ಸಿಎಂ ಕುಮಾರಸ್ವಾಮಿ ಜನ್ಮದಿನದಂದು 70 ಲಕ್ಷ ಮೌಲ್ಯದ ಕ್ರೀಡಾ ಸಾಮಗ್ರಿಗಳ ವಿತರಣೆ : ಡಿ ಸಿ ಗೌರೀಶಂಕರ್

ತುಮಕೂರು:

      ತುಮಕೂರು-ಗ್ರಾಮಾಂತರ ಕ್ಷೇತ್ರವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳಿಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನ್ಮದಿನದಂದು 70 ಲಕ್ಷ ಮೌಲ್ಯದ ಕ್ರೀಡಾ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸುವುದಾಗಿ ಗ್ರಾಮಾಂತರ ಶಾಸಕ ಡಿ ಸಿ ಗೌರೀಶಂಕರ್ ತಿಳಿಸಿದರು.

      ಅವರು ಶುಕ್ರವಾರದಂದು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಗೂಳೂರು ಜಿಲ್ಲಾಪಂಚಾಯ್ತಿ ವ್ಯಾಪ್ತಿಯ ಅರೆಯೂರು,
ದೊಮ್ಮನಕುಪ್ಪೆ,  ಗೊಲ್ಲರಹಟ್ಟಿ, ರೈತರ ಪಾಳ್ಯ ಗ್ರಾಮಗಳಲ್ಲಿ ಅಂಗನವಾಡಿ ಕಟ್ಟಡನಿರ್ಮಾಣಕ್ಕೆ ಶಂಕುಸ್ತಾಪನೆ. ಹರಳೂರು, ಗುಡಿಪಾಲಸಂದ್ರಗ್ರಾಮಗಳಲ್ಲಿ ಸಿ ಸಿ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಗೂಳಹರಿವೆ,ಕೆ ಪಾಲಸಂದ್ರ,ಕಿತ್ತಗಾನಹಳ್ಳಿ,ಕರಡಿಗೆರೆ ಕಾವಲ್ ಸರ್ಕಾರಿಶಾಲಾ ಮಕ್ಕಳಿಗೆ ಸೈಕಲ್ ವಿತರಣೆ, ದೊಮ್ಮನಕುಪ್ಪೆ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.

      ಮುಂದಿನ ತಿಂಗಳು ಡಿಸೆಂಬರ್ 16 ರಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನ್ಮದಿನವಿದ್ದು ಅಂದು ಗ್ರಾಮಾಂತರ ಜೆಡಿಎಸ್ ಕಾರ್ಯಕರ್ತರು ಹಾಗು ನಾನು ವೈಯಕ್ತಿಕವಾಗಿ ದೇಣಿಗೆ ಹಾಕಿ ಗ್ರಾಮಾಂತರಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳಿಗೆ 70 ಲಕ್ಷ ಮೌಲ್ಯದ ಕ್ರೀಡಾ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲು ನಿರ್ಧರಿಸಿರುವುದಾಗಿ ತಿಳಿಸಿದರು.

      ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜಾರಿಗೆ ತಂದ ಸೈಕಲ್ ವಿತರರಿಸುವ ಯೋಜನೆ ಗ್ರಾಮೀಣ ವಿಧ್ಯಾರ್ಥಿಗಳಿಗೆ ವರದಾನವಾಗಿದೆ,ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಆರೋಗ್ಯವೂ ಲಭಿಸುತ್ತಿದೆ ,ಗ್ರಾಮೀಣ ಭಾಗದಲ್ಲಿ ಶಿಕ್ಷಣದಿಂದ ವಂಚಿತವಾಗುತ್ತಿದ್ದ ಲಕ್ಷಾಂತರ ಮಕ್ಕಳಿಗೆ ಈ ಯೋಜನೆ ದಾರಿ ದೀಪವಾಗಿದೆ ಎಂದು ಸ್ಮರಿಸಿದರು.

      ಜಿಲ್ಲೆಯ ಫಲಿತಾಂಶಕ್ಕೆ ಹೋಲಿಸಿದರೆ ಗ್ರಾಮಾಂತರ ಕ್ಷೇತ್ರದ ಸರ್ಕಾರಿ ಶಾಲೆಗಳು ಪಲಿತಾಂಶದಲ್ಲಿ ಮುಂಚೂಣಿಯಲ್ಲಿವೆ ,ಇನ್ನು ಮುಂದೆ ಸರ್ಕಾರಿ ಶಾಲೆಯಲ್ಲಿ ಕಲಿತು ಕನ್ನಡ ಭಾಷೆಯಲ್ಲಿ 125 ಕ್ಕೆ 125 ಅಂಕ ಪಡೆಯುವ ವಿಧ್ಯಾರ್ಥಿಗಳಿಗೆ ವೈಯಕ್ತಿಕವಾಗಿ 25000 ಪ್ರೋತ್ಸಾಹಧನ, ಇತರ ಭಾಷೆಗಳಲ್ಲಿ 100 ಕ್ಕೆ 100 ಅಂಕ ಪಡೆಯುವ ವಿಧ್ಯಾರ್ಥಿಗಳಿಗೆ 5000 ಪ್ರೋತ್ಸಾಹ ಧನ ನೀಡುವುದಾಗಿ ಇದೇ ವೇಳೆ ಘೋಷಿಸಿದರು.

 

(Visited 9 times, 1 visits today)

Related posts

Leave a Comment