ಮಲ್ಯ ಜೊತೆಗೆ 58 ವಿತ್ತಪರಾಧಿಗಳ ಬೇಟೆಗೆ ಸರ್ಕಾರ ಸಿದ್ದ

      ದೇಶ ತೊರೆದು ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ವಿಜಯ್‌ ಮಲ್ಯ ಹಾಗೂ 58 ವಿತ್ತಪರಾಧಿಗಳನ್ನು ಕರೆ ತರಲು ಶತಾಯಗತಾಯ ಕಾರ್ಯಪ್ರವೃತ್ತವಾಗಿರುವುದಾಗಿ ಕೇಂದ್ರ ಸರಕಾರ ಸಂಸತ್ತಿಗೆ ತಿಳಿಸಿದೆ.      ನೀರವ್‌ ಮೋದಿ, ಮೆಹುಲ್‌ ಚೋಕ್ಸಿ ಅಷ್ಟೇ ಅಲ್ಲದೆ ಒಟ್ಟು 58 ವಿತ್ತಪರಾಧಿಗಳನ್ನು ಕರೆ ತರಲು ಕಾರ್ಯಚರಣೆ ನಡೆಸಿರುವುದಾಗಿ ವಿದೇಶಾಂಗ ಖಾತೆ ಸಹಾಯಕ ಸಚಿವ ವಿ.ಕೆ ಸಿಂಗ್‌ ಈ ಸಂಬಂಧ ಲೋಕಸಭೆಗೆ ವಿವರಗಳನ್ನು ನೀಡಿದ್ದಾರೆ.        ಒಟ್ಟು 58 ಆರೋಪಿಗಳ ವಿರುದ್ಧ ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಸಚಿವ ವಿ.ಕೆ ಸಿಂಗ್‌ ಮಾಹಿತಿ ನೀಡಿದ್ದಾರೆ. ಒಟ್ಟು 58 ವಿತ್ತಪರಾಧಿಗಳ ಪೈಕಿ 16 ಮಂದಿಯ ಗಡಿಪಾರು ಕೋರಿ ಬ್ರಿಟನ್‌, ಯುಎಇ, ಬೆಲ್ಜಿಯಂ, ಈಜಿಪ್ತ್‌, ಅಮೆರಿಕ, ಅಂಟಿಗುವಾ ಮತ್ತು ಬಾರ್ಬುಡಾಗೆ ಮನವಿ ಸಲ್ಲಿಸಲಾಗಿದೆ.       ನೀರವ್‌ ಮೋದಿ, ಮೆಹುಲ್‌ ಚೋಕ್ಸಿ, ಲಲಿತ್ ಮೋದಿ, ನೀರವ್‌…

ಮುಂದೆ ಓದಿ...

ಬೆಂಗಳೂರಿನ ಈ ರಸ್ತೆಗೆ ರೆಬಲ್ ಸ್ಟಾರ್ ಅಂಬರೀಶ್ ಹೆಸರು

ಬೆಂಗಳೂರು:       ಬೆಂಗಳೂರಿನ ಬಿಡಿಎ ಬಡಾವಣೆಯೊಂದಕ್ಕೆ ರೆಬಲ್ ಸ್ಟಾರ್ ಅಂಬರೀಶ್ ಹೆಸರಿಡಲು ಬಿಬಿಎಂಪಿ ಚಿಂತನೆ ನಡೆಸಿದೆ.       ಇತ್ತೀಚೆಗೆ ನಿಧನರಾದ ಕನ್ನಡ ಚಿತ್ರನಟ, ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ಮರಣಾರ್ಥವಾಗಿ ಬಡಾವಣೆಗೆ ಅಂಬರೀಶ್ ಹೆಸರಿಡಲು ನಿರ್ಧರಿಸಲಾಗಿದೆ.       ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿರುವ ಬಿಡಿಎ ಬಡಾವಣೆಗೆ ಅಂಬರೀಶ್ ಹೆಸರಿಡಲಾಗುತ್ತಿದೆ, ಚಾಲುಕ್ಯ ವೃತ್ತದಿಂದ ಮೌರ್ಯ ಸರ್ಕಲ್ ವರೆಗಿನ ವಾರ್ಡ್ 197ರ ವಸಂತಪುರ ಬಡಾವಣೆಯ ಪಿಕಾಸಿಪುರ ಬಿಡಿಎ ಬಡಾವಣೆಗೆ ಅಂಬರೀಶ್ ಹೆಸರಲ್ಲಿ ನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ, ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ಮುಂದೆ ಓದಿ...

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಶಾಸಕ ಸಿ.ಟಿ.ರವಿ ಭಿಕ್ಷಾಟನೆ

ಚಿಕ್ಕಮಗಳೂರು:       ನಮಗೆ ಸ್ವಾರ್ಥರಹಿತ ರಾಜಕಾರಣದ ಅವಶ್ಯಕತೆ ಇದೆ. ಹೀಗಾಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ನಾವು ಹರಕೆ ಮಾಡಿಕೊಳ್ಳುತ್ತಿದ್ದೇವೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.       ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರಿಂದಲೇ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗೌರವ ಸಿಕ್ಕಿದೆ. ಹೀಗಾಗಿ ಅವರು ಮತ್ತೊಮ್ಮೆ ಪ್ರಧಾನಿಯಾಗಲೆಂದು ದತ್ತಾತ್ರೇಯಸ್ವಾಮಿಗೆ ಹರಕೆ ಮಾಡಿಕೊಂಡಿದ್ದೇವೆ. ನಾವು ಲೋಕಸಭಾ ಚುನಾವಣೆಯಲ್ಲಿ 350ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕಾಗಿದೆ ಎಂದರು.         ಡಿ. 13ರಂದು ನಡೆಯಲಿರುವ ದತ್ತಜಯಂತಿ ಹಿನ್ನಲೆ ಇರುಮುಡಿ ರೂಪದಲ್ಲಿ ದತ್ತಪೀಠಕ್ಕೆ ತೆರಳಲು ದತ್ತ ಭಕ್ತರು ಸಿದ್ಧತೆ ನಡೆಸುತ್ತಿದ್ದಾರೆ.       ದತ್ತ ಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಪಡಿ ಸಂಗ್ರಹ ಮಾಡಲಾಯಿತು. ದತ್ತಮಾಲಾಧಾರಿಯಾಗಿರುವ ಶಾಸಕ ಸಿ.ಟಿ.ರವಿ ಹಾಗೂ ಮಾಲಾಧಾರಿಗಳಿಂದ ಪಡಿ ಸಂಗ್ರಹ ನಡೆಯಿತು. ಬಸನಹಳ್ಳಿ ಮುಖ್ಯ ರಸ್ತೆ, ರಾಘವೇಂದ್ರ ಮಠದ…

ಮುಂದೆ ಓದಿ...

ನಾಗರಕಟ್ಟೆ, ದರ್ಗಾ ತೆರವಿಗೆ ಬಜರಂಗದಳ ವಿರೋಧ

 ತುಮಕೂರು:       ನಗರದ ಟೌನ್‍ಹಾಲ್ ಸರ್ಕಲ್‍ನಲ್ಲಿರುವ ನಾಗರಕಟ್ಟೆ ಗಣಪತಿ ದೇವಾಲಯದ ತೆರವಿಗೆ ನಗರಪಾಲಿಕೆ ನೊಟೀಷ್ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಜರಂಗದಳ ಹಾಗೂ ನಾಗರಕಟ್ಟೆ ಗಣಪತಿ ದೇವಾಲಯ ಕಮಿಟಿ ಸದಸ್ಯರು, ನೊಟೀಷ್‍ನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದರು.       ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಬಜರಂಗದಳ ಹಾಗೂ ದೇವಾಲಯದ ಕಮಿಟಿಯ ಸದಸ್ಯರು, ನಾಗರಕಟ್ಟೆ ಗಣಪತಿ ದೇವಾಲಯ ಹಿಂದೂ ಸಮಾಜ ಬಾಂಧವರ ಶ್ರದ್ದಾ, ಭಕ್ತಿಯ ಕೇಂದ್ರವಾಗಿದೆ.ಹಾಗೆಯೇ ಪಕ್ಕದಲ್ಲಿಯೇ ಇರುವ ದರ್ಗಾ ಕೂಡಲೇ ಬಹಳ ವರ್ಷಗಳಿಂದ ಆ ಸಮುದಾಯದ ಆರಾಧನಾ ಕೇಂದ್ರವಾಗಿದೆ.ಎರಡು ಸ್ಥಳಗಳಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಿಲ್ಲ.ದರ್ಗಾದ ವಿರುದ್ದ ಹಿಂದೂಗಳಾಗಲಿ,ನಾಗರಕಟ್ಟೆ ವಿರುದ್ದ ಮುಸ್ಲಿಂರಾಗಲಿ ದೂರು ನೀಡಿಲ್ಲ. ಹೀಗಿದ್ದರೂ ಜಿಲ್ಲಾಡಳಿತ ಎರಡು ಕೇಂದ್ರಗಳನ್ನು ತೆರೆವು ಮಾಡಲು ಮುಂದಾಗುವ ಮೂಲಕ ನಗರದಲ್ಲಿ ಕೋಮು ಸೌಹಾರ್ಧತೆಯನ್ನು ಕದಡಲು ಮುಂದಾಗಿದೆ ಎಂದು ಚಂದ್ರಶೇಖರ್ ಆರೋಪಿಸಿದರು.       ಈಗಾಗಲೇ ನಗರದ ಮೂಲಕ ಹಾದು…

ಮುಂದೆ ಓದಿ...

ವಿದ್ಯಾರ್ಥಿಗಳಿಂದ ವಿಜ್ಞಾನ-ತಂತ್ರಜ್ಞಾನ ಅನಾವರಣ

 ತುಮಕೂರು:       ಮನೆಯಲ್ಲಿ ಉತ್ಪತ್ತಿಯಾಗುವ ಕಸದಿಂದ ವಿದ್ಯುತ್‍ಚ್ಛಕ್ತಿ ತಯಾರಿಸುವುದು, ಸೈಪೋನ್ ತಂತ್ರಜ್ಞಾನ, ರಸ್ತೆಯಲ್ಲಿ ಸೋಲಾರ್ ಫಲಕ ಅಳವಡಿಕೆ, ರಾಕೇಟ್ ಒಲೆ ಸೇರಿದಂತೆ ವಿಜ್ಞಾನ ತಂತ್ರಜ್ಞಾನದ ಆವಿಷ್ಕಾರಗಳ ಪ್ರದರ್ಶನಕ್ಕೆ ತುಮಕೂರು ನಗರದ ಎಂಪ್ರೆಸ್ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಾಕ್ಷಿಯಾಯಿತು.       ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಡಿ.ಎಸ್.ಇ.ಆರ್.ಟಿ. ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಇನ್ಸ್‍ಪೈರ್ ಅವಾರ್ಡ್ ವಿಜ್ಞಾನ ವಸ್ತುಪ್ರದರ್ಶನದಲ್ಲಿ 10 ತಾಲ್ಲೂಕುಗಳ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು 435 ವಿಭಿನ್ನ ರೀತಿಯ ವಿಜ್ಞಾನ ವಸ್ತುಪ್ರದರ್ಶನವನ್ನು ಪ್ರದರ್ಶಿಸಿದರು.       ಮಕ್ಕಳ ಈ ವಿಜ್ಞಾನ ವಸ್ತುಪ್ರದರ್ಶನಕ್ಕೆ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಮಕ್ಕಳಲ್ಲಿರುವ ಚಿಂತನೆ ಮತ್ತು ಪ್ರತಿಭೆ ಬೆಳೆಯಲು ಇನ್ಸ್‍ಪೈರ್ ಅವಾರ್ಡ್ ತಂತ್ರಜ್ಞಾನ ಪ್ರಮುಖ…

ಮುಂದೆ ಓದಿ...