ನಾಪತ್ತೆಯಾಗಿದ್ದ ತುಮಕೂರು ವಿವಿ ಪ್ರಾಧ್ಯಾಪಕ ನೇಣಿಗೆ ಶರಣು!

ತುಮಕೂರು:       ಇತ್ತೀಚೆಗೆ ನಾಪತ್ತೆಯಾಗಿದ್ದ ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.       ಈಶ್ವರ್ (57)) ಮೃತದೇಹ ತುಮಕೂರು ಇಸ್ರೋ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವರು ಡಿಸೆಂಬರ್ 9ರಂದು ವಾಯುವಿಹಾರಕ್ಕೆಂದು ಹೊರಟವರು ಮತ್ತೆ ಹಿಂತಿರುಗಿರಲಿಲ್ಲ.       ಈಶ್ವರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಬೇಕೆಂದು ಶಂಕೆ ವ್ಯಕ್ತವಾಗಿದ್ದು ಪ್ರಾಂಶುಪಾಲರ ನಾಪತ್ತೆ ಮತ್ತು ಸಾವು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.       ವಿಶ್ವವಿದ್ಯಾನಿಲಯದಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಈಶ್ವರ್ ವಿರುದ್ಧ ಕೆಲ ದಿನಗಳ ಹಿಂದಷ್ಟೇ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು.ಅವರ ಸಹೋದ್ಯೋಗಿಗಳೇ ಈ ಆರೋಪ ಹೊರಿಸಿದ್ದರು. ಆದರೆ ಇನ್ನೊಂದೆಡೆ ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಸಹೋದ್ಯೋಗಿಗಳ ವಿರುದ್ಧ ಈಶ್ವರ್ ಪೋಷಕರು ಕಿರುಕುಳದ ಆರೋಪ ಮಾಡಿದ್ದಾರೆ.       ಘಟನೆ ಕುರಿತು ತುಮಕೂರು ಹೊಸ…

ಮುಂದೆ ಓದಿ...

“ಹೆಣ್ಣುಮಕ್ಕಳು ಸಮಾಜಮುಖಿಯಾದಾಗ ಮಾತ್ರ ಸ್ವಾವಲಂಭಿಯಾತ್ತಾರೆ”

 ತುಮಕೂರು:     ಮಹಿಳೆಯರು ಕೇವಲ ಮನೆಕೆಲಸಕ್ಕೆ ಸೀಮಿತವಾಗಿರದೆ ಹೊರಗಿನ ಪ್ರಪಂಚದಲ್ಲಿ ಹೇಗೆ ಜೀವನವನ್ನು ಎದುರಿಸಬೇಕು. ಮತ್ತು ಮಹಿಳೆಯರಿಗೆ ತಾವು ಬೆಳೆಯಲು ತಾವೇ ಮನಸ್ಸು ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲತಾ ರವಿಕುಮಾರ್ ರವರು ಸ್ಪೂರ್ತಿದಾಯಕ ಮಾತುಗಳನ್ನು ಹೇಳಿದರು.        ಇಂದು ತುಮಕೂರು ನಗರದ ಸಮರ್ಥ್ ಫೌಂಡೇಷನ್ ಕೌಶಲ್ಯಾಭಿವೃದ್ದಿ ಮತ್ತು ತರಬೇತಿ ಕೇಂದ್ರದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಚಿತ ಟೈಲರಿಂಗ್ ತರಬೇತಿಯ ಪ್ರಮಾಣ ಪತ್ರ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.       ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಶಾರದ ನರಸಿಂಹಮೂರ್ತಿಯವರು ಮಾತನಾಡುತ್ತಾ ನೀವು ತರಬೇತಿಗಷ್ಟೇ ಸೀಮಿತವಾಗದೆ ನೀವು ಕೂಡ ಉದ್ಯಮ ಶೀಲರಾಗಿ ಬೆಳೆಯಬಹುದು ಈ ತರಬೇತಿಯು ನಿಮಗೆ ಒಂದು ಪ್ರಾರಂಭ ಅಷ್ಟೇ ನೀವು ಆರ್ಥಿಕವಾಗಿ ಸಬಲರಾಗಲು ನಿಮಗೆ ಹೊಸ ಹೊಸ ದಾರಿಯನ್ನು ಇದರಿಂದ ಕಂಡುಕೊಳ್ಳಬಹುದು.ಎಂದು ಹೇಳಿದರು.…

ಮುಂದೆ ಓದಿ...

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಹಿಂದುಳಿದ ಜಿಲ್ಲೆ: ಸಚಿವರ ತೀವ್ರ ಅಸಮಾಧಾನ

 ತುಮಕೂರು :       ಜಿಲ್ಲೆಯು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಹಿಂದುಳಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ಅವರು ತೀವ್ರ ಅಸಮಧಾನ ವ್ಯಕ್ತಪಡಿಸಿದರು.       ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿಂದು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರ್.ಸಿ.ಹೆಚ್., ಜನನಿ ಸುರಕ್ಷಾ, ಎನ್‍ಯುಹೆಚ್‍ಎಂ, ಕೆಪಿಎಂಇ ಮತ್ತು ಪಿಸಿಪಿಎನ್‍ಡಿಟಿ, ಐಸಿಟಿಸಿ ಚಟುವಟಿಕೆಗಳ ಅನುಷ್ಠಾನದಲ್ಲಿ ಜಿಲ್ಲೆಯು ಹಿಂದುಳಿದಿದ್ದು, ಇನ್ನಾದರೂ ಪ್ರಗತಿ ಸಾಧಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಸೂಚಿಸಿದರು.       ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ವಾರದೊಳಗೆ ಕ್ರಮ ಕೈಗೊಳ್ಳಬೇಕೆಂದು ಡಿಹೆಚ್‍ಓ ಅವರಿಗೆ ತಾಕೀತು ಮಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು 2016ರಲ್ಲಿಯೇ ಸರ್ಕಾರದಿಂದ ಅನುಮೋದನೆ ನೀಡಿದ್ದರೂ ಈವರೆವಿಗೂ ಕಾರ್ಯಗತವಾಗಿಲ್ಲವೆಂದು ಬೇಸರ…

ಮುಂದೆ ಓದಿ...

8ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಕೇಂದ್ರ ಸಜ್ಜು

ನವದೆಹಲಿ:       ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ತ್ರಿಭಾಷಾ ಸೂತ್ರದ ಅನ್ವಯ ಎಂಟನೇ ತರಗತಿವರೆಗೆ ಹಿಂದಿ ಭಾಷೆ ಕಲಿಕೆ ಕಡ್ಡಾಯ ಆಗಲಿದೆ. ಹೊಸ ಶಿಕ್ಷಣ ನೀತಿ ವರದಿ ತಯಾರಿಸಲಾಗಿದ್ದು, ಕೇಂದ್ರಕ್ಕೆ ಸಲ್ಲಿಕೆ ಆಗಲಿದೆ.       ಕೆ.ಕಸ್ತೂರಿ ರಂಗನ್ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯು ಶಿಕ್ಷಣ ನೀತಿ ಕುರಿತಾಗಿ ವರದಿ ತಯಾರಿಸಿದ್ದು, ವರದಿ ಜಾರಿಯಾದಲ್ಲಿ ದೇಶದಾದ್ಯಂತ ಎಂಟನೇ ತರಗತಿ ವರೆಗೂ ಹಿಂದಿ ಶಿಕ್ಷಣ ಕಡ್ಡಾಯ ಆಗಲಿದೆ.       ಕೆ.ಕಸ್ತೂರಿರಂಗನ್ ಅವರ ಸಮಿತಿಯು ಭಾರತ ಕೇಂದ್ರಿತ ಶಿಕ್ಷಣ ಪದ್ಧತಿಗೆ ಒತ್ತು ನೀಡುವ ಸಲುವಾಗಿ ಶಿಕ್ಷಣ ನೀತಿಯಲ್ಲಿ ಹಲವು ಬದಲಾವಣೆಗಳನ್ನು ಸೂಚಿಸಲಿದೆ. ವ್ಯವಸ್ಥಿತ ಮಾದರಿಯಲ್ಲಿ ಏಕರೂಪದ ಪ್ರಾಥಮಿಕ ಶಿಕ್ಷಣವನ್ನು ದೇಶದಾದ್ಯಂತ ನೀಡುವಂತೆ ಸಹ ವರದಿಯಲ್ಲಿ ಹೇಳಲಾಗಿದೆ.       2018 ರ ಡಿ. 31 ರಂದು ಅವಧಿ ಕೊನೆಗೊಳ್ಳುವ ಮುಂಚೆ ಸಮಿತಿಯು ಮಾನವ…

ಮುಂದೆ ಓದಿ...

ನಾದೋಪಾಸನ ತಂಡದಿಂದ ಕನ್ನಡ, ಹಿಂದಿ ಚಿತ್ರಗೀತೆಗಳ ರಸಮಂಜರಿ

ತುಮಕೂರು:       ರಾಜ್ಯದ ಲೋಕೋಪಯೋಗಿ ಸೇರಿದಂತೆ ವಿವಿಧ ಅಭಿವೃದ್ಧಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಜಿನಿಯರ್‍ಗಳು ಕರ್ತವ್ಯದ ನಂತರ ಬಿಡುವಿನ ವೇಳೆಯಲ್ಲಿ ಹವ್ಯಾಸಕ್ಕೆಂದು ಹಳೆಯ ಜನಪ್ರಿಯ ಕನ್ನಡ ಹಾಗೂ ಹಿಂದಿ ಚಲನಚಿತ್ರ ಗೀತೆಗಳನ್ನು ಹಾಡುತ್ತ,ಹಾಡುತ್ತ ಒಂದು ತಂಡವಾಗಿ ರೂಪುಗೊಂಡಿದ್ದಾರೆ. ಮುಖ್ಯ ಇಂಜಿನಿಯರ್ ಡಿ.ಉದಯಶಂಕರ್ ಈ ತಂಡದ ಸಂಸ್ಥಾಪಕ ಅಧ್ಯಕ್ಷರಾಗಿ “ನಾದೋಪಾಸನ” ಎಂಬ ಹೆಸರಿನ ನೊಂದಾಯಿತ ಸಂಗೀತ ತಂಡವೊಂದನ್ನು ರಚಿಸಿಕೊಂಡಿದ್ದಾರೆ. ಇವರು ಈಗಾಗಲೇ ರಾಜಧಾನಿ ಬೆಂಗಳೂರಿನ ವಿವಿಧೆಡೆ ಐದಾರು ಸಂಗೀತ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಮೈಸೂರು ದಸರಾ, ಚಿತ್ರಕಲಾಪರಿಷತ್ತಿನ ಚಿತ್ರಸಂತೆ, ಕರ್ನಾಟಕ ಸಚಿವಾಲಯ ಕ್ಲಬ್, ಇಂಜಿನಿಯರ್ಸ್ ಕ್ಲಬ್ ಮೊದಲಾದೆಡೆ ಜನಾಕರ್ಷಣೀಯ ಕಾರ್ಯಕ್ರಮಗಳನ್ನು ನೀಡಿ ಜನಮನ್ನಣೆ ಪಡೆದಿದ್ದಾರೆ.       “ಒಳಿತು ಮಾಡು ಮನುಜ ನೀನಿರೋದು ಮೂರು ದಿವಸ” ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮಗಳನ್ನು ನೀಡುತ್ತ, ಅಂಧರು, ಅಶಕ್ತರು ಹಾಗೂ ಅನಾಥರನ್ನು ಸಂಗೀತ ಸಂಜೆಗೆ ಕರೆಸಿ, ಅವರ ಮನರಂಜಿಸಿ, ಅಲ್ಲಿ…

ಮುಂದೆ ಓದಿ...

ಪದ್ಮಶ್ರೀ ಸೂಲಗಿತ್ತಿ ನರಸಮ್ಮ ಸ್ಮರಣೀಯವಾಗಬೇಕು: ಮುರುಳೀಧರ ಹಾಲಪ್ಪ

 ತುಮಕೂರು:       ಸಾವಿರಾರು ಮಕ್ಕಳ ಜನನಕ್ಕೆ ಕಾರಣವಾಗಿರುವ ಮಹಾತಾಯಿ ಪದ್ಮಶ್ರೀ ಡಾ|| ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ನಗರದಲ್ಲಿನ ವೃತ್ತಕ್ಕೆ ಅವರ ಹೆಸರನ್ನು ನಾಮಕರಣ ಮಾಡುವಂತೆ ಜಿಲ್ಲಾಡಳಿತಕ್ಕೆ ಡಿಸಿಎಂ ಪರಮೇಶ್ವರ್ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ತಿಳಿಸಿದರು.       ವಾರ್ಡ್.12 ಗಂಗಸಂದ್ರದಲ್ಲಿ ಡಾ.ಸೂಲಗಿತ್ತಿ ನರಸಮ್ಮ ಸ್ಮಾರಕ ಶಂಕುಸ್ಥಾಪನೆ ಹಾಗೂ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಸ್ತ್ರಚಿಕಿತ್ಸಾ ತಜ್ಞರಿಗಿಂತ, ಹೈಟೆಕ್ ಆಸ್ಪತ್ರೆಗಳ ಅತ್ಯಾಧುನಿಕ ಉಪಕರಣಗಳ ನೆರವಿಲ್ಲದೆ ಸಾವಿರಾರು ಹೆರಿಗೆಯನ್ನು ಯಶಸ್ವಿಯಾಗಿ ಮಾಡಿರುವ ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ವೃತ್ತ, ರಸ್ತೆ, ಪಾರ್ಕ್‍ಗೆ ನಾಮಕರಣ ಮಾಡುವಂತೆ ಈಗಾಗಲೇ ಉಪಮುಖ್ಯಮಂತ್ರಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆ ಸೂಲಗಿತ್ತಿ ನರಸಮ್ಮ ಅವರ ಹೆಸರು ನಾಮಕರಣ ಮಾಡಲು ಶೀಘ್ರ ಕ್ರಮವಹಿಸಬೇಕಿದೆ ಎಂದು ಹೇಳಿದರು.…

ಮುಂದೆ ಓದಿ...

ಬೀದಿಬದಿ ವ್ಯಾಪಾರಿಗಳ ತೆರವು: ಪ್ರತಿಭಟನೆ

 ತುಮಕೂರು:       ನಗರದ ಜೆಸಿ ರಸ್ತೆಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಸ್ಥರಿಗೆ ಯಾವುದೇ ನೋಟೀಸ್ ನೀಡದೇ, ಜೆಸಿಬಿ ಯಂತ್ರಗಳ ಮೂಲಕ ಅಂಗಡಿಗಳನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.       ಟೌನ್‍ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವ್ಯಾಪಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಸಂಘದ ರಾಜ್ಯಾಧ್ಯಕ್ಷ ಬಾಬಾ ಮಾತನಾಡಿ ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸದೇ ಸುಪ್ರೀಂಕೋರ್ಟ್ ಆದೇಶ ನೀಡಿದ್ದರೂ, ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಅಕ್ರಮವಾಗಿ ಒಕ್ಕಲೆಬ್ಬಿಸುವ ಪ್ರಯತ್ನವನ್ನು ಮಾಡಲಾಗುತ್ತಿದ್ದು, ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಬೀದಿಬದಿ ವ್ಯಾಪಾರಿಗಳ ಹಿತ ಕಾಯುವಂತೆ ಮನವಿ ಮಾಡಿದರು.       ಕಳೆದ 10-15 ವರ್ಷಗಳಿಂದ ಅಲ್ಲಿಯೇ ವ್ಯಾಪಾರ ಮಾಡಿಕೊಂಡು ಬದುಕು…

ಮುಂದೆ ಓದಿ...

ಒತ್ತಡದಿಂದ ಮುಕ್ತರಾಗಲು ಕ್ರೀಡೆ ಸಹಕಾರಿ : ಸಂಸದ ಎಸ್.ಪಿ. ಮುದ್ದಹನುಮೇಗೌಡ

 ತುಮಕೂರು :       ಸರ್ಕಾರಿ ನೌಕರರು ಕೆಲಸದ ಒತ್ತಡ ಹಾಗೂ ಮಾನಸಿಕ ಒತ್ತಡಗಳಿಂದ ಮುಕ್ತರಾಗಲು ಕ್ರೀಡೆ ಸಹಕಾರಿ ಎಂದು ಸಂಸದ ಎಸ್.ಪಿ. ಮುದ್ದಹನುಮೇಗೌಡ ಅಭಿಪ್ರಾಯಪಟ್ಟರು.       ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿಂದು ಏರ್ಪಡಿಸಲಾಗಿದ್ದ “ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ”ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಸರ್ಕಾರಿ ನೌಕರರು ಬೆಳಗಿನಿಂದ ಸಂಜೆಯವರೆಗೂ ಒತ್ತಡದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಅಲ್ಲದೆ ಕುಳಿತಲ್ಲೇ ಕೆಲಸ ಮಾಡುವುದರಿಂದ ಸ್ಥೂಲಕಾಯ ಉಂಟಾಗಿ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇರುತ್ತದೆ. ಇದರಿಂದ ಮಾನಸಿಕ ಒತ್ತಡ, ಅನಾರೋಗ್ಯ ಸಮಸ್ಯೆಯನ್ನು ಅನುಭವಿಸುತ್ತಿರುತ್ತಾರೆ. ನಿಯಮಿತವಾಗಿ ಯೋಗ, ಧ್ಯಾನ, ದೈಹಿಕ ವ್ಯಾಯಾಮ, ಕ್ರೀಡಾಭ್ಯಾಸವನ್ನು ರೂಢಿಸಿಕೊಳ್ಳುವುದರಿಂದ ಇಂತಹ ಸಮಸ್ಯೆಗಳಿಂದ ದೂರವಾಗಬಹುದು. ಅಲ್ಲದೆ…

ಮುಂದೆ ಓದಿ...

ಸ್ವಾಮೀಜಿ ಶೀಘ್ರ ಗುಣಮುಖರಾಗಲಿ : ಆರೋಗ್ಯ ಸಚಿವರ ಆಶಯ

ತುಮಕೂರು :       ಸಿದ್ದಗಂಗಾ ಶ್ರೀಗಳಾದ ಡಾ: ಶಿವಕುಮಾರ ಸ್ವಾಮೀಜಿ ಅವರು ಶೀಘ್ರ ಗುಣಮುಖರಾಗಲಿ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರು ಆಶಿಸಿದರು.        ನಗರದ ಸಿದ್ದಗಂಗಾ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ನಡೆದಾಡುವ ದೇವರು, ಸಿದ್ದಗಂಗೆಯ ಸಿದ್ದಿ ಪುರುಷ ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದರು.       ಇಲ್ಲಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ಮುನ್ನ ಸಿದ್ದಗಂಗಾ ಆಸ್ಪತ್ರೆಗೆ ಆಗಮಿಸಿದ ಸಚಿವ ಶಿವಾನಂದ ಪಾಟೀಲ್ ಅವರು ಶ್ರೀಗಳ ದರ್ಶನಾಶೀರ್ವಾದ ಪಡೆದು ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಆಸ್ಪತ್ರೆಯ ವೈದ್ಯರು ಸಹ ಶ್ರೀಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದರು.…

ಮುಂದೆ ಓದಿ...

ಮಾದರಿ ಜಿಲ್ಲಾಸ್ಪತ್ರೆ: ಆರೋಗ್ಯ ಸಚಿವರಿಂದ ಮೆಚ್ಚುಗೆ

 ತುಮಕೂರು :       ಜಿಲ್ಲಾಸ್ಪತ್ರೆಯು ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.       ಜಿಲ್ಲಾಸ್ಪತ್ರೆಗಿಂದು ಭೇಟಿ ನೀಡಿ ಪರಿಶೀಲಿಸಿದ ಅವರು, ತುಮಕೂರಿನ ಜನತೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಹೋಗದಂತೆ ಜಿಲ್ಲಾಸ್ಪತ್ರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರದ ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಗಳಿಂದ ಆಸ್ಪತ್ರೆಗಳಿಗೆ ಆದಾಯ ಬರುತ್ತಿದ್ದು, ಈ ಯೋಜನೆಯಡಿ ತುಮಕೂರು ಜಿಲ್ಲಾಸ್ಪತ್ರೆಯು ಮಾಹೆಯಾನ 30ಲಕ್ಷ ರೂ.ಗಳಿಗೂ ಹೆಚ್ಚು ಆದಾಯವನ್ನು ಗಳಿಸುವ ಮೂಲಕ ಇತರೆ ಜಿಲ್ಲೆಗಳಿಗಿಂತ ಮುಂಚೂಣಿಯಲ್ಲಿದೆ. ಗಳಿಸಿದ ಆದಾಯದ ಹಣವನ್ನು ಶೇ. 50ರಷ್ಟು ಜಿಲ್ಲಾಸ್ಪತ್ರೆಯ ಅಭಿವೃದ್ಧಿ, ಶೇ. 30ರಷ್ಟು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಪ್ರೋತ್ಸಾಹಧನಕ್ಕಾಗಿ ವಿನಿಯೋಗಿಸಲಾಗುವುದಲ್ಲದೆ ಉಳಿದ ಶೇ.20ರಷ್ಟು ಹಣವನ್ನು ಸರ್ಕಾರದ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದರು.        ಸ್ಮಾರ್ಟ್ ಸಿಟಿ…

ಮುಂದೆ ಓದಿ...