ತಹಶೀಲ್ದಾರ್ ನಂದೀಶ್ ವರ್ಗಾವಣೆ ಆದೇಶಕ್ಕೆ ಕೋರ್ಟ್ ತಡೆಯಾಜ್ಞÉ

 ಮಧುಗಿರಿ :       ಅವಧಿಗೆ ಮುನ್ನ ತಹಶೀಲ್ದಾರ್ ವರ್ಗಾವಣೆ ಸರಿಯಾದ ಕಾನೂನು ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿರುವ ರಾಜ್ಯ ಆಡಳಿತ ನ್ಯಾಯ ಮಂಡಳಿಯು ಮಧುಗಿರಿ ತಹಶೀಲ್ದಾರ್ ನಂದೀಶ್ ರವರ ಅಕಾಲಿಕ ವರ್ಗಾವಣೆ ಆದೇಶಕ್ಕೆ ತಡೆ ನೀಡಿದ್ದು, ಹುದ್ದೆಯಲ್ಲಿ ಮುಂದುವರೆಯುವಂತೆ ಆದೇಶಿಸಿದೆ.       ಮಧುಗಿರಿ ತಹಶೀಲ್ದಾರ್ ನಂದೀಶ್‍ರವರನ್ನು ವರ್ಗಾವಣೆ ಮಾಡಿಸುವಂತೆ ಕ್ಷೇತ್ರದ ಕೆಲ ರಾಜಕಾರಣಿಗಳು ಮುಖ್ಯಮಂತ್ರಿಯಿಂದ ಬೇರೊಂದು ಇಲಾಖೆಯ ಅಧಿಕಾರಿಯನ್ನು ಶಿಫಾರಸ್ಸು ಮಾಡಿಸಿದ್ದರು. ಇದನ್ನು ಪ್ರಶ್ನಿಸಿ ತಹಶೀಲ್ದಾರ್ ನಂದೀಶ್ ಕೆಎಟಿ ಮೊರೆ ಹೋಗಿದ್ದರು. ಇವರ ವಾದವನ್ನು ಆಲಿಸಿದ ರಾಜ್ಯ ಆಡಳಿತ ನ್ಯಾಯ ಮಂಡಳಿಯು ಯಾವುದೇ ಅಧಿಕಾರಿಯನ್ನು ಒಂದು ಜಾಗಕ್ಕೆ ನೇಮಿಸಿದರೆ ಕನಿಷ್ಟ 2 ವರ್ಷ ವರ್ಗಾವಣೆ ಅಸಂಭವ. ಇದು ಅವಧಿಗೆ ಮುನ್ನವೇ ವರ್ಗಾವಣೆ ಮಾಡಿದ ಪ್ರಕರಣವಾಗಿದ್ದು ಕಾನೂನು ರೀತಿ ಸರಿಯಲ್ಲ.. ಮಾರುಕಟ್ಟೆಯ ಅಧಿಕಾರಿಯನ್ನು ಕಂದಾಯ ಇಲಾಖೆಯ ಅರಿವಿಲ್ಲದಂತಹ ತಹಶೀಲ್ದಾರ್ ಹುದ್ದೆಗೆ ನಿಯೋಜಿಸುವುದು ಅಕ್ಷಮ್ಯ ಎಂದು…

ಮುಂದೆ ಓದಿ...

ಜಿಲ್ಲೆಯಲ್ಲಿರುವ ದಲಿತರ ಸ್ಮಶಾನ ಭೂಮಿ ಅಭಿವೃದ್ಧಿಪಡಿಸಲಾಗುವುದು: ಡಿಸಿ

 ತುಮಕೂರು:       ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಸಮುದಾಯದವರ ಸ್ಮಶಾನ ಭೂಮಿಗಳನ್ನು ಗುರ್ತಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ತಿಳಿಸಿದರು.       ತುಮಕೂರು ನಗರದ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಹಿತರಕ್ಷಣಾ ಹಾಗೂ ಕುಂದುಕೊರತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.       ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿರುವ ಪರಿಶಿಷ್ಟ ಜಾತಿ/ವರ್ಗದ ಜನಾಂದವರಿಗೆ ಸ್ಮಶಾನ ಭೂಮಿ ಒದಗಿಸುವುದು ಮೊದಲ ಆದ್ಯತೆ. ಸುಮಾರು 75 ಗ್ರಾಮಗಳಲ್ಲಿ ಸ್ಮಶಾನ ಭೂಮಿಗಳಿಲ್ಲ. ಭೂ-ಲಭ್ಯತೆ ಪಟ್ಟಿ ಆಧಾರದ ಮೇಲೆ ಭೂಮಿ ನೀಡಲಾಗುವುದು. ಸರ್ಕಾರಿ ಜಾಗ ಲಭ್ಯವಿಲ್ಲದಿದ್ದಲ್ಲಿ ಖಾಸಗೀ ಜಮೀನನ್ನು ಖರೀದಿ ಮಾಡಿ ಜಾಗ ನೀಡಲಾಗುವುದು ಎಂದು ಅವರು ತಿಳಿಸಿದರು.       ಗೂಳೂರು, ಹೆಗ್ಗೆರೆ, ಹರಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ…

ಮುಂದೆ ಓದಿ...

ತುಮಕೂರು : ಶ್ರೀಗಳ ಗದ್ದುಗೆ ಮೇಲೆ ಶಿವಲಿಂಗ ಪ್ರತಿಷ್ಠಾಪನೆ!!

ತುಮಕೂರು:       ಇತಿಹಾಸ ಪ್ರಸಿದ್ಧ ಸಿದ್ದಗಂಗಾ ಮಠದ ನಡೆದಾಡುವ ದೇವರು, ತ್ರಿವಿಧ ದಾಸೋಹಮೂರ್ತಿಯಾಗಿದ್ದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಐಕ್ಯ ಸ್ಥಳದ ಗದ್ದುಗೆಯ ಪೀಠದ ಮೇಲೆ ಶಿವಲಿಂಗ ಪ್ರತಿಷ್ಠಾಪಿಸಲಾಯಿತು.       ಇಂದು ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀಗಳ ಗದ್ದುಗೆಯ ಪೀಠದ ಮೇಲೆ 38 ಇಂಚು ಉದ್ದದ ಶಿವಲಿಂಗವನ್ನು ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಪ್ರತಿಷ್ಠಾಪಿಸಲಾಯಿತು.       ಪ್ರಾತಃಕಾಲದಿಂದಲೇ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಹಲವು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಶಿವಲಿಂಗವನ್ನು ದೈವೀಕರಿಸಿ ಪ್ರತಿಷ್ಠಾಪನೆ ಮಾಡಲಾಯಿತು.       ಇಂದು ಪ್ರತಿಷ್ಠಾಪಿಸಿದ ಶಿವಲಿಂಗವನ್ನು ಶ್ರೀಗಳು ತಂಗುತ್ತಿದ್ದ ಹಳೇ ಮಠದಲ್ಲಿ ಮಂಡಲದ 48 ದಿನಗಳ ಕಾಲ ಜಲಾಧಿವಾಸ, ಧಾನ್ಯಾಧಿವಾಸ, ಪುಷ್ಪಾಧಿವಾಸ ಹಾಗೂ ಶಯನಾಧಿವಾಸದ ವಿಧಿ-ವಿಧಾನ ಪೂರೈಸಲಾಗಿತ್ತು.        ಹೀಗೆ ಸಕಲ…

ಮುಂದೆ ಓದಿ...

ತುರುವೇಕೆರೆಗೆ ಆರೋಗ್ಯ ಸಚಿವ ಶ್ರೀರಾಮುಲು ಭೇಟಿ!!

ತುರುವೇಕೆರೆ:       ಮುಂಬರಲಿರುವ ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಹದಿನೈದಕ್ಕೆ ಹದಿನೈದು ಸ್ಥಾನಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾಧಿಸಲಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.        ಪಟ್ಟಣದ ವಿರಕ್ತ ಮಠದ ಆವರಣದಲ್ಲಿ ನಡೆಯಲಿರುವ ಡಾ:ಕರಿವೃಷಭ ದೇಶಿಕೇಂದ್ರ ಸ್ವಾಮಿಯವರ 25ನೇ ವರ್ಷದ ರಜತ ಮಹೋತ್ಸವದ ಹಿನ್ನೆಲೆಯಲ್ಲಿ ಮಠಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಗೆಲ್ಲುವ ಮೂಲಕ 15ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ ಇದರಲ್ಲಿ ಅನುಮಾನವೇ ಬೇಡ, ನನಗೆ ಹಲವು ಉಪಚುನಾವಣೆಗಳನ್ನು ನಡೆಸಿದ ಅನುಭವವಿದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರ ನಿರೀಕÉ್ಷಗೆ ಮೀರಿ ಸ್ಪಂದಿಸುತ್ತಿದ್ದು, ಹಾಗಾಗಿ ಪಕ್ಷದ ಹದಿನೈದು ಅಭ್ಯರ್ಥಿಗಳು ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.       ಆರೋಗ್ಯ ಇಲಾಖೆಯಲ್ಲಿ ಕೆ.ಪಿ.ಎಸ್.ಸಿ. ಮೂಲಕ ನಡೆಯುತ್ತಿದ್ದ ವೈದ್ಯರ ನೇಮಕಾತಿ ಪದ್ದತಿಯನ್ನು ರದ್ದು ಮಾಡಿದ್ದು, ನೇರವಾಗಿ…

ಮುಂದೆ ಓದಿ...

ತುಮಕೂರು: ಗ್ರಾಮಾಂತರ ಕ್ಷೇತ್ರದ ಅನುದಾನ ತಡೆಗೆ ಹೆಚ್.ಡಿ.ಡಿ. ಅಸಮಾಧಾನ

ತುಮಕೂರು:       ದ್ವೇಷದ ರಾಜಕಾರಣ ಮಾಡಲ್ಲ ಎಂದು ಹೇಳಿದ ಯಡಿಯೂರಪ್ಪ, ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಹೆಚ್.ಡಿ.ಕೆ.ಕಾಲದಲ್ಲಿ ಬಿಡುಗಡೆಯಾದ 40 ಕೋಟಿ ರೂ ಅನುದಾನ ತಡೆಹಿಡಿಯುವ ಮೂಲಕ ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.       ತುಮಕೂರು ಗ್ರಾಮಾಂತರ ಕ್ಷೇತ್ರದ ಆರೇಹಳ್ಳಿ ಗ್ರಾಮದ ದೊಡ್ಡಮ್ಮ,ಚಿಕ್ಕಮ್ಮ ಹಾಗೂ ಆಂಜನೇಯಸ್ವಾಮಿ ದೇವಾಲಯದ ಉದ್ಘಾಟನೆಗೆ ಹಾಗೂ ಶಿಲಾ ವಿಗ್ರಹಗಳ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ನನ್ನ 59 ವರ್ಷಗಳ ರಾಜಕಾರಣದಲ್ಲಿ ಎಂದಿಗೂ ಈ ರೀತಿಯ ದ್ವೇಷದ ರಾಜಕಾರಣ ಮಾಡಿಲ್ಲ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.       ಐವತ್ತೊಂಬತ್ತು ವರ್ಷಗಳ ಸುಧೀರ್ಘ ರಾಜಕಾರಣದಲ್ಲಿ ಸೋಲು,ಗೆಲುವನ್ನು ಸಮಾನವಾಗಿ ಸ್ವೀಕರಿಸಿದ್ದೇನೆ. ದ್ವಾಪರಾಯುಗದ ಧರ್ಮರಾಯನಂತೆ ಧರ್ಮದ ರಾಜಕಾರಣ ಮಾಡಿದ್ದೇನೆ.ಕಳೆದ ಲೋಕಸಭೆಯ ಕೊನೆಯ ದಿನ ಮುಂದೆ ಸ್ಪರ್ಧೆ ಮಾಡಬಾರದು ಎಂದು…

ಮುಂದೆ ಓದಿ...

ತುಮಕೂರು : ಕೊಲೆ ನಡೆದ 24 ಗಂಟೆಗಳಲ್ಲಿ ಆರೋಪಿಗಳ ಸೆರೆ

ತುಮಕೂರು :       ನಗರದ ಶಿರಾಗೇಟ್ ನಾಗಯ್ಯನಪಾಳ್ಯದ ಅನಿಕೇತನ ಶಾಲೆ ಬಳಿ ಗುರುವಾರ ಸಂಜೆ ನಡೆದ ಮಹಾಂತೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.       ಬಸವಣ್ಣನ ಪಾಳ್ಯದ ಸುಹಾಸ್ (19), ಮನೋಹರ್ (20) ಮತ್ತು ಯಶವಂತ್ (19) ಬಂಧಿತ ಆರೋಪಿಗಳು.       ಗುರುವಾರ ಸಂಜೆ ಮಹಾಂತೇಶ್ ಮತ್ತು ಮಂಜುನಾಥ್ ಎಂಬುವವರ ಮೇಲೆ ಬಂಧಿತರು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಮಹಾಂತೇಶ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.       ಆರೋಪಿಗಳ ಪತ್ತೆಗಾಗಿ ಎಸ್.ಪಿ ಡಾ.ಕೆ.ವಂಶಿಕೃಷ್ಣ ಹಾಗೂ ಎಎಸ್‍ಪಿ ಟಿ.ಜೆ.ಉದೇಶ್ ಮುಂದಾಗಿದ್ದರು. ಡಿವೈಎಸ್‍ಪಿ ತಿಪ್ಪೇಸ್ವಾಮಿ ಹಾಗೂ ಸಿಬಿಐ ನವೀನ್ ಉಸ್ತುವಾರಿಯಲ್ಲಿ ತನಿಖಾ ತಂಡ ರಚಿಸಿದ್ದರು.ಕಾರ್ಯಾಚರಣೆಯಲ್ಲಿ ಪಿಎಸ್‍ಐ ವಿಜಯಲಕ್ಷ್ಮಿ, ಕೃಷ್ಣೇಗೌಡ, ಸಿಬ್ಬಂದಿ ರಮೇಶ್, ನಾಗರಾಜ್, ಡಿ.ಮಂಜುನಾಥ್, ರಾಮಚಂದ್ರಯ್ಯ, ನವೀನ್ ಕುಮಾರ್, ಈರಣ್ಣ, ಸೈಯದ್, ಮುಕ್ತಿಯಾರ್, ಪ್ರಸನ್ನಕುಮಾರ್, ಜೈಪ್ರಕಾಶ್, ಸಿದ್ದೇಶ್ವರ್ ಪಾಲ್ಗೊಂಡಿದ್ದರು.ಹತ್ಯೆ…

ಮುಂದೆ ಓದಿ...

ವೀಕ್ ಕ್ಯಾಂಡಿಡೇಟ್ ಹಾಕಿದ್ದೇ ಗುಬ್ಬಿಯಲ್ಲಿ ಶ್ರೀನಿವಾಸ್ ಗೆಲುವಿಗೆ ಕಾರಣ-ಸಂಸದ

ಗುಬ್ಬಿ :       ವೀಕ್ ಕ್ಯಾಂಡಿಡೇಟ್ ಹಾಕಿದ್ದೆ ಗುಬ್ಬಿಯಲ್ಲಿ ಶ್ರೀನಿವಾಸ್ ಸತತವಾಗಿ ಗೆಲುವು ಸಾಧಿಸಲು ಕಾರಣವಾಯಿತು ಎಂದು ಸಂಸದ ಹಾಗೂ ದಿಶಾ ಉಪಸಮಿತಿ ಅಧ್ಯಕ್ಷ ಜಿ.ಎಸ್.ಬಸವರಾಜು ಅಚ್ಚರಿಯ ಮಾತುಗಳನ್ನಾಡಿದರು.       ತಾಲ್ಲೂಕಿನ ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ದಿಶಾ ಉಪಸಮಿತಿ ಪ್ರಗತಿ ಪರಿಶೀಲನೆ ಸಭೆ ಹಾಗೂ ಸಂಸದ ಆದರ್ಶ ಗ್ರಾಮ ಯೋಜನೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಈಚೆಗೆ ಗುಬ್ಬಿ ಶಾಸಕರು ನೀಡಿರುವ ಟೀಕಾ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಕಿಡಿಕಾರುತ್ತಲೇ ಗುಬ್ಬಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ದಿ ಆಗಿಲ್ಲ. ಅಸಮರ್ಥರನ್ನು ಆಯ್ಕೆ ಮಾಡುತ್ತೀರಿ. ಶ್ರೀನಿವಾಸ್ ಶಾಸಕನಾಗುವಂತಿಲ್ಲ. ಆತನ ವಿರುದ್ದ ವೀಕ್ ಕ್ಯಾಂಡಿಡೇಟ್ ಹಾಕಿ ತಪ್ಪಾಯ್ತು ಎಂದು ಬೆಟ್ಟಸ್ವಾಮಿ ಅವರನ್ನು ಅಸಮರ್ಥ ಎಂದು ಪರೋಕ್ಷವಾಗಿ ಹೇಳಿ ಸಭಿಕರಲ್ಲಿ ಅಚ್ಚರಿ ತಂದರು.       ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನನ್ನ ಮೇಲೆ ಟೀಕೆ ಮಾಡಿರುವ…

ಮುಂದೆ ಓದಿ...

ಆರ್ಥಿಕತೆ ಕುಸಿತದಿಂದ ದುಡಿಯುವ ವರ್ಗ ತತ್ತರ : ತಪನ್ ಸೇನ್ ಆತಂಕ

ತುಮಕೂರು :       ದೇಶದಲ್ಲಿ ಆರ್ಥಿಕ ಕುಸಿತದಿಂದ ಉದ್ದಿಮೆಗಳು, ಕೈಗಾರಿಕೆಗಳು ಬಾಗಿಲು ಮುಚ್ಚಿದ್ದು ದುಡಿಯುವ ವರ್ಗ ತತ್ತರಿಸಿ ಹೋಗಿದೆ. ಸ್ಕೀಂ ನೌಕರರು, ಸಂಘಟಿತ ಮತ್ತು ಅಸಂಘಟಿತ ನೌಕರರು ಇನ್ನಿಲ್ಲದ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮಾಜಿ ರಾಜ್ಯಸಭಾ ಸದಸ್ಯರು ಆದ ಸಿಐಟಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಆತಂಕ ವ್ಯಕ್ತಪಡಿಸಿದರು.       ತುಮಕೂರಿನ ಗಾಜಿನಮನೆಯಲ್ಲಿ ಅಕ್ಟೋಬರ್ 8ರಂದು ಸಮಗ್ರ, ಸಮೃದ್ಧ ಮತ್ತು ಸೌಹಾರ್ದಕ್ಕಾಗಿ ನಡೆಯುತ್ತಿರುವ ಸಿಐಟಿಯು 14ನೇ ರಾಜ್ಯ ಮಟ್ಟದ ಸಮ್ಮೇಳನದ ಬಹಿರಂಗ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶವನ್ನು ಮಾರಾಟ ಮಾಡಲು ಹೊರಟಿದೆ. ಬಂಡವಾಳಶಾಹಿಗಳು ಕಿರುಪಾಲುದಾರರಾಗುತ್ತಿದ್ದಾರೆ. ಕೈಗಾರಿಕೆಗಳು ಮುಚ್ಚುತ್ತಿದ್ದು ಕಾರ್ಮಿಕರು ಬೀದಿಪಾಲಾಗುತ್ತಿದ್ದಾರೆ ಎಂದು ಹೇಳಿದರು.       ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾg ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದೆ. ಕಾನೂನುಗಳನ್ನು ಸಂಹಿತೆಗಳನ್ನಾಗಿ…

ಮುಂದೆ ಓದಿ...

ತುಮಕೂರು: ತಾತ್ಕಾಲಿಕ ಬಸ್‍ನಿಲ್ದಾಣ ಸ್ಥಳಾಂತರಕ್ಕೆ ಅಡ್ಡಿ!!!

ತುಮಕೂರು:       ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳ್ಳದ ಕಾರಣ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ತಾತ್ಕಾಲಿಕ ಸ್ಥಳಾಂತರಕ್ಕೆ ಅಡ್ಡಿಯಾಗಿದೆ. ಸ್ಥಳಾಂತರಕ್ಕೆ ಪೂರಕವಾದ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.        ತಮ್ಮ ಕಚೇರಿಯಲ್ಲಿಂದು ಕೆಎಸ್ಸಾರ್ಟಿಸಿ, ಸ್ಮಾರ್ಟ್ ಸಿಟಿ, ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವನ್ನಾಗಿ ನಿರ್ಮಿಸುವ ಕಾಮಗಾರಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜೆಸಿ ರಸ್ತೆಯಲ್ಲಿರುವ ಕೆಎಸ್ಸಾರ್ಟಿಸಿ ಘಟಕ-1ರ ಸ್ಥಳಕ್ಕೆ ಹಾಲಿಯಿರುವ ಕೆಎಸ್ಸಾರ್ಟಿಸಿ ಬಸ್‍ನಿಲ್ದಾಣವನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಸ್ಮಾರ್ಟ್‍ಸಿಟಿ ವತಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ನವೆಂಬರ್ 18ರೊಳಗಾಗಿ ಪೂರ್ಣಗೊಳಿಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.       ನಗರದ ಜೆ.ಸಿ ರಸ್ತೆ, ಪ್ರಶಾಂತ್…

ಮುಂದೆ ಓದಿ...

ತುಮಕೂರಿನಲ್ಲಿ ಭೀಕರ ಕೊಲೆ ; ಬೆಚ್ಚಬಿದ್ದ ಜನತೆ!

ತುಮಕೂರು :        ನಗರದಲ್ಲಿ ಮತ್ತೊಂದು ಭೀಕರ ಕೊಲೆಯಾಗಿದೆ.       ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ನಾಗಣ್ಣನ ಪಾಳ್ಯದಲ್ಲಿ ಸಂಜೆ 4.30 ಸುಮಾರಿನಲ್ಲಿ ಮಹಾಂತೇಶ್ ಮತ್ತು ಮಂಜುನಾಥ್ ಎಂಬುವರಿಬ್ಬರ ಮೇಲೆ ಭೀಕರ ಸ್ವರೂಪದಲ್ಲಿ ಹಲ್ಲೆ ಮಾಡಿದ್ದಾರೆ.       ಲಾಂಗು ಮತ್ತು ಮಚ್ಚು ಹಾಗೂ ಇತರೆ ಮಾರಕಾಸ್ತ್ರಗಳನ್ನು ಹಿಡಿದುಬಂದ ರೌಡಿಗಳ ಗುಂಪು ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಾಂತೇಶ್ ಹಾಗೂ ಮಂಜುನಾಥ್ ರವರನ್ನ ಆಸ್ಪತ್ರೆಗೆ ದಾಖಲು ಮಾಡಿದ್ದು, ಆಸ್ಪತ್ರೆಯಲ್ಲಿ ಮಹಾಂತೇಶ್ ಕೊನೆಯುಸಿರೆಳೆದಿದ್ದಾರೆ.       ಮಹಾಂತೇಶ್ ಮತ್ತು ಚಿನ್ನು ಎನ್ನುವವರ ನಡುವೆ ಆಗಾಗ ಗಲಾಟೆ-ಗದ್ದಲಗಳು ನಡೆಯುತ್ತಿತ್ತು.  ಚಿನ್ನು ಎನ್ನುವ ರೌಡಿ ಕುಖ್ಯಾತ ರೌಡಿ ರೋಹಿತ್ ನ ಶಿಷ್ಯನಾಗಿದ್ದು, ಮುಂದಾಗಬಹುದಾದ ಅನಾಹುತವನ್ನು ಗಮನಿಸಿ ಈ ಹಿಂದೆಯೇ ನಗರ ವೃತ್ತ ನಿರೀಕ್ಷಕ ಚಂದ್ರಶೇಖರ್ ರವರು ಮಹಾಂತೇಶ…

ಮುಂದೆ ಓದಿ...