ಶಿವಕುಮಾರಸ್ವಾಮೀಜಿಗಳ ಆರೋಗ್ಯ ಸ್ಥಿರ : ಸಿದ್ಧಲಿಂಗಸ್ವಾಮೀಜಿ

ತುಮಕೂರು:       ಸಿದ್ಧಗಂಗಾಶ್ರೀ ಡಾ.ಶಿವಕುಮಾರಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಿದ್ಧಗಂಗಾ ಮಠದ ಕಿರಿಯಶ್ರೀಗಳಾದ ಸಿದ್ಧಲಿಂಗಸ್ವಾಮೀಜಿ ತಿಳಿಸಿದರು.       ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಆರೋಗ್ಯದ ವಿಚಾರವಾಗಿ ಮಾಧ್ಯಮಗಳಲ್ಲಿ ಸಾಕಷ್ಟು ಮಾಹಿತಿ ನೀಡಲಾಗುತ್ತಿದ್ದು, ಟಿವಿಗಳಲ್ಲಿ ಪ್ರಸಾರವಾಗುತ್ತಿರುವ ಮಾಹಿತಿಯಿಂದ ಜನರಲ್ಲಿ ಆತಂಕ ಉಂಟಾಗುತ್ತಿದ್ದು, ಮಾಧ್ಯಮಗಳು ಮಠದಲ್ಲಿ ಉಳಿದುಕೊಂಡಿರವುದು ಜನರಲ್ಲಿ ಹೆಚ್ಚಿನ ಕುತೂಹಲವನ್ನುಂಟು ಮಾಡುತ್ತಿದೆ. ಶ್ರೀಗಳ ಆ ರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಮಾಧ್ಯಮಗಳಿಗೆ ಬೆಳಿಗ್ಗೆ ಮತ್ತು ಸಂಜೆ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡ ಲಾಗುವುದು ಎಂದು ಹೇಳಿದರು.      ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್, ಕಣ್ಣೂರು ಸ್ವಾಮೀಜಿ, ಮಠದ ಮಹದೇವು ಇತರರು ಚಿತ್ರದಲ್ಲಿದ್ದಾರೆ.

ಮುಂದೆ ಓದಿ...

ಶ್ರೀಗಳು ಕ್ಷೇಮ, ಆತಂಕ ಬೇಡ: ಸಚಿವ ಎಂ.ಬಿ. ಪಾಟೀಲ್

 ತುಮಕೂರು :       ನಡೆದಾಡುವ ದೇವರು ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಇಂದಿಲ್ಲಿ ತಿಳಿಸಿದರು.       ನಗರದ ಸಿದ್ದಗಂಗಾ ಮಠಕ್ಕೆ ತಮ್ಮ ಪತ್ನಿ ಆಶಾಪಾಟೀಲ್ ಅವರೊಂದಿಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿರುವ ಕೊಠಡಿಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದಿದ್ದೇನೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಎಲ್ಲ ಪ್ಯಾರಮೀಟರ್ ಚೆನ್ನಾಗಿದೆ ಎಂದರು. ಶ್ರೀಗಳ ಆರೋಗ್ಯ ಕುರಿತು ವೈದ್ಯರೊಂದಿಗೂ ಚರ್ಚಿಸಿದ್ದೇನೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಶ್ರೀಗಳನ್ನು ಬಹಳಷ್ಟು ಜಾಗರೂಕತೆಯಿಂದ ನೋಡಿಕೊಳ್ಳಲಾಗುತ್ತಿದೆ. ಶ್ರೀಗಳನ್ನು ನೋಡಲು ಹೋದ ಸಂದರ್ಭದಲ್ಲಿ ಸೋಂಕು ತಗುಲಬಾರದು ಎಂಬ ಉದ್ದೇಶದಿಂದ ನಮ್ಮೆಲ್ಲರಿಗೂ ಮಾಸ್ಕ್ ಹಾಕಿ ಒಳಗೆ ಪ್ರವೇಶ ನೀಡಲಾಯಿತು ಎಂದ ಅವರು,…

ಮುಂದೆ ಓದಿ...

ರೈತರ ಆತ್ಮಹತ್ಯೆ ತಡೆಗೆ ಕ್ರಮ – ಸಾಲ ಮನ್ನಾಗೊಳಿಸಲು ಒತ್ತಾಯ

 ತುಮಕೂರು:       ಜನವರಿ 8 ಮತ್ತು 9ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ತುಮಕೂರು ನಗರದಲ್ಲಿ ಪ್ರಚಾರಾಂದೋಲನ ಮತ್ತು ಬೀದಿಬದಿ ಸಭೆಗಳಿಗೆ ಚಾಲನೆ ನೀಡಲಾಯಿತು. ಪ್ರಚಾರಾಂದೋಲನದಲ್ಲಿ ಜನರಿಗೆ ಕರಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸಲಾಯಿತು. ನಿರಂತರ ಸಭೆಗಳನ್ನು ಮಾಡಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಲಾಯಿತು.       ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ ಪ್ರಚಾರಾಂದೋಲನಕ್ಕೆ ಚಾಲನೆ ನೀಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ನೂರಾರು ಮಂದಿ ಪ್ರಾಣತ್ಯಾಗ ಮಾಡಿದ್ದಾರೆ. ಅವರ ಆಶಯಗಳು ಮತ್ತು ದೇಶದ ಸಂಪತ್ತನ್ನು ಉಳಿಸಲು ನಡೆಸುವ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.       ಸ್ವಾತಂತ್ರ್ಯ ಚೌಕದಲ್ಲಿ ನಡೆದ ಪ್ರಚಾರಾಂದೋಲನದಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ…

ಮುಂದೆ ಓದಿ...

ಪೈಪ್‍ಲೈನ್ ಕಾಮಗಾರಿಗೆ ಚಾಲನೆ

ತುಮಕೂರು:       ನಗರದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ಮನೆ ಮನೆಗೆ ಅಡುಗೆ ಅನಿಲ ಸರಬರಾಜು ಮಾಡುವ ಪೈಪ್‍ಲೈನ್ ಅಳವಡಿಸುವ ಕಾಮಗಾರಿಗೆ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಶೆಟ್ಟಿಹಳ್ಳಿ ವೃತ್ತದ ದೋಬಿಘಾಟ್ ರಸ್ತೆಯಲ್ಲಿ ಚಾಲನೆ ನೀಡಿದರು.       ಕೇಂದ್ರ ಮತ್ತು ರಾಜ್ಯ ಸರಕಾರದ 50ಃ50ರ ಅನುದಾನದಲ್ಲಿ ನಡೆಯುತ್ತಿರುವ ಸ್ಮಾರ್ಟ್‍ಸಿಟಿ ಯೋಜಯ ಪಿಪಿಪಿ ಮಾಡಲ್‍ನಲ್ಲಿ ಮನೆಮನೆಗೆ ಅಡುಗೆ ಅನಿಲ ವಿತರಿಸುವ ಪೈಪ್‍ಲೈನ್ ಕಾಮಗಾರಿಯ ಜವಾಬ್ದಾರಿಯನ್ನು ಮೇಗಾ ಗ್ಯಾಸ್ ಏಜೆನ್ಸಿಗೆ ನೀಡಲಾಗಿದೆ.ಮುಂದಿನ ಐದು ವರ್ಷದಲ್ಲಿ ನಗರದ ಎಲ್ಲಾ ಮನೆಗಳಿಗೂ ಪೈಪ್‍ಲೈನ್ ಮೂಲಕವೇ ಅಡುಗೆ ಅನಿಲ ವಿತರಣೆಯಾಗಲಿದೆ ಎಂದು ಶಾಸಕ ಜೋತಿ ಗಣೇಶ್ ತಿಳಿಸಿದ್ದಾರೆ.      ಅಭಿವೃದ್ದಿ ಕಾಮಗಾರಿಗಳು ನಡೆಯುವಾಗ ರಸ್ತೆ ಅಗೆಯುವುದು ಸಹಜ.24*7 ನಿರಂತರ ಕುಡಿಯುವ ನೀರು ಸರಬರಾಜು, ಯುಜಿಡಿ,ಜಿಯೋ ಬ್ರಾಡ್‍ಬಾಂಡ್ ಪೈಪ್‍ಲೈನ್,ಅಡುಗೆ ಅನಿಲ ಸರಬರಾಜು ಹಾಗೂ ವಿದ್ಯುತ್ ಸಂಪರ್ಕಕ್ಕೆ ಸಹ ಕಾಮಗಾರಿಗಳು ನಡೆಯುತ್ತಿದ್ದು, ರಸ್ತೆ…

ಮುಂದೆ ಓದಿ...