ಪ್ರೇಮಿಗಳ ಏಕಾಂತದ ವಿಡಿಯೋ ಮಾಡಿ ಬ್ಲಾಕ್​ಮೇಲ್ : ಆತ್ಮಹತ್ಯೆಗೆ ಶರಣು!

ಶಿವಮೊಗ್ಗ:        ಪ್ರೇಮಿಗಳಿಬ್ಬರು ಒಟ್ಟಿಗೆ ಇದ್ದ ಅಶ್ಲೀಲ ವಿಡಿಯೋ ಇಟ್ಟುಕೊಂಡು ಕಿಡಿಗೇಡಿಗಳು ಬ್ಲಾಕ್​ಮೇಲ್ ಮಾಡಿದ್ದಕ್ಕೆ ಹೆದರಿ ವಿಷ ಸೇವಿಸಿದ್ದ ಪ್ರೇಮಿಗಳ ಪೈಕಿ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದು ಯುವತಿ ಸ್ಥಿತಿ ಗಂಭೀರವಾಗಿದೆ.       ಹೊಸೂರು ಮಟ್ಟಿಯ ನಿವಾಸಿ ಸಂಜಯ್ ಕಳೆದ ಒಂದು ವರ್ಷದಿಂದ ರಾಗಿಹೊಸಹಳ್ಳಿಯ ಯುವತಿ ಪ್ರೀತಿಸುತ್ತಿದ್ದರು. ಪ್ರೇಮಿಗಳಿಬ್ಬರು ಏಕಾಂತದಲ್ಲಿದ್ದಾಗ ಆಯನೂರು ಗ್ರಾಮದ ಕೆಲ ಯುವಕರು ವಿಡಿಯೋ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಂಜಯ್‍ಗೆ ಪದೇ ಪದೇ ಕರೆ ಮಾಡಿ, ಐದು ಲಕ್ಷ ಹಣ ಕೊಡುವಂತೆ ಬೇಡಿಕೆ ಇಟ್ಟು, ಹಣ ನೀಡಲು ನಿರಾಕರಿಸಿದರೆ ವಿಡಿಯೋವನ್ನು ವಾಟ್ಸಪ್, ಫೇಸ್ ಬುಕ್‍ಗೆ ಹಾಕುತ್ತೇವೆ ಎಂದು ಬೆದರಿಸಿದ್ದಾರೆ.        ಬೆದರಿಕೆಯಿಂದ ಬೇಸತ್ತಿದ್ದ ಪ್ರೇಮಿಗಳಿಬ್ಬರು ಸೋಮವಾರದಂದು ಕುಂಸಿ ಸಮೀಪದ ಮಂಡಘಟ್ಟದ ಹೊಲದಲ್ಲಿ ಒಟ್ಟಿಗೆ ವಿಷ ಸೇವಿಸಿದ್ದರು. ಇದನ್ನು ನೋಡಿದ ಸ್ಥಳೀಯರು ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.…

ಮುಂದೆ ಓದಿ...

ಅನ್ಯಜಾತಿ ವಿವಾಹ : ಭಾವನನ್ನೇ ಕೊಂದ ಭಾಮೈದ..!

ದೇವನಹಳ್ಳಿ:             ತನ್ನ ಅಕ್ಕನನ್ನೇ ಪ್ರೀತಿಸಿ ಮದುವೆಯಾಗಿದ್ದ ಅನ್ಯ ಜಾತಿಯ ಸ್ನೇಹಿತನನ್ನು  ಯುವಕನೊಬ್ಬ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.       ಗ್ರಾಮದ ಸೊಸೈಟಿ ಪಕ್ಕದಲ್ಲಿರುವ ಹೂವಿನ ತೋಟದಲ್ಲಿ ಮುಚ್ಚಿನಿಂದ ಕೊಚ್ಚಿಹಾಕಲಾಗಿದ್ದ ಶವ ಪತ್ತೆಯಾಗಿದೆ. ಮೃತನನ್ನು ಹರೀಶ್​ ಎಂದು ಗುರುತಿಸಲಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಹರೀಶ್​ನನ್ನು  ಜಾತಿ  ಕಾರಣದಿಂದಲೇ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹರೀಶ್​ ಸ್ನೇಹಿತನೇ ಆದ ನವೀನ್​ ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಚನ್ನರಾಯಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಪ್ರಕರಣ ಹಿನ್ನೆಲೆ:       ಬಿದಲೂರು ಗ್ರಾಮದ ಹರೀಶ ಹಾಗೂ ನಲ್ಲೂರು ಗ್ರಾಮದ ನವೀನ್​ ಇಬ್ಬರೂ ಸ್ನೇಹಿತರು. ನವೀನ್​ನ ಅಕ್ಕಳನ್ನು ಹರೀಶ್ ಪ್ರೀತಿಸುತ್ತಿದ್ದ. ಇವರಿಬ್ಬರ ಪ್ರೀತಿಯ ವಿಷಯ ಹುಡುಗಿ ಮನೆಗೆ ತಿಳಿಯಿತು. ಅನ್ಯ ಜಾತಿ ಹುಡುಗನಾಗಿದ್ದರಿಂದ ಮದುವೆಗೆ ಹುಡುಗಿಯ…

ಮುಂದೆ ಓದಿ...

ರೈತರ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆ ಇಲ್ಲ: ಡಿಸಿಎಂ

ತುಮಕೂರು:       ಕಬ್ಬು ಬೆಳೆಗಾರರ ಸಮಸ್ಯೆಗೆ ಕೇಂದ್ರ ಸರ್ಕಾರವೂ ಸ್ಪಂದಿಸಬೇಕಿದೆ. ಆದರೆ ರೈತರ ಸಮಸ್ಯೆ ಹೊತ್ತು ಕೇಂದ್ರಕ್ಕೆ ಹೋದಾಗ ಯಾವುದೇ ರೀತಿಯಲ್ಲೂ ಸ್ಪಂದಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ಆರೋಪಿಸಿದರು.       ನಗರದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬಿನ ದರ ಕೇಂದ್ರ ಸರ್ಕಾರ ನಿಗದಿಪಡಿಸುವುದರಿಂದ ಅವರು ಸಹ ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಬೇಕಿದೆ. ಆದರೆ ತಮಗೂಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂಬಂತೆ ಕೇಂದ್ರ ವರ್ತಿಸುತ್ತಿದೆ. ಹೀಗಿರುವಾಗ ರಾಜ್ಯ ಬಿಜೆಪಿ ನಾಯಕರಿಗೆ ರೈತರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು.       ರಾಜ್ಯ ಬಿಜೆಪಿ ನಾಯಕರು ರಾಜಕೀಯಕ್ಕಾಗಿ ರೈತರ ಪರವಾಗಿ ಮಾತನಾಡುತ್ತಾರೆ. ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿ ನೋಡಿದರೆ ಇವಱ್ಯಾರಿಗೂ ರೈತರ ಪರವಾದ ಕಾಳಜಿ ಇಲ್ಲದಿರುವುದು ಕಂಡು ಬರುತ್ತದೆ ಎಂದರು       ಕೇಂದ್ರ ಸರ್ಕಾರ ನಿಗದಿಪಡಿಸುವ ಕಬ್ಬಿನ ಎಫ್.ಆರ್.ಪಿ. ಬೆಲೆ…

ಮುಂದೆ ಓದಿ...

ಪ್ರವಾದಿಗಳ ಶಾಂತಿಯ ಸಂದೇಶ ಇಂದಿಗೂ ಪ್ರಸ್ತುತ: ಡಾ.ಜಿ.ಪರಮೇಶ್ವರ್

ತುಮಕೂರು:       ಕ್ರಿಶ್ತಪೂರ್ವ 571ರಲ್ಲಿ ಪ್ರವಾದಿ ಮಹಮದ್ ಪೈಗಂಬರ್ ಅವರು ಪ್ರಪಂಚದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾರಿದ ಶಾಂತಿಯ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.       ನಗರದ ಬಾರ್‍ಲೈನ್ ರಸ್ತೆಯ ಮೆಕ್ಕಾ ಮಸೀದಿಯಲ್ಲಿ ಆಯೋಜಿಸಿದ್ದ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಅಲ್ಲಾಹನ ಪ್ರತಿನಿಧಿಯಾಗಿ ಧರೆಗೆ ಬಂದು, ಮನುಕುಲದ ಸಮಸ್ಯೆಗಳಿಗೆ ತತ್ವ ಸಂದೇಶಗಳ ಮೂಲಕ ಪರಿಹಾರವನ್ನು ಸೂಚಿಸಿದ್ದಾರೆ.ಪ್ರವಾದಿಗಳು ಬೋಧಿಸಿದ ಪರಿಹಾರ ಸೂತ್ರಗಳು ಮುಸ್ಲಿಂ ಸಮುದಾಯಕ್ಕೆ ಸಿಮೀತವಲ್ಲ. ಇಡೀ ಮನುಕುಲಕ್ಕೆ ಸೇರಿದ್ದು.ಅಂದು ಅವರು ಬೋಧಿಸಿದ ಪರಿಹಾರ ಸೂತ್ರಗಳನ್ನು ಪಾಲಿಸುವ ಮೂಲಕ ನಾವೆಲ್ಲರೂ ಸಹೋದರ ರಂತೆ ಬಾಳಬೇಕಾಗಿದೆ ಎಂದರು.        ಇಂದು ಶಾಂತಿಯ ಸಂದೇಶಗಳ ದೃಷ್ಠಿಕೋನ ಬದಲಾಗಿದೆ.ದೇಶ,ದೇಶಗಳ ನಡುವೆ ದ್ವೇಷ,ಅಸೂಯೆಗಳು ತುಂಬಿ ತುಳುಕುತಿದ್ದು, ಕಂದಕಗಳು ಸೃಷ್ಟಿಯಾಗಿವೆ.ಪ್ರವಾದಿಗಳ ಶಾಂತಿ ಮತ್ತು ನೆಮ್ಮದಿಯ…

ಮುಂದೆ ಓದಿ...

ರೈತ ಮಹಿಳೆಯನ್ನು ಅವಮಾನಿಸಿದ ಮುಖ್ಯಮಂತ್ರಿ ರಾಜೀನಾಮೆ ನೀಡಲಿ : ಶಾಸಕ ಜಿ.ಬಿ. ಜ್ಯೋತಿಗಣೇಶ್

ತುಮಕೂರು:        ರೈತ ಮಹಿಳೆಯ ಚಾರಿತ್ರ್ಯವನ್ನು ಪ್ರಶ್ನಿಸಿದ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ನೈತಿಕತೆ ಇದ್ದರೆ ಅವರು ಮೊದಲು ರಾಜಿನಾಮೆ ನೀಡಲಿ ಎಂದು ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್‍ರವರು ಕಿಡಿ ಕಾರಿದ್ದಾರೆ.       ಅವರು ಬಿ.ಜೆ.ಪಿಯಿಂದ ತುಮಕೂರು ಟೌನ್ ಹಾಲ್ ಸರ್ಕಲ್‍ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತ ನಾಡುತ್ತಾ ಕಬ್ಬು ಬೆಳೆಗಾರರ ಹಣವನ್ನು ಕೊಡಿಸುವಂತೆ ಒತ್ತಾಯಿಸಿ ಬೆಳಗಾವಿಯ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಿದ ರೈತ ಮಹಿಳೆಯ ಮೇಲೆ ತಮ್ಮ ಪೌರುಷದ ಮಾತನಾಡಿರುವುದು ಖಂಡನೀಯ ಇದನ್ನು ಭಾರತೀಯ ಜನತಾ ಪಾರ್ಟಿ ಖಂಡಿಸುತ್ತದೆ ಎಂದು ಕಿಡಿಕಾರಿದರು.       ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಶಿವಪ್ರಸಾದ್ ಮಾತನಾಡಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಸುಳ್ಳು ಭರವಸೆ ನೀಡುವ ಡೋಂಗಿ…

ಮುಂದೆ ಓದಿ...