ಲಕ್ಷ ಕೋಟಿ ದಾಟಿದ ಜಿಎಸ್​ಟಿ ಸಂಗ್ರಹ

ನವದೆಹಲಿ:       ಅಕ್ಟೋಬರ್​ನಲ್ಲಿ ಒಟ್ಟು 67.45 ಲಕ್ಷ ವ್ಯಾಪಾರಸ್ಥರು ಜಿಎಸ್​ಟಿ ರಿಟರ್ನ್ಸ್ ಸಲ್ಲಿಸಿದ್ದು, 1,00,710 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ಗುರುವಾರ ಹೇಳಿದೆ.       ತೆರಿಗೆ ವಂಚನೆಗೆ ಅಂಕುಶ, ಹಲವು ವಸ್ತುಗಳ ತೆರಿಗೆ ಇಳಿಕೆ, ದೇಶಾದ್ಯಂತ ಏಕ ತೆರಿಗೆ ಜತೆಗೆ ಅಧಿಕಾರಿಗಳ ಹಸ್ತಕ್ಷೇಪಕ್ಕೆ ಲಗಾಮು ಹಾಕಲಾದ ಕಾರಣ ಜಿಎಸ್​ಟಿ ಸಂಗ್ರಹ ಕೋಟಿ ಲಕ್ಷ ದಾಟಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಟ್ವೀಟ್ ಮಾಡಿದ್ದಾರೆ.         ಒಟ್ಟಾರೆ ಜಿಎಸ್​ಟಿ ಸಂಗ್ರಹದಲ್ಲಿ ಕೇರಳ ಅಸಾಧಾರಣ ಬೆಳವಣಿಗೆ (ಶೇ. 44) ದಾಖಲಿಸಿದೆ. ರಾಜಸ್ಥಾನದಲ್ಲಿ ಸಂಗ್ರಹ ಶೇ. 14 ಏರಿಕೆ ಕಂಡರೆ, ಉತ್ತರಾಖಂಡದಲ್ಲಿ ಶೇ. 13 ಮತ್ತು ಮಹಾರಾಷ್ಟ್ರದಲ್ಲಿ ಶೇ. 11 ಹೆಚ್ಚಿನ ತೆರಿಗೆ ಸಂಗ್ರಹವಾಗಿದೆ. ಲಕ್ಷ ಕೋಟಿ ರೂ. ಜಿಎಸ್​ಟಿಯಲ್ಲಿ ಕೇಂದ್ರ ತೆರಿಗೆ 16,464 ಕೋಟಿ ರೂ., ರಾಜ್ಯ…

ಮುಂದೆ ಓದಿ...

ಆನ್‌ಲೈನ್ ಮದ್ಯ ಮಾರಾಟ ನಿಷೇಧ..!?

ಬೆಂಗಳೂರು:       ರಾಜ್ಯದಲ್ಲಿ ಆನ್‌ಲೈನ್ ಮದ್ಯ ಮಾರಾಟವನ್ನು ಶೀಘ್ರವೇ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.       ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಧಿಕಾರ ಸ್ವೀಕರಿಸುವ ಮುಂಚೆ, ಹಿಂದಿನ ಸರ್ಕಾರ ಆನ್‌ಲೈನ್‌ ಮದ್ಯ ಮಾರಾಟಕ್ಕೆ ಅನುಮತಿ ನೀಡಿತ್ತು. ಈ ಅದನ್ನು ನಿಲ್ಲಿಸುವಂತೆ ಸೂಚಿಸಿದ್ದೇನೆ. ಹಿಂದೆ ಅನುಮತಿ ಕೊಟ್ಟಿರುವ ಫೈಲ್‌ ಹಿಡಿದು ಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಫೈಲ್ ಪರಿಶೀಲಿಸಿ ಆನ್‍ಲೈನ್ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.       ಆನ್‌ಲೈನ್ ಮದ್ಯ ಮಾರಾಟವನ್ನು ಅಧಿಕಾರಿಗಳು ಜಾರಿಗೊಳಿಸಿದ್ದಾರೆ . ಇದು ನನ್ನ ಗಮನಕ್ಕೆ ಬರುತ್ತಿದ್ದಂತೆಯೇ ಅದನ್ನು ನಿಲ್ಲಿಸಲು ಸೂಚನೆ ನೀಡಿದ್ದೇನೆ, ಯಾವ ಗುತ್ತಿಗೆದಾರರಿಗೆ ಲಾಭ ಮಾಡಿಕೊಡುಬ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದೆ ಓದಿ...

ರಾಮನಗರ ಚುನಾವಣೆ : ಮತಯಂತ್ರದಲ್ಲಿ ಇರಲಿದೆ ಎಲ್.ಚಂದ್ರಶೇಖರ್ ಹೆಸರು

ರಾಮನಗರ :       ರಾಮನಗರ ಕ್ಷೇತ್ರದ ಉಪ ಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಹಿಂದೆ ಸರಿದಿದ್ದಾರೆ. ಆದರೆ, ಎಲೆಕ್ಟ್ರಾನಿಕ್ ವೋಟಿಂಗ್ ಮಿಷಿನ್‌ನಲ್ಲಿ ಅವರ ಹೆಸರು ಇರುತ್ತದೆ.       ಗುರುವಾರ ನಡೆದ ಮಹತ್ವದ ಬೆಳವಣಿಗೆಯಲ್ಲಿ ಎಲ್.ಚಂದ್ರಶೇಖರ್ ಕಣದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದರು. ನವೆಂಬರ್ 3ರ ಶನಿವಾರ ರಾಮನಗರ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯಲಿದೆ.       ಎಲ್.ಚಂದ್ರಶೇಖರ್ ಅವರು ಕಣದಿಂದ ಹಿಂದೆ ಸರಿದರೂ ಅವರ ಹೆಸರು ಮತಯಂತ್ರದಲ್ಲಿ ಇರಲಿದೆ. ಹಿಂದೆಯೂ ಈ ರೀತಿಯ ಹಲವಾರು ಪ್ರಕರಣಗಳು ನಡೆದಿವೆ ಎಂದು ಚುನಾವಣಾ ಆಯೋಗ ಹೇಳಿದೆ. ನಾಮಪತ್ರ ವಾಪಸ್ ಪಡೆಯಲು ನಿಗದಿ ಪಡಿಸಿದ ಕೊನೆಯ ದಿನಾಂಕದ ನಂತರ ಉಳಿಯುವ ಎಲ್ಲಾ ಅಭ್ಯರ್ಥಿಗಳ ಹೆಸರು ಮತಯಂತ್ರದಲ್ಲಿ ಇರಲಿದೆ.        ಕೆಲವು ಬಿಜೆಪಿ ಕಾರ್ಯಕರ್ತರು ಅಭ್ಯರ್ಥಿ ಇಲ್ಲದಿದ್ದರೂ ಮತವನ್ನು ಬಿಜೆಪಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ.…

ಮುಂದೆ ಓದಿ...

ಪುಷ್ಪಾ ಅಮರ್​ನಾಥ್​ಗೆ ಒಲಿದ ಮಹಿಳಾ ಕಾಂಗ್ರೆಸ್​ ಅಧ್ಯಕ್ಷ ಸ್ಥಾನ

ಬೆಂಗಳೂರು:       ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೊಕ್ ನೀಡಲಾಗಿದ್ದು, ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಸ್ಥಾನಕ್ಕೆ ನೂತನವಾಗಿ ಪುಷ್ಟ ಅಮರನಾಥ್ ಅವರು ನೇಮಕವಾಗಿದ್ದಾರೆ.       ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮ ಪಾಲಿಸಿರುವ ಕಾಂಗ್ರೆಸ್​ ಪಕ್ಷ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಬಳಿಯಿದ್ದ ರಾಜ್ಯ ಮಹಿಳಾ ಕಾಂಗ್ರೆಸ್​ನ ಅಧ್ಯಕ್ಷ ಸ್ಥಾನವನ್ನು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಷ್ಪಾ ಅಮರನಾಥ್​ ಅವರಿಗೆ ವಹಿಸಿದೆ.        ಪುಷ್ಪಾ ಅವರು ಮೈಸೂರು ನಗರದವರಾಗಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಸಿದ್ದರಾಮಯ್ಯ ಅವರ ಬೆಂಬಲಿಗರಾಗಿ ಇವರು ಗುರುತಿಸಿಕೊಂಡಿದ್ದರು.        ಇದರಿಂದಾಗಿ ಬೆಳಗಾವಿ ರಾಜಕಾರಣದಲ್ಲಿ ಜಾರಕಿಹೊಳಿ ಸಹೋದರರ ಮೇಲುಗೈ ಆಗಿದೆ.  

ಮುಂದೆ ಓದಿ...

ಪ್ರೀತಿಸಿದ್ದ ಅಪ್ರಾಪ್ತ ಪ್ರೇಮಿಗಳಿಬ್ಬರು ನೇಣಿಗೆ ಶರಣು?

ತುಮಕೂರು:        ಅಪ್ರಾಪ್ತ ಪ್ರೇಮಿಗಳಿಬ್ಬರು ನೇಣಿಗೆ ಶರಣಾದ ಘಟನೆ ಮಧುಗಿರಿ ತಾಲೂಕಿನ ಸುದ್ದೇಗುಂಟೆ ಗ್ರಾಮದ ಹೊರವಲಯದಲ್ಲಿ ಗುರುವಾರ ನಡೆದಿದೆ.       ಸಂದೇಶ್(17), ಮೀನಾಕ್ಷಿ(17) ಮೃತ ಪ್ರೇಮಿಗಳು. ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕುಟುಂಬದವರಿಗೆ ಹೆದರಿ ಗ್ರಾಮದ ಹೊರಭಾಗದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು‌ ಶಂಕಿಸಲಾಗಿದೆ.       ಘಟನಾ ಸ್ಥಳಕ್ಕೆ ಕೊಡಿಗೇನಹಳ್ಳಿ ಪಿಎಸ್ಐ ಮೋಹನ್ ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಮುಂದೆ ಓದಿ...

ಬಯಲು ಬಹಿರ್ದೆಸೆ ಮುಕ್ತ ರಾಜ್ಯ: 62ಲಕ್ಷ ಶೌಚಾಲಯ ನಿರ್ಮಾಣದ ಗುರಿ

 ತುಮಕೂರು:       ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸಲು ಒಟ್ಟು 65ಲಕ್ಷ ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಲಾಗಿತ್ತು. ಈ ಪೈಕಿ 47ಲಕ್ಷ ಶೌಚಾಲಯ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಆಯುಕ್ತ ಡಾ: ವಿಶಾಲ್ ಆರ್. ತಿಳಿಸಿದರು.       ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿ ಸಹಯೋಗದಲ್ಲಿ ನಗರದ ಬಿರ್ಲಾ ಆಡಿಟೋರಿಯಂನಲ್ಲಿಂದು ಸ್ವಚ್ಛಭಾರತ ಮಿಷನ್ ಯೋಜನೆಯಡಿ ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆ ಕುರಿತು ಅರಿವು ಮೂಡಿಸುವ ಸಲುವಾಗಿ ಜನಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ 65ಲಕ್ಷ ಶೌಚಾಲಯಗಳನ್ನು ನಿರ್ಮಿಸುವ ಗುರಿಯನ್ನು ಮರು ಪರಿಶೀಲಿಸಿ ಅಂತಿಮವಾಗಿ 47ಲಕ್ಷ ಶೌಚಾಲಯಗಳ ನಿರ್ಮಾಣಕ್ಕೆ ಮಾತ್ರ ಇಲಾಖೆಯಿಂದ ಮಂಜೂರಾತಿ ನೀಡಲಾಗಿದೆ. ಇದರಲ್ಲಿ 10ಲಕ್ಷ ಶೌಚಾಲಯಗಳನ್ನು ವಿವಿಧ ಯೋಜನೆಗಳಡಿ ನಿರ್ಮಾಣ ಮಾಡಲಾಗಿದೆ. ಉಳಿದ…

ಮುಂದೆ ಓದಿ...