ಜಿಲ್ಲಾಸ್ಪತ್ರೆಗೆ ಡಿಸಿಎಂ ಭೇಟಿ: ಕರಡಿ ದಾಳಿಗೆ ಒಳಗಾದ ಗಾಯಾಳುಗಳ ಆರೋಗ್ಯ ವಿಚಾರಣೆ

 ತುಮಕೂರು:       ನಗರದ ಜಿಲ್ಲಾಸ್ಪತ್ರೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಇಂದು ಭೇಟಿ ನೀಡಿ ಕರಡಿ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.       ಹೂ ಬಿಡಿಸುವ ವೇಳೆ ಕರಡಿ ದಾಳಿಗೆ ಒಳಗಾಗಿ ತೀವ್ರ ಸ್ವರೂಪದ ಗಾಯಗಳಾಗಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಸಮೀಪದ ಸೂರನಹಳ್ಳಿ ಗ್ರಾಮದ ಕರೀಂಸಾಬ್ ಮತ್ತು ರೇಣುಕಮ್ಮ ಅವರನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಗಾಯಾಳುಗಳನ್ನು ಮಾತನಾಡಿಸಿ ಸಾಂತ್ವನ ಹೇಳಿದರು.       ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಬಳಿ ಮಾತನಾಡಿದ ಡಾ. ಜಿ. ಪರಮೇಶ್ವರ್ ಅವರು ಕರಡಿ ದಾಳಿ ನಡೆದ ಬಗ್ಗೆ ಮಾಹಿತಿ ಪಡೆದುಕೊಂಡು, ಧೈರ್ಯದಿಂದ ಇರುವಂತೆ ಹೇಳಿ, ಸರ್ಕಾರದಿಂದ ನೀಡುವ 20 ಸಾವಿರ ರೂ.ಗಳನ್ನು ಸಂತ್ರಸ್ತರ ಬ್ಯಾಂಕ್ ಖಾತೆ ಆರ್‌ಟಿಜಿಎಸ್ ಮಾಡುವ…

ಮುಂದೆ ಓದಿ...

ಜೇಷ್ಠತೆ ವಿಸ್ತರಿಸುವ ಕಾಯ್ದೆ 2017 ಜಾರಿಗೆ ಒತ್ತಾಯ

  ತುಮಕೂರು:       ಕರ್ನಾಟಕ ಸರ್ಕಾರ 2 ಸದನಗಳ ಒಪ್ಪಿಗೆ ಪಡೆದು ರೂಪಿಸಿರುವ ಮೀಸಲಾತಿ ಆಧಾರದಲ್ಲಿ ಬಡ್ತಿ ಪಡೆದ ಪರಿಶಿಷ್ಟ ಜಾತಿ ಮತ್ತು ಪಗಂಡಗಳ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜೇಷ್ಠತೆ ವಿಸ್ತರಿಸುವ ಕಾಯ್ದೆ 2017 ಜಾರಿಗೆ ತರಬೇಕೆಂದು ಒತ್ತಾಯಿಸಿ ಇಂದು ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.       ದೇವರಾಜಅರಸು ಅವರ ಕಾಲದಲ್ಲಿ ಜಾರಿಗೆ ತಂದಿದ್ದ ಬಡ್ತಿ ಮೀಸಲಾತಿ ಕಾಯ್ದೆ ವಿರುದ್ಧ ಬಿ.ಕೆ.ಪವಿತ್ರ ಪ್ರಕರಣ ತೀರ್ಪಿನಿಂದ ಉಂಟಾದ ನಷ್ಟವನ್ನು ತಡೆಯುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಅಂದಿನ ಸರ್ಕಾರ ಸದರಿ ಕಾಯ್ದೆಯನ್ನು ಎಲ್ಲ ಇಲಾಖೆಗಳ ಮಾಹಿತಿ ಪಡೆದು ರೂಪಿಸಿತ್ತು. ಸದರಿ ಕಾಯ್ದೆ ಕರ್ನಾಟಕ ಸರ್ಕಾರದ ಮೇಲ್ಮನೆ ಹಾಗೂ ಕೆಳಮನೆಯಲ್ಲಿ ವಿಸ್ಕøತವಾಗಿ ಚರ್ಚೆಯಾಗಿ ಅನುಮೋದನೆಗೊಂಡು, ರಾಷ್ಟ್ರಪತಿಗಳ ಅಂಕಿತ ಪಡೆದು, ರಾಜ್ಯಪತ್ರದಲ್ಲಿ ಪ್ರಕಟಗೊಂಡು ತಿಂಗಳುಗಳೇ ಕಳೆಯುತ್ತಿದ್ದರು, ಕುಮಾರಸ್ವಾಮಿ…

ಮುಂದೆ ಓದಿ...

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ

 ತುಮಕೂರು:       ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದ ಕಾರಣ ರಾತ್ರಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಆದರೆ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಬೆಳಿಗ್ಗೆಯಿಂದ ಎಂದಿನಂತೆ ಲವಲವಿಕೆಯಿಂದ ಇದ್ದಾರೆ.        ಕಳೆದ ರಾತ್ರಿ ಶ್ರೀಗಳ ಹೃದಯಬಡಿತದಲ್ಲಿ ಕೊಂಚ ಏರುಪೇರಾಗಿತ್ತು. ಅಲ್ಲದೆ ಶೀತ, ಕೆಮ್ಮು, ಜ್ವರ ಸಹ ಕಾಣಿಸಿಕೊಂಡಿತ್ತು. ಇದರಿಂದ ಶ್ರೀಕ್ಷೇತ್ರ ಸೇರಿದಂತೆ ಕಲ್ಪತರುನಾಡಿನಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿರುವ ವಿಚಾರ ತಿಳಿಯುತ್ತಿದ್ದಂತೆ ಶ್ರೀಗಳ ಆಪ್ತ ವೈದ್ಯರಾದ ಡಾ. ಪರಮೇಶ್ ನೇತೃತ್ವದ ತಂಡ ಮಠಕ್ಕೆ ತೆರಳಿ ಶ್ರೀಗಳಿಗೆ ಚಿಕಿತ್ಸೆ ನೀಡಿದರು.        ನಂತರ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ವೈದ್ಯರಾದ ಡಾ. ರವೀಂದ್ರ ನೇತೃತ್ವದ ವೈದ್ಯರ ತಂಡವೂ…

ಮುಂದೆ ಓದಿ...

ರೈಲ್ವೆ ಪ್ರಯಾಣಿಕರ ಸುರಕ್ಷತಾ ಸಪ್ತಾಹ

 ತುಮಕೂರು:       ನಗರದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ದಳದ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ಬಗ್ಗೆ ರೈಲ್ವೆ ಪ್ರಯಾಣಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರಯಾಣಿಕರ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಯಿತು.       ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ರೈಲ್ವೆ ರಕ್ಷಣಾ ದಳದ ಉಪನಿರೀಕ್ಷಕ ಕುಬೇರಪ್ಪ ಅವರು, ರೈಲ್ವೆ ರಕ್ಷಣಾ ದಳದ ಮುಖ್ಯ ಸುರಕ್ಷಾ ಆಯುಕ್ತರ ಆದೇಶದ ಮೇರೆಗೆ ಮಾನವ ಕಳ್ಳ ಸಾಗಾಣಿಕೆ ಬಗ್ಗೆ ರೈಲ್ವೆ ಪ್ರಯಾಣಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ವಿಶೇಷವಾಗಿ ಮಹಿಳೆಯರು, ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.       ತಾವು ಪ್ರಯಾಣಿಸುವ ಸ್ಥಳದಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದರೆ ತುರ್ತಾಗಿ ಆರ್‌ಪಿಎಫ್  ಟಾಲ್ ಫ್ರೀ ನಂ. 182ಗೆ ಕರೆ ಮಾಡುವಂತೆ ಅವರು ಮನವಿ ಮಾಡಿದರು.       ರೈಲಿನಲ್ಲಿ ಪ್ರಯಾಣಿಸುವಾಗ ಮತ್ತು ರೈಲ್ವೆ ನಿಲ್ದಾಣಗಳಲ್ಲಿ…

ಮುಂದೆ ಓದಿ...

ಪ್ರಪಂಚದ ಮುಂದುವರೆದ ದೇಶಗಳು ಡಾ.ಬಿ.ಆರ್.ಅಂಬೇಡ್ಕರ್ ರನ್ನು ಸ್ಮರಿಸುತ್ತವೆ

ತುಮಕೂರು:      ಪ್ರಪಂಚದ ಮುಂದುವರೆದ ದೇಶಗಳು ಡಾ.ಬಿ.ಆರ್.ಅಂಬೇಡ್ಕರ್ ರನ್ನು ಸ್ಮರಿಸುತ್ತವೆ ಎಂದು ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷರಾದ ಎನ್.ಕೆ. ನಿಧಿಕುಮಾರ್ ತಿಳಿಸಿದರು.       ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 62ನೇ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿ, ಶೋಷಿತ ಸಮುದಾಯದ ಏಳ್ಗೆಗಾಗಿ ಶ್ರಮಿಸಿದ ಡಾ.ಅಂಬೇಡ್ಕರ್ ಅವರು, ಕಡುಬಡತನದ ನಡುವೆಯೇ ಭಾರತಕ್ಕೆ ಪ್ರಪಂಚದಲ್ಲಿಯೇ ಶ್ರೇಷ್ಠ ಸಮುದಾಯವನ್ನು ನೀಡಿದವರು. ದೇಶದ ಮೂಲ ನಿವಾಸಿಗಳಾದ ದಲಿತರ ಮೇಲಿನ ಅಸ್ಪಶ್ಯತೆ ವಿರುದ್ಧ ಹೋರಾಡಿದ ಫಲವಾಗಿಯೇ ಸಂವಿಧಾನವನ್ನು ಸಮಾನತೆಯ ತಳಹದಿಯ ಮೇಲೆ ರೂಪಿಸಿದ್ದಾರೆ ಎಂದರು.        ಅತ್ಯಂತ ಬಲಿಷ್ಠ ಸಂವಿಧಾನವನ್ನು ರೂಪಿಸಿದ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಲೇ ಇಲ್ಲ ಎನ್ನುವಂತಹ ಸುಳ್ಳು ವದಂತಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದ್ದು, ಯುವ ಸಮುದಾಯ ಅಂಬೇಡ್ಕರ್ ಅವರ ಬಗ್ಗೆ ಅರಿಯುವ ಅವಶ್ಯಕತೆ…

ಮುಂದೆ ಓದಿ...

ಕೃಷಿ ಚಟುವಟಿಕೆಗಳು ವಿನಾಶದ ಹಾದಿ ತಲುಪುತ್ತಿವೆ : ಬಿ.ಸಿ.ನಾಗೇಶ್

 ತಿಪಟೂರು :       ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕೃಷಿ ಚಟುವಟಿಕೆಗಳು ಭಾರತದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ವಿನಾಶದ ಹಾದಿ ತಲುಪುತ್ತಿರುವುದು ವಿಷಾಧನೀಯ ಎಂದು ಶಾಸಕ ಬಿ.ಸಿ.ನಾಗೇಶ್ ತಿಳಿಸಿದರು.       ನಗರದ ಸಹಾಯಕ ಕೃಷಿ ಇಲಾಖೆಯ ಕಛೇರಿಯ ಆವರಣದಲ್ಲಿ ಕೃಷಿ ಇಲಾಖೆ ಹಾಗೂ ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಮಣ್ಣು ಆರೋಗ್ಯ ದಿನಾಚರಣೆಯ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ದುರಾಸೆಗೆ ಕೀಟ ನಾಶಕ, ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚುತ್ತಿದ್ದು ಮಣ್ಣಿನ ಸಾರಾಂಶ ಕಡಿಮೆಯಾಗಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಹಿಂದೆ ಭೂಮಿಯಲ್ಲಿ ಬೇಕಾದ ಬೆಳೆಯನ್ನು ಬೆಳೆಯುವ ಕಾಲವಿತ್ತು. ಆದರೆ ಇಂದು ರಾಸಾಯನಿಕ ಗೊಬ್ಬರಗಳ ಸಿಂಪಡಣೆಯಿಂದ ಬೆಳೆದ ಬೆಳೆಗಳನ್ನು ತಿನ್ನುವಂತಾಗಿದೆ. ಬದಲಾದ ಪರಿಸ್ಥಿತಿಯಲ್ಲಿ ಗೊಬ್ಬರಗಳಿಂದ ಕೊಟ್ಯಾಂತರ ಕ್ರಿಮಿ, ಕೀಟಗಳು ನಶಿಸಿ ಹೋಗುತ್ತಿರುವುದರಿಂದ ಇಂದಿನ ದಿನಮಾನಗಳಲ್ಲಿ ಮಣ್ಣಿನ ಸಂರಕ್ಷಣೆಗೆ ನಾವೆಲ್ಲರೂ…

ಮುಂದೆ ಓದಿ...

ಸಂಪರ್ಕ ರಸ್ತೆಗಾಗಿ ಗ್ರಾಮಸ್ಥರಿಂದ ಗ್ರಾ.ಪಂ ಎದುರು ಪ್ರತಿಭಟನೆ

ತಿಪಟೂರು :       ಸಾರ್ವಜನಿಕರ ಸಂಪರ್ಕ ರಸ್ತೆಗಾಗಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದ ಘಟನೆ ಕಸಬಾ ಹೋಬಳಿ ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಬುಧವಾರ ರಾತ್ರಿ ನಡೆಯಿತು.       ಈ ವೇಳೆ ಮಾತನಾಡಿದ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಅನುದಾನದಲ್ಲಿ ಬಿದರೆಗುಡಿಯಿಂದ ಮತ್ತಿಹಳ್ಳಿ ಹಾಗೂ ಮಾಣಿಕಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಜೆಲ್ಲಿ-ಕಲ್ಲು, ಮಣ್ಣನ್ನು ಹಾಕಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಸುಮಾರು ವರ್ಷಗಳಿಂದ ಇದೇ ರಸ್ತೆಯಲ್ಲಿ ಸಾರ್ವಜನಿಕರು ಓಡಾಡುತ್ತಿದ್ದರು. ಆದರೆ ಏಕಾಏಕಿ ರಸ್ತೆಗೆ ಕೆಲವರು ಮುಳ್ಳು ಹಾಕಿ, ಗುಂಡಿಗಳನ್ನು ತೆಗೆದು ರಸ್ತೆಯಲ್ಲಿ ಓಡಾಡಲು ತೊಂದರೆ ಮಾಡುತ್ತಿದ್ದಾರೆಂದು ಆರೋಪಿಸಿದರು. ಈ ಬಗ್ಗೆ ಗ್ರಾಮಪಂಚಾಯಿತಿಗೆ ದೂರು ಸಲ್ಲಿಸಲಾಗಿದ್ದು, ಅಲ್ಲದೆ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಆಕ್ರಮ ಎಸೆಗಿರುವ ವ್ಯಕ್ತಿಗೆ ನೊಟೀಸ್ ಜಾರಿ ಮಾಡಿದರೂ ಅದನ್ನು ತಿರಸ್ಕರಿಸಿದÀ ಕಾರಣ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.…

ಮುಂದೆ ಓದಿ...