆ ಕುರಿತಾಗಿ ಡಿಸಿ ವಿಜಯಶಂಕರ್ ಜತೆ ಆಟೋ ಚಾಲಕರ ಸಂಘದವರು ಸಭೆ ನಡೆಸಿದರು. ದಿನಬಳಕೆ ವಸ್ತುಗಳು, ಎಲ್ ಪಿ ಜಿ ದರ, ಆಟೋ ರಿಕ್ಷಾ ಬೆಲೆ, ವಿಮೆ, ಬಿಡಿಭಾಗಗಳ ದರ ಹೆಚ್ಚಳಾದ ಕಾರಣ…
ಮುಂದೆ ಓದಿ...ಫ್ಲೈ ಓವರ್ ಮೇಲೆ ಇನೋವಾ ಕಾರು ಪಲ್ಟಿ ;ಟ್ರಾಫಿಕ್ ಜಾಮ್
ಬೆಂಗಳೂರು: ನಗರದ ಹೆಬ್ಬಾಳ ಫ್ಲೈ ಓವರ್ನಲ್ಲಿ ಓವರ್ಟೇಕ್ ಮಾಡುತ್ತಿದ್ದ ವೇಳೆ ಇನೋವಾ ಕಾರೊಂದು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಅವಘಡದಲ್ಲಿ ಗಾಯಗೊಂಡ ಓರ್ವನ ಸ್ಥಿತಿ ಗಂಭೀರವಾಗಿದೆ. ಕಾರಿನಲ್ಲಿ ದೇವನಹಳ್ಳಿ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಘಟನೆಯ ಬಳಿಕ ಹೆಬ್ಬಾಳ ಮೇಲ್ಸೇತುವೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕಾಗಮಿಸಿದ ಹೆಬ್ಬಾಳ ಸಂಚಾರಿ ಠಾಣೆಯ ಪೊಲೀಸರು ಟ್ರಾಫಿಕ್ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.
ಮುಂದೆ ಓದಿ...ಸಿಎಂ ವಿರುದ್ಧ #MeToo ಆರೋಪ!!
ಶಿವಮೊಗ್ಗ: ಕುಮಾರಸ್ವಾಮಿ ತಮ್ಮಕುಟುಂಬದಲ್ಲಿ ರಾಜಕಾರಣ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕುಮಾರ್ ಬಂಗಾರಪ್ಪ, ಕುಮಾರಸ್ವಾಮಿಯವರು ಎಚ್ಚರದಿಂದ ಇರಬೇಕು ಮುಂದಿನ ದಿನಗಳಲ್ಲಿ ಅವರ ವಿರುದ್ಧವೂ ಮಿಟೂ ಬಾಂಬ್ ಸಿಡಿಯುವ ಸಾಧ್ಯತೆ ಇದೆ ಹೊಸ ಬಾಂಬ್ ಸಿಡಿಸಿದ್ದಾರೆ. ಅವರು ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು, ಸಿಎಂ ಕುಮಾರಸ್ವಾಮಿ ಅವರು ಸೊರಬಕ್ಕೆ ಬಂದಾಗ ನನ್ನನ್ನೇ ಟಾರ್ಗೆಟ್ ಮಾಡಿ ಮಾತನಾಡಿದ್ದಾರೆ. ಸುಳ್ಳಿಗೆ ಯಾವಾಗಲೂ ಸಾಕ್ಷಿ, ಆಧಾರ ಇರುವುದಿಲ್ಲ. ನನ್ನ ಬಗ್ಗೆ ಮಾತನಾಡಿದರೆ ನಿಮ್ಮ ಬಗ್ಗೆ ಸಾಕ್ಷಿ ಸಮೇತ ನಾನು ಮಾತನಾಡುತ್ತೇನೆ. ಇನ್ನೂ ಹೆಚ್ಚು ಮಾತನಾಡಿದರೆ ಮೀ ಟೂದಲ್ಲಿ ನಿಮ್ಮ ಹೆಸರು ಪ್ರಸ್ತಾಪವಾಗಬಹುದು ಎಂದು ಎಚ್ಚರಿಕೆ ನೀಡಿದರು. ಸಿಎಂ ಕುಮಾರಸ್ವಾಮಿ ಕುರಿತಾದ ಬೇಕಾದಷ್ಟು ಸಾಕ್ಷಿಗಳು ಸಾಮಾಜಿಕ ಜಾಲತಾಣದಲ್ಲಿ ಲಿಂಕ್ ಆಗಿವೆ. ಹುಟ್ಟುಹಬ್ಬ ಆಚರಣೆ ಮಾಡಿರುವುದು, ಮತ್ತೊಂದು ಮಾಡಿರುವುದು, ತಲೆಮರೆಸಿಕೊಂಡಿರುವುದು ಸಾಕಷ್ಟು ಲಿಂಕ್ಗಳು ಸಿಗುತ್ತವೆ. ನಿಮ್ಮ ಕುಟುಂಬ…
ಮುಂದೆ ಓದಿ...ರಾಹುಲ್ ವಿರುದ್ಧ ಕ್ರಿಮಿನಲ್ ಮಾನಹಾನಿ ಮೊಕದ್ದಮೆ
ಭೋಪಾಲ್ : ಪನಾಮಾ ಪೇಪರ್ಸ್ ಹಗರಣದಲ್ಲಿ ತನ್ನ ಹೆಸರು ಎಳೆದು ತಂದಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ್ ಚೌಹಾಣ್ ಇಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ನಡುವೆ ರಾಹುಲ್ ಗಾಂಧಿ ಅವರು ತಾನು ಚೌಹಾಣ್ ಅವರ ಪುತ್ರನ ಹೆಸರನ್ನು ಪನಾಮಾ ಪೇಪರ್ ಹಗರಣ ಸಂಬಂಧ ಉಲ್ಲೇಖಸಿರುವುದು ತನ್ನಲ್ಲಿನ ಗೊಂದಲದ ಪರಿಣಾಮವಾಗಿದೆ ಎಂದು ಹೇಳಿದ್ದಾರೆ. “ಸೋಮವಾರ ರ್ಯಾಲಿಯೊಂದನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್, ಸಿಎಂ ಪುತ್ರನ ಹೆಸರು ಸೋರಿಕೆಯಾದ ಪನಾಮಾ ಪೇಪರ್ಸ್ನಲ್ಲಿ ಉಲ್ಲೇಖಗೊಂಡಿತ್ತು ಎಂದಿದ್ದರು. ಇದು ಕ್ರಿಮಿನಲ್ ಉದ್ದೇಶ ಹೊಂದಿದ ಆಕ್ಷೇಪಾರ್ಹ ಹೇಳಿಕೆ” ಎಂದು ಕಾರ್ತಿಕೇಯ್ ವಕೀಲ ಎಸ್ ಶ್ರೀವಾಸ್ತವ ಹೇಳಿದ್ದಾರೆ. ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಹಲವಾರು ಹಗರಣಗಳೊಂದಿಗೆ ಥಳುಕು…
ಮುಂದೆ ಓದಿ...