ಭಾರತ ಬಂದ್ ಪ್ರತಿಭಟನೆ ವೇಳೆ ಮಹಿಳೆ ಸಾವು

ಕಾರವಾರ:

      ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆ ಮೆರವಣಿಗೆ ವೇಳೆ ಅಂಗನವಾಡಿ ಸಹಾಯಕ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ.

      ಮೃತ ಮಹಿಳೆಯನ್ನು ಮುಂಡಗೋಡು ತಾಲೂಕಿನ ಶಿಡ್ಲಗುಂಡಿ ಗ್ರಾಮದ ಅಂಗನವಾಡಿಯ ಸಹಾಯಕಿ ಶಾಂತವ್ವ ಚಕ್ರಸಾಲಿ (57) ಎಂದು ಗುರುತಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ತಾಲೂಕು ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನೆ ಮೆರವಣಿಗೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಶಾಂತವ್ವ ಏಕಾಏಕಿ ಕುಸಿದು ಬಿದ್ದಿದ್ದಾರೆ.

      ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆಸ್ಪತ್ರೆ ಬಳಿ ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು ಜಮಾಯಿಸಿದ್ದಾರೆ.

(Visited 16 times, 1 visits today)

Related posts

Leave a Comment