ಶಿವಕುಮಾರ ಸ್ವಾಮೀಜಿ ಸಿದ್ಧಗಂಗಾ ಆಸ್ಪತ್ರೆಗೆ ಶಿಫ್ಟ್

ತುಮಕೂರು:       ‘ನಡೆದಾಡುವ ದೇವರು’ ಶಿವಕುಮಾರ ಸ್ವಾಮೀಜಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.        ಶ್ವಾಸಕೋಶದ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಚೆನ್ನೈನ ರೇಲಾ ಆಸ್ಪತ್ರೆಯ ಸೋಂಕು ತಜ್ಞ ಡಾ. ಸುಬ್ರ ಸೂಚನೆ ಮೇರೆಗೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಶ್ರೀಗಳನ್ನು ಸ್ಥಳಾಂತರ ಮಾಡಲಾಗಿದೆ.       ಸಿದ್ದಗಂಗಾ ಆಸ್ಪತ್ರೆ ಆ್ಯಂಬುಲೆನ್ಸ್ ಮೂಲಕ ಮಠದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಶ್ರೀಗಳನ್ನ ವೈದ್ಯರ ಸಲಹೆ ಮೇರೆಗೆ ಶಿಫ್ಟ್ ಮಾಡಲಾಗುತ್ತಿದೆ. ಸೋಂಕು ತಜ್ಞ ಡಾ. ಸುಬ್ರ ಇಂದು ಸಂಜೆ ಶ್ರೀಗಳನ್ನ ತಪಾಸಣೆ ಮಾಡಿದ್ದರು. ಸೋಂಕು ಸಂಪೂರ್ಣವಾಗಿ ನಿವಾರಿಸಲು ಶ್ರೀಗಳನ್ನ ಸಿದ್ದಗಂಗಾ ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಶ್ರೀಗಳಿಗೆ ಈವರೆಗೆ ಮಠದ ಕೊಠಡಿಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಶ್ರೀಗಳಿಗೆ ಗಣ್ಯರ ಕಿರಿಕಿರಿ  ಆಗಬಾರದೆಂದು ಸಿದ್ದಗಂಗಾ ಆಸ್ಪತ್ರೆಗೆ ಗಣ್ಯರ ನಿರ್ಬಂಧ…

ಮುಂದೆ ಓದಿ...

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಮುಂದುವರಿಕೆ

ಬೆಂಗಳೂರು:       ಅನಾರೋಗ್ಯ ಸಮಸ್ಯೆಯಿಂದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಇಂಗಿತ ವ್ಯಕ್ತಪಡಿಸಿದ್ದ ಎಚ್‌.ವಿಶ್ವನಾಥ್‌ ಅವರ ಮನವಿಯನ್ನು ವರಿಷ್ಠ ದೇವೇಗೌಡ ಅವರು ತಿರಸ್ಕರಿಸಿದ್ದಾರೆ.       ಇಂದು ನಡೆದ ಜೆಡಿಎಸ್‌ ಮುಖಂಡರ ಸಭೆಯಲ್ಲಿ ಈ ಬಗ್ಗೆ ದೇವೇಗೌಡರು ಸೂಚನೆ ನೀಡಿದ್ದು, ಲೋಕಸಭೆ ಚುನಾವಣೆ ಮುಂದು ಇರುವ ಕಾರಣ ಅನುಭವಿ ಎಚ್‌.ವಿಶ್ವನಾಥ್ ಅವರನ್ನು ಬದಲಾಯಿಸುವುದು ಸೂಕ್ತವಲ್ಲವೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.        ಇತ್ತೀಚೆಗೆ ಅನಾರೋಗ್ಯ ಕಾಡುತ್ತಲೇ ಇದೆ. ಹಾಗಾಗಿ ನನ್ನ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಲು ಆಗುತ್ತಿಲ್ಲ. ರಾಜ್ಯಾಧ್ಯಕ್ಷನಾಗಿ ಪಕ್ಷದಲ್ಲೂ ಸರಿಯಾಗಿ ತೊಡಗಿಸಿಕೊಳ್ಳಲಾಗುತ್ತಿಲ್ಲ. ಆದ್ದರಿಂದ ನನ್ನ ಸ್ಥಾನದಿಂದ ಬಿಡುಗಡೆ ಕೋರಲು ನಿರ್ಧರಿಸಿದ್ದೆ ಎಂದು ಸ್ಪಷ್ಟಪಡಿಸಿದರು.       ಆದರೆ ವಿಶ್ವನಾಥ್‌ ಅವರ ಬಳಿ ಸಮಾಲೋಚನೆ ನಡೆಸಿರುವ ದೇವೇಗೌಡ ಅವರು, ದೈವಬಲ ನಂಬಿ ಎಲ್ಲರೂ ಜೊತೆಯಾಗಿ ಹೋಗೋಣ. ಲೋಕಸಭೆ ಚುನಾವಣೆ ಎಂಬ ಬಹುದೊಡ್ಡ ಸವಾಲು…

ಮುಂದೆ ಓದಿ...

ಮುಚ್ಚಿಟ್ಟ ಇತಿಹಾಸವನ್ನು ಅರಿಯಬೇಕಿದೆ: ಗುಣಶೀಲ

 ತುಮಕೂರು:       ಭಾರತದಲ್ಲಿ ಮುಚ್ಚಿಟ್ಟ ಇತಿಹಾಸವನ್ನು ತೆರೆದಿಡುವ ಪ್ರಯತ್ನವನ್ನು ಮಾಡಿದ್ದು ಡಾ.ಬಿ.ಅಂಬೇಡ್ಕರ್ ಅವರೊಬ್ಬರೆ, ಅವರ ಸಾಹಿತ್ಯ, ಪುಸ್ತಕಗಳನ್ನು ಓದುವ ಮೂಲಕ ಈ ನೆಲದ ಮುಚ್ಚಿಟ್ಟ ಇತಿಹಾಸವನ್ನು ಅರಿತುಕೊಳ್ಳುವ ಪ್ರಯತ್ನವನ್ನು ಯುವ ಸಮೂಹ ಮಾಡಬೇಕಿದೆ ಎಂದು ಉಪನ್ಯಾಸಕ ಗುಣಶೀಲ ಅಭಿಪ್ರಾಯಪಟ್ಟರು.       ನಗರದ ಅಂಬೇಡ್ಕರ್ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕೋಚಿಂಗ್ ಸೆಂಟರ್‍ನಲ್ಲಿ ನಡೆದ ಸಾವಿತ್ರಿ ಬಾ ಫುಲೆ ಅವರ ಜನ್ಮ ಜಯಂತಿಯಲ್ಲಿ ಮಾತನಾಡಿದ ಅವರು ಇಂದು ಎಲ್ಲರೂ 40 ವರ್ಷಗಳ ಇತಿಹಾಸಕ್ಕೆ ಪ್ರಾಮುಖ್ಯತೆಯನ್ನು ನೀಡುತ್ತಿದ್ದಾರೆ, ಅದಕ್ಕಿಂತಲೂ ಹಿಂದೆ ಅಡಗಿರುವ ಇತಿಹಾಸವನ್ನು ತಿಳಿದುಕೊಳ್ಳುವ ಪ್ರಯತ್ನವನ್ನು ಯಾರು ಮಾಡುತ್ತಿಲ್ಲ, ಅಂಬೇಡ್ಕರ್ ಅವರು ಮುಚ್ಚಿಟ್ಟ ಇತಿಹಾಸವನ್ನು ಶೋಧಿಸಿದಲೇ ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾ ಫುಲೆ ಅವರ ಬಗ್ಗೆ ನಾವೆಲ್ಲ ಇಂದು ತಿಳಿದುಕೊಳ್ಳುವಂತಾಗಿದ್ದು ಎಂದರು.       ಅಂಬೇಡ್ಕರ್ ಅವರಿಗೆ ದಲಿತರ ಸ್ವಾಭಿಮಾನದ ವಿಜಯೋತ್ಸವದ ಸಂಕೇತವಾಗಿರುವ ಕೋರೆಗಾಂವ…

ಮುಂದೆ ಓದಿ...

ಪ್ರಸಾದದಲ್ಲಿ ವಿಷ : ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಚಾಮರಾಜನಗರ:        ಸುಳವಾಡಿ ವಿಷ ಪ್ರಸಾದ ಸೇವನೆ ದುರಂತಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಜ.16ರ ವರೆಗೆ ವಿಸ್ತರಿಸಲಾಗಿದೆ.       ಮೈಸೂರಿನ ಕಾರಾಗೃಹದಲ್ಲಿದ್ದ ನಾಲ್ವರು ಆರೋಪಿಗಳಾದ ಸಾಲೂರು ಮಠದ ಕಿರಿಯ ಸ್ವಾಮೀಜಿ ಆಗಿದ್ದ ಇಮ್ಮಡಿ ಮಹದೇವ ಸ್ವಾಮಿ,‌ ಅಂಬಿಕಾ, ಮಾದೇಶ್ ಮತ್ತು ದೊಡ್ಡಯ್ಯರನ್ನು ಗುರುವಾರ ಬೆಳಗ್ಗೆ 11.30 ಗಂಟೆ ವೇಳೆ ಜಿಲ್ಲಾ ಪೊಲೀಸರು ಕೊಳ್ಳೇಗಾಲದ ಹಿರಿಯ ಶ್ರೇಣಿ ನ್ಯಾಯಾಧೀಶ ಎಸ್.ಜೆ.ಕೃಷ್ಣ ಅವರ ಎದುರು ಹಾಜರು ಪಡಿಸಿದ್ದರು.       ಇಮ್ಮಡಿ ಮಹದೇವ ಸ್ವಾಮಿ ಬಿಳಿ ಪಂಚೆ, ಶರ್ಟ್, ಶಲ್ಯ ಹಾಕಿಕೊಂಡು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಮುಂದೆ ಓದಿ...

ಸ್ಯಾಂಡಲ್ ವುಡ್ ನ ‘8’ ನಟ-ನಿರ್ಮಾಪಕರ ಮೇಲೆ ಐಟಿ ರೈಡ್

ಬೆಂಗಳೂರು:       ಸ್ಯಾಂಡಲ್ ವುಡ್ ಗೆ ಗುರುವಾರ ಬೆಳಿಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮುಂಜಾನೆ ಆರು ಗಂಟೆಗೆ ಕನ್ನಡ ಚಿತ್ರರಂಗದ ಸ್ಟಾರ್ ನಟರು ಹಾಗೂ ಸ್ಟಾರ್ ನಿರ್ಮಾಪಕರ ಮನೆ ಮೇಲೆ ದಾಳಿ ಮಾಡಿ ಗಾಬರಿ ಮೂಡಿಸಿದ್ದಾರೆ.       ಕನ್ನಡ ಚಿತ್ರರಂಗದ 8 ಜನ ಖ್ಯಾತ ನಟ ಹಾಗೂ ನಿರ್ಮಾಪಕರು ಮನೆ, ಕಛೇರಿ ಮತ್ತು ಸಂಬಂಧಿಕರ ಮನೆ ಮೇಲೆ ರೈಡ್ ಮಾಡಲಾಗಿದ್ದು, ಸುಮಾರು 200 ಅಧಿಕಾರಿಗಳು, ಬೆಂಗಳೂರಿನ 25 ಕಡೆ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.       ಈ ದಾಳಿಗೆ ಒಳಗಾಗಿರುವ ನಟ ಮತ್ತು ನಿರ್ಮಾಪಕರು ಸಾಮಾನ್ಯದವರಲ್ಲ. ಇಂಡಸ್ಟ್ರಿಯಲ್ಲಿ ಹೆಚ್ಚು ಖ್ಯಾತಿ ಮತ್ತು ಅತಿ ಹೆಚ್ಚು ಸಂಭಾವನೆ ಪಡೆಯುವ ಕಲಾವಿದರಾಗಿದ್ದಾರೆ.  ರಾಕಿಂಗ್ ಸ್ಟಾರ್ ಯಶ್:       ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಚಿನ್ನಾಭರಣಗಳು, ಹಣ, ಬ್ಯಾಂಕ್ ವ್ಯವಹಾರದ…

ಮುಂದೆ ಓದಿ...

2019ರ ಎಂ.ಪಿ.ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್.ಪಿ.ಎಂ. ಕಣಕ್ಕೆ

 ತುಮಕೂರು:       ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಹಾಲಿ ಸದಸ್ಯರಾಗಿರುವ ಎಸ್.ಪಿ.ಮುದ್ದಹನುಮೇಗೌಡರೇ ಸ್ಪರ್ಧಿಸಲಿದ್ದು,ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲಿದ್ದಾರೆ ಎಂಬ ಮಾಜಿ ಶಾಸಕ ಹೆಚ್.ನಿಂಗಪ್ಪ ಹೇಳಿಕೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು ಎಂದು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್ ತಿಳಿಸಿದ್ದಾರೆ.       ಈ ಕುರಿತು ಪ್ರತಿಕಾ ಹೇಳಿಕೆ ನೀಡಿರುವ ಅವರು,2019ರ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತಂತೆ ಯಾವುದೇ ಒಪ್ಪಂದಗಳು ಇದುವರೆಗೂ ಮೈತ್ರಿ ಸರಕಾರದಲ್ಲಿ ನಡೆದಿಲ್ಲ. ಈಗಾಗಲೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ಹಿರಿಯ ಮುಖಂಡರು ಹಾಲಿ ಇರುವ ಸಂಸದರಿಗೆ ಟಿಕೇಟ್ ನೀಡುವುದಾಗಿ ಘೋಷಿಸಿದೆ. ಅದಾಗ್ಯೂ ಹೆಚ್.ನಿಂಗಪ್ಪ ಅವರು ಈ ರೀತಿ ಹೇಳಿಕೆ ನೀಡಿರುವುದು ಕಾರ್ಯಕರ್ತರಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಲೋಕಸಭಾ ಸೀಟು ಕೈತಪ್ಪಲಿದೆ ಎಂದು ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.ತುಮಕೂರು ಲೋಕಸಭಾ ಕ್ಷೇತ್ರದಲ್ಲಿ…

ಮುಂದೆ ಓದಿ...

ಶಬರಿ ಮಲೆಗೆ ಮಹಿಳೆಯರ ಪ್ರವೇಶ : ಪ್ರತಿಭಟನೆ

 ತುಮಕೂರು:       ಮಹಿಳೆಯರು ಶಬರಿಮಲೆ ದೇಗುಲವ ಪ್ರವೇಶಿಸಿರುವುದು ದಾಖಲೆಗಷ್ಟೇ ಹೊರತು ಅವರಿಗೆ ದೇವರ ದರ್ಶನವಾಗಿಲ್ಲ, ಮಹಿಳೆಯರನ್ನು ಕರೆದುಕೊಂಡು ಹೋಗಿ ದರ್ಶನ ಮಾಡಿಸುವಂತಹ ಅಚಾತುರ್ಯವನ್ನು ಕೇರಳ ಸರ್ಕಾರ ಮಾಡಿರುವುದು ಸರಿಯಲ್ಲ ಎಂದು ಅಯ್ಯಪ್ಪಸ್ವಾಮಿ ಸೇವಾ ಸಮಾಜಂನ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್ ಹೇಳಿದರು.       ನಗರದ ಟೌನ್‍ಹಾಲ್ ಸರ್ಕಲ್‍ನಲ್ಲಿ ಶಬರಿಮಲೆಗೆ ಮಹಿಳೆಯ ಪ್ರವೇಶಿಸಿರುವುದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ನಡೆಸಿದ ಮಾನವ ಸರಪಳಿ ನಿರ್ಮಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಶಬರಿಮಲೆಗೆ ಮಹಿಳೆಯರನ್ನು ಕರೆದುಕೊಂಡು ಹೋಗಿ ದರ್ಶನ ಮಾಡಿಸಿರುವ ಪಿಣರಾಯಿ ಅವರ ಕಮ್ಯುನಿಸ್ಟ್ ಸರ್ಕಾರ ಅಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆಯನ್ನು ಮಾಡಿದೆ, ಪಿಣರಾಯಿ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ, ಎಲ್ಲ ಸಂಘಟನೆಗಳೊಂದಿಗೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.       ಕಮ್ಯುನಿಸ್ಟ್ ಸರ್ಕಾರದ ವಿರುದ್ಧ ಈಗಾಗಲೇ ಕೇರಳದಲ್ಲಿ ಅಯ್ಯಪ್ಪಸ್ವಾಮಿ ಆ್ಯಕ್ಷನ್ ಕೌನ್ಸಿಲ್ ಮೂಲಕ…

ಮುಂದೆ ಓದಿ...