ರಾಜ್ಯಾದ್ಯಂತ ಭಾರತ್ ಬಂದ್ !!

ಬೆಂಗಳೂರು:

      ಭಾರತಕ್ಕೆ ‘ಬಂದ್’ ಗಳೇನು ಹೊಸತಲ್ಲ. ಒಂದಿಲ್ಲೊಂದು ಕಾರಣಕ್ಕೆ ತಿಂಗಳಿಗೊಂದಾದರೂ ಬಂದ್ ನಡೆಯುವುದು ಮಾಮೂಲು.

      ಅಂತೆಯೇ ಇಂದು ಜನವರಿ 8 ಮತ್ತು 9 ರಂದು ಭಾರತ್ ಬಂದ್ ಗೆ ವಿವಿಧ ಕಾರ್ಮಿಕ ಸಂಘಟನೆಗಳು ಕರೆನೀಡಿವೆ. ಒಟ್ಟು 12 ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೇಶವ್ಯಾಪಿ ಮುಷ್ಕರ ನಡೆಸಲಾಗುತ್ತಿದ್ದು, ಜನವರಿ 8 ರ ಬೆಳಿಗ್ಗೆ 6 ರಿಂದ ಜನವರಿ 9 ರ ಸಂಜೆ 5 ರವರೆಗೆ ಬಂದ್ ನಡೆಯಲಿದೆ.

      ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವೂ ಬಂದ್ ಗೆ ಬೆಂಬಲ ನೀಡುವ ಸಾಧ್ಯತೆ ಇದೆ. ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಸಂಸ್ಥೆಗಳು ಬಂದ್ ಗೆ ಬೆಂಬಲ ನೀಡಿದ್ದು, ಉಬರ್ ಮತ್ತು ಓಲಾ ಕ್ಯಾಬ್ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿಲ್ಲ.

ಜನವರಿ 8, 9ಕ್ಕೆ ದೇಶವ್ಯಾಪಿ ಮುಷ್ಕರ : ಏನಿರುತ್ತೆ, ಏನಿರಲ್ಲ?

      ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಶಾಪ್, ಆಂಬುಲೆನ್ಸ್ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ.  

(Visited 7 times, 1 visits today)

Related posts

Leave a Comment