ದೈವಿ ಶಕ್ತಿಯಿಂದ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ಸಿಎಂ

ತುಮಕೂರು:      ಸಿದ್ಧಗಂಗಾ ಶ್ರೀಗಳು ದೈಹಿಕವಾಗಿ ಕ್ಷೀಣಿಸಿದರೂ ದೈವಿ ಶಕ್ತಿಯಿಂದ ಆರೋಗ್ಯದಲ್ಲಿ ಪ್ರತಿ ಕ್ಷಣದಲ್ಲೂ ಚೇತರಿಕೆ ಕಾಣುತ್ತಿದ್ದಾರೆ ಸಿಎಂ ಹೆಚ್.ಡಿಕೆ ಕುಮಾರಸ್ವಾಮಿಯವರು ಹೇಳಿದ್ದಾರೆ.         ಶ್ರೀಗಳ ಆರೋಗ್ಯವನ್ನು ವಿಚಾರಿಸಲು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಆರೋಗ್ಯದಲ್ಲಿ ಯಾವುದೇ ತೊಂದರೆಯಿಲ್ಲ. ಆರೋಗ್ಯದ ತೊಂದರೆಯಿಂದ ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳ ಆರೋಗ್ಯದಲ್ಲಿ ಪವಾಡ ರೀತಿಯಲ್ಲಿ ಚೇತರಿಕೆ ಕಂಡು ಬಂದಿದೆ. ವೈದ್ಯರು ಅಂತಿಮ ತೀರ್ಮಾನ ತೆಗೆದುಕೊಂಡು ಶ್ರೀಗಳನ್ನು ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರಿಸಿದ ನಂತರ ಆರೋಗ್ಯದಲ್ಲಿ ಉತ್ತಮ ಬೆಳವಣಿಗೆ ಕಂಡು ಬಂದಿರುವುದು ಸಮಾಧಾನ ತಂದಿದೆ. ತಜ್ಞ ವೈದ್ಯರ ನೇತೃತ್ವದಲ್ಲಿ ಡಾ: ಪರಮೇಶ ಅವರು ಶ್ರೀಗಳಿಗೆ ಮಠದಲ್ಲಿಯೇ ಚಿಕಿತ್ಸೆ ಮುಂದುವರೆಸಿದ್ದಾರೆ. ವಿದೇಶದಲ್ಲಿ ದೊರೆಯುವಂತಹ ಚಿಕಿತ್ಸಾ ವಿಧಾನವನ್ನು ಶ್ರೀಗಳಿಗೆ ನೀಡಲಾಗುತ್ತಿದ್ದು, ಭಕ್ತರು ಆತಂಕಪಡುವಂತಿಲ್ಲ ಎಂದರು.       ಶ್ರೀಗಳ ಉಸಿರಾಟಕ್ಕಾಗಿ ಕಳೆದ 12-13…

ಮುಂದೆ ಓದಿ...

ತುಮಕೂರು ಮಹಾ ನಗರಪಾಲಿಕೆ ಆಯುಕ್ತರಾಗಿ ಐ.ಎ.ಎಸ್. ಅಧಿಕಾರಿ ಟಿ. ಭೂಪಾಲನ್

ತುಮಕೂರು:          ತುಮಕೂರು ಮಹಾ ನಗರಪಾಲಿಕೆ ಆಯುಕ್ತರಾಗಿ ಐ.ಎ.ಎಸ್. ಅಧಿಕಾರಿ ಟಿ. ಭೂಪಾಲನ್ ಅವರು ಇಂದು ಅಧಿಕಾರ ಸ್ವೀಕರಿಸಿದರು.       ಉಡುಪಿ ಜಿಲ್ಲೆ ಕುಂದಾಪುರ ಉಪವಿಭಾಗದ ಹಿರಿಯ ಉಪವಿಭಾಗಾಧಿಕಾರಿಗಳಾಗಿದ್ದ ಟಿ. ಭೂಪಾಲನ್ ಅವರು ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ಎಲ್. ಮಂಜುನಾಥಸ್ವಾಮಿ ಅವರಿಂದ ಅಧಿಕಾರ ವಹಿಸಿಕೊಂಡರು.

ಮುಂದೆ ಓದಿ...

ಫೆ.3ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

 ತುಮಕೂರು:       ಜಿಲ್ಲಾದ್ಯಂತ ಫೆಬ್ರುವರಿ 3 ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ನಿಗಧಿತ ಗುರಿಯನ್ನು ಸಾಧಿಸಬೇಕೆಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜರುಗಿದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಚಾಲನಾ ಸಮಿತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪ್ರತೀ ಬಾರಿ 2 ಸುತ್ತಿನಲ್ಲಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿತ್ತು. ಈ ಬಾರಿ ಒಂದೇ ಸುತ್ತಿನಲ್ಲಿ ಹಮ್ಮಿಕೊಳ್ಳುತ್ತಿರುವುದರಿಂದ 0-5 ವರ್ಷದೊಳಗಿನ ಯಾವೊಂದು ಮಗುವೂ ಲಸಿಕೆಯಿಂದ ತಪ್ಪಿಹೋಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕೆಂದು ನಿರ್ದೇಶನ ನೀಡಿದರು.       ಮಸೀದಿಗಳು ಹಾಗೂ ಖಾಸಗಿ ಸೇರಿದಂತೆ ಎಲ್ಲ ಸರ್ಕಾರಿ ಶಾಲೆಗಳ ಪ್ರಾರ್ಥನಾ ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಬೇಕಲ್ಲದೆ ಕಾರ್ಯಕ್ರಮದ ಹಿಂದಿನ ದಿನ ಶಾಲಾ ಮಕ್ಕಳಿಂದ ವಿಶೇಷವಾಗಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸುವುದರ ಜೊತೆಗೆ ಭಾನುವಾರದಂದು ಶಾಲೆಗಳನ್ನು…

ಮುಂದೆ ಓದಿ...

ಮಹಿಳಾ ಪೊಲೀಸ್ ಠಾಣೆಯನ್ನು ಮತ್ತಷ್ಟು ಬಲವರ್ಧನೆಗೆ ಕ್ರಮ

 ತುಮಕೂರು:        ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ನಗರದಲ್ಲಿರುವ ಮಹಿಳಾ ಪೊಲೀಸ್ ಠಾಣೆಯನ್ನು ಅಗತ್ಯ ಸಿಬ್ಬಂದಿಗಳನ್ನು ಒದಗಿಸಿ ಮತ್ತಷ್ಟು ಬಲವರ್ಧನೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೋನ ವಂಶಿಕೃಷ್ಣ ಅವರು ತಿಳಿಸಿದರು.       ತಮ್ಮ ಕಛೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನತೆ ನಿರ್ಭಯವಾಗಿ ಓಡಾಡಬೇಕು. ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವುದು ಇಲಾಖೆಯ ಪ್ರಥಮಾದ್ಯತೆ. ಜನರ ಸುರಕ್ಷತೆಗಾಗಿ ಮಾಧ್ಯಮದವರು ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಹಕರಿಸಬೇಕೆಂದು ಮನವಿ ಮಾಡಿದರು. ಈ ವಾರದಲ್ಲಿ ರೌಡಿ ಪರೇಡ್ :-       ಜಿಲ್ಲೆಯಲ್ಲಿ ಯಾವುದೇ ರೀತಿಯ ಅಪರಾಧಗಳು ನಡೆಯದಂತೆ ಕ್ರಮ ಕೈಗೊಳ್ಳಲು ಈ ವಾರದಲ್ಲಿ ಜಿಲ್ಲಾ ಮಟ್ಟದ “ರೌಡಿ ಪರೇಡ್” ನಡೆಸಲಾಗುವುದು. ಈ ಪರೇಡ್‍ನಲ್ಲಿ ರೌಡಿ ಶೀಟರ್ ಪಟ್ಟಿಯಲ್ಲಿರುವವರ ಮೇಲೆ ನಿಗಾ ಇಡಲಾಗುವುದು. ಪ್ರತೀ…

ಮುಂದೆ ಓದಿ...