ಸೂಲಗಿತ್ತಿ ನರಸಮ್ಮ ನಿಧನ

ಬೆಂಗಳೂರು:       ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತೆ ಡಾ.ಸೂಲಗಿತ್ತಿ ನರಸಮ್ಮ(98) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಗರದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.       ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೃಷ್ಣಾಪುರದವರಾದ ಸೂಲಗಿತ್ತಿ ನರಸಮ್ಮ ಆಸ್ಪತ್ರೆ ಹಾಗೂ ವೈದ್ಯರಿಲ್ಲದ ಕಾಲದಲ್ಲಿ ಹೆರಿಗೆ ತಜ್ಞೆಯಾಗಿದ್ದರು.  ಸುಮಾರು 15 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ ಕೀರ್ತಿ ಅವರದ್ದು, ವೈದ್ಯರು ಇಲ್ಲದ ಕಾಲದಲ್ಲಿ ವೈದ್ಯರಂತೆ ಹೆರಿಗೆ ಮಾಡಿಸಿದ್ದರು. 2018ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಇವರು ಭಾಜನರಾಗಿದ್ದರು. ಕಳೆದ 25 ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆ, ವಯೋಸಹಜ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.       ಆಸ್ಪತ್ರೆ, ವೈದ್ಯರು ಇಲ್ಲದ ಕಾಲದಲ್ಲಿ ಪ್ರಸೂತಿ ತಜ್ಞೆಯಾಗಿದ್ದ ನರಸಮ್ಮನವರ ಅಪರಿಮಿತವಾದ ಸಾಧನೆಯನ್ನು ಗುರುತಿಸಿ ಕೇಂದ್ರ ಸರಕಾರವು 2018ನೇ ಸಾಲಿನಲ್ಲಿ ದೇಶದ ಪ್ರತಿಷ್ಠಿತ ನಾಗರಿಕ ಸನ್ಮಾನ ‘ಪದಶ್ಮೀ’…

ಮುಂದೆ ಓದಿ...

ರೈತರು ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಬೇಕು

ತುಮಕೂರು :       ರೈತರು ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಒಳ್ಳೆಯ ಬೆಳೆ ಬೆಳೆದು ಆರ್ಥಿಕ ಮಟ್ಟ ಸುಧಾರಣೆ ಮಾಡಿಕೊಳ್ಳಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಉಪಾಧ್ಯಕ್ಷ ರಂಗಸ್ವಾಮಯ್ಯ ತಿಳಿಸಿದರು.       ತಾಲ್ಲೂಕಿನ ಕಂಬಳಾಪುರದಲ್ಲಿ ಐಡಿಎಫ್ ಸಂಸ್ಥೆ, ಕೊಲ್ಲಾಪುರದಮ್ಮ ರೈತ ಉತ್ಪಾದಕರ ಕಂಪನಿಯ ಹೆಬ್ಬೂರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ರೈತರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯ ಬರದ ಹಿನ್ನೇಲೆಯಲ್ಲಿ ಸರ್ಕಾರ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೂನ್ಯ ಬಂಡವಾಳ ಕೃಷಿ, ಕೃಷಿ ಯಂತ್ರಧಾರೆ, ಸಾವಯವ ಕೃಷಿ, ಕೃಷಿ ಭಾಗ್ಯ, ಇಸ್ರೇಲ್ ಮಾದರಿ ಕೃಷಿ ಹೀಗೆ ರೈತರಿಗೆ ಹತ್ತು ಹಲವು ಯೋಜನೆಗಳನ್ನ ಜಾರಿಗೆ ತಂದಿದ್ದು ಇವುಗಳ ಸದ್ಬಳಕೆಯನ್ನು ಪ್ರತಿಯೊಬ್ಬ ರೈತರು ಬಳಸಿಕೊಂಡು ಕಡಿಮೆ ಖರ್ಚಿನಲ್ಲಿ…

ಮುಂದೆ ಓದಿ...

ಸಿದ್ದಗಂಗ ಶ್ರೀ ಗಳ ಬಗ್ಗೆ ಅಟಲ್‍ಜೀ ರವರಿಗೆ ಅಪಾರ ಗೌರವ – ಜಿ.ಎಸ್.ಬಸವರಾಜು

 ತುಮಕೂರು:       ಭಾರತರತ್ನ ಮಾಜಿ ಪ್ರಧಾನಿಗಳಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿರವರಿಗೆ ಸಿದ್ದಗಂಗೆಯ ಹಿರಿಯ ಶ್ರೀಗಳಾದ ಡಾ|| ಶ್ರೀ.ಶ್ರೀ.ಶ್ರೀ.ಶಿವಕುಮಾರ ಸ್ವಾಮಿಜೀಗಳನ್ನು ಕಂಡರೆ ಅತ್ಯಂತ ಗೌರವ ಹಾಗೂ ಪ್ರೀತಿಯನ್ನು ಹೊಂದಿದ್ದರು.       ತುಮಕೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ರವರ 95ನೇ ಜನ್ಮ ದಿನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸುಶಾಸನ ದಿನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಾಜಪೇಯಿರವರುರವರಿಗೆ  ಶ್ರೀ.ಶ್ರೀ.ಶ್ರೀ.ಶಿವಕುಮಾರಸ್ವಾಮಿಜೀಗಳನ್ನು ಕಂಡರೆ ಅತ್ಯಂತ ಪ್ರೀತಿ ಮತ್ತು ಭಕ್ತಿ.  ವಾಜಪೇಯಿರವರು ಪ್ರಧಾನಮಂತ್ರಿಗಳಾದ ಸಂದರ್ಭದಲ್ಲಿ ನಾನು ತುಮಕೂರಿನಲ್ಲಿ ಸಂಸದನಾಗಿದ್ದೆ. ತುಮಕೂರಿನ ಸಂಸದ ಎಂದ ಕೂಡಲೇ ಕೈಸೆಹೋ ಭೇಟಾ ನಮ್ಮ ಸಿದ್ದಗಂಗ ಸ್ವಾಮಿಜಿಗಳು ಹೇಗೆ ಇದ್ದಾರೆ ಅವರ ಯೋಗಕ್ಷೇಮವನ್ನು ವಿಚಾರಿಸಿದೆ ಎಂದು ಹೇಳಿ ಎಂದು ಹೇಳುತ್ತಿದ್ದರು. ವಾಜಪೇಯಿರವರು ವಿದೇಶಾಂಗ ಮತ್ತು ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿದ್ದ  ಸಂದರ್ಭದಲ್ಲಿ ಈ ಸಮಿತಿಯ ಸದಸ್ಯನಾಗಿದ್ದ ನಾನು ವಾಜಪೇಯಿರವರ ಒಡನಾಟ ಹತ್ತಿರದಿಂದ ಬಲ್ಲವನಾಗಿದ್ದೇನೆ. ಅವರ ಸರಳತೆ ಮತ್ತು…

ಮುಂದೆ ಓದಿ...

ಕೀಳರಿಮೆ ಬಿಟ್ಟು ಸರ್ಕಾರದ ಸವಲತ್ತು ಪಡೆದುಕೊಳ್ಳಿ: ಡಾ.ದೇವರಾಜು

 ತುಮಕೂರು:       ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಲ್ಲಿ ತಳ ಸಮುದಾಯದವರಿಗೆ ಇರುವ ಕೀಳರಿಮೆ, ಮುಜುಗರ, ಊಹಾಪೋಹಗಳಿಂದ ಅರ್ಜಿ ಹಾಕುವುದೇ ಬೇಡ ಎನ್ನುವ ಮನಸ್ಥಿತಿಯಿಂದ ಹೊರಬಂದು, ಸರ್ಕಾರದ ಸವಲತ್ತುಗಳನ್ನು ಬಳಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಜಿ.ಪಿ.ದೇವರಾಜು ಹೇಳಿದರು.       ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಕೋಚಿಂಗ್ ಸೆಂಟರ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೌಲಭ್ಯವಿಲ್ಲದ ದಿನಗಳಲ್ಲಿ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಓದಿದ ತಳಸಮುದಾಯದ ವಿದ್ಯಾರ್ಥಿಗಳು, ಉನ್ನತ ವಿದ್ಯಾಭ್ಯಾಸವನ್ನು ಮಾಡುವ ಮೂಲಕ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತಿಚೆಗೆ ಸೌಲಭ್ಯ ಹೆಚ್ಚಾಗುತ್ತಿದ್ದರೆ, ವಿದ್ಯಾರ್ಥಿಗಳಲ್ಲಿ, ತಳಸಮುದಾಯದಲ್ಲಿ ಕ್ರಿಯಾಶೀಲತೆ ಕಡಿಮೆಯಾಗುತ್ತಿದೆ, ಸರ್ಕಾರ ಸಾವಿರಾರು ಕೋಟಿ ರೂಗಳನ್ನು ವೆಚ್ಚ ಮಾಡಿ, ಸ್ಪರ್ಧಾತ್ಮಕ ತರಬೇತಿಗಳನ್ನು ನೀಡಿದರೂ ವಿದ್ಯಾರ್ಥಿಗಳು ಉತೀರ್ಣರಾಗುತ್ತಿಲ್ಲ ಎಂದರು.       ಲಕ್ಷಾಂತರ ರೂಪಾಯಿ ನೀಡಿ ಖಾಸಗಿ ತರಬೇತಿ ಸಂಸ್ಥೆಗಳಲ್ಲಿ ತರಬೇತಿ…

ಮುಂದೆ ಓದಿ...