ಭದ್ರತಾ ಪಡೆಗಳ ಬೇಟೆಗೆ ಇಬ್ಬರು ಭಯೋತ್ಪಾದಕರು ಬಲಿ

ಶ್ರೀನಗರ:        ತಡ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಹಿಝ್‌ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು ಶನಿವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಗೆ ಬಲಿಯಾಗಿದ್ದಾರೆ.        ಖುಡ್ಪೋರಾದಲ್ಲಿ ಭಯೋತ್ಪಾದಕರು ಅಡಗಿದ್ದಾರೆಂದು ದೊರೆತ ವರ್ತಮಾನದ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿತ್ತು.       ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು. ಆಗ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಇಬ್ಬರು ಭಯೋತ್ಪಾದಕರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಇಬ್ಬರು ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ. ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳನ್ನು ಗುರಿಯಗಿಸಿ ಗುಂಡಿನ ದಾಳಿ ನಡೆಸಿದ ಭಯೋತ್ಪಾದಕರು ತನ್ನ ಸಾವನ್ನು ತಾವೇ ತಂದುಕೊಂಡಿದ್ದಾರೆ.       ಮೃತಪಟ್ಟವರನ್ನು ಮುಹಮ್ಮದ್ ಇರ್ಫಾನ್ ಬಟ್ ಮತ್ತು ಶಾಹೀದ್…

ಮುಂದೆ ಓದಿ...

ಉಪ ಚುನಾವಣೆ : ಶೇ 65.57 ರಷ್ಟು ಮತದಾನ

ಬೆಂಗಳೂರು :       5 ಕ್ಷೇತ್ರಗಳ ಉಪ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. 3 ಲೋಕಸಭಾ ಕ್ಷೇತ್ರ ಮತ್ತು 2 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 65.57ರಷ್ಟು ಮತದಾನ ನಡೆದಿದೆ.       ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನವೆಂಬರ್ 3ರ ಶನಿವಾರ ನಡೆಯಿತು. ಶಾಂತಿಯುತವಾಗಿ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.       ಜಮಖಂಡಿಯಲ್ಲಿ ಅತಿ ಹೆಚ್ಚು ಅಂದರೆ 81.58 ಮತ್ತು ಮಂಡ್ಯದಲ್ಲಿ ಅತಿ ಕಡಿಮೆ ಎಂದರೆ 53.93 ರಷ್ಟು ಮತದಾನವಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಈಗ ಯಾರು ಗೆಲ್ಲುತ್ತಾರೆ?, ಎಷ್ಟು ಮತಗಳ ಅಂತರದಲ್ಲಿ ಗೆಲ್ಲುತ್ತಾರೆ? ಎಂದು ಲೆಕ್ಕಾಚಾರ ಆರಂಭವಾಗಿದೆ. ಮತದಾನದ ವಿವರ : ಜಮಖಂಡಿ ವಿಧಾನಸಭಾ ಕ್ಷೇತ್ರ – 81.58  ರಾಮನಗರ ವಿಧಾನಸಭಾ ಕ್ಷೇತ್ರ – 73.71…

ಮುಂದೆ ಓದಿ...

ಶ್ರೀರಾಮ ಪ್ರತಿಮೆ ಸ್ಥಾಪನೆಗೆ ಮುಂದಾದ ಯೋಗಿ ಸರ್ಕಾರ

ಲಕ್ನೋ:       ಅಯೋಧ್ಯೆಯ ಸರಯೂ ನದಿ ತೀರದಲ್ಲಿ ಶ್ರೀರಾಮಚಂದ್ರನ ಪ್ರತಿಮೆ ಸ್ಥಾಪಿಸಲು ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ.       ಸುಮಾರು 151 ಮೀಟರ್​ ಎತ್ತರದ ಪ್ರತಿಮೆ ನಿರ್ಮಾಣ ಮಾಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ಹೇಳಿದ್ದಾರೆ. ಸಂತ ತುಳಸೀದಾಸ್ ಘಾಟ್ ಬಳಿ ಸುಮಾರು 330 ಕೋಟಿ ರು ವೆಚ್ಚದಲ್ಲಿ 151 ಮೀಟರ್ ಎತ್ತರದ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ, ದೀಪಾವಳಿ ಸಂದರ್ಭದಲ್ಲಿ ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಅವರು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಅಯೋಧ್ಯ ನಗರದ ಮೇಯರ್ ಋಷಿಕೇಶ್ ಉಪಾಧ್ಯಾಯ್ ಅವರು ಹೇಳಿದ್ದಾರೆ.       ‘ಈ ಬಾರಿ ದೀಪವಾಳಿಗೆ ರಾಮನಿಗಾಗಿ ದೀಪ ಬೆಳಗುತ್ತೇವೆ. ಕೆಲಸ ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ. ದೀಪಾವಳಿ ನಂತರ ಈ ಕಾರ್ಯ ಆರಂಭವಾಗಲಿದೆ,” ಎಂದು ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.      

ಮುಂದೆ ಓದಿ...