ನಾಳೆ ತುಮಕೂರಿಗೆ ಪ್ರಧಾನಿಯ ಆಗಮನ

 ತುಮಕೂರು:       ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಜ.22) ತುಮಕೂರಿಗೆ ಆಗಮಿಸುತ್ತಿದ್ದಾರೆ.      ನಾಳಿನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿರುವ ಅವರು, ಮಠಕ್ಕೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.      ಇಂದು ಸಂಜೆ ವೇಳೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಅವರೂ ಮಠಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮುಂದೆ ಓದಿ...

ಸಿದ್ದಗಂಗಾ ಮಠಕ್ಕೆ ಹರಿದುಬರುತ್ತಿದೆ ಭಕ್ತಸಾಗರ

ತುಮಕೂರು:        ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆಯಲು ಭಕ್ತಸಾಗರವೇ ಹರಿದುಬರುತ್ತಿದೆ.       ರಾಜ್ಯ ಮಾತ್ರವಲ್ಲದೇ, ದೇಶದ ವಿವಿಧೆಡೆಯಿಂದ ಅಪಾರ ಸಂಖ್ಯೆಯ ಭಕ್ತರು, ಗಣ್ಯರು ಸ್ವಾಮೀಜಿಯ ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ದರ್ಶನ ಪಡೆದಿದ್ದು, ಸುಮಾರು 10 ಲಕ್ಷ ಭಕ್ತರು ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ.       ಸ್ವಾಮೀಜಿ ಅಂತಿಮ ದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ, ಗಣ್ಯರಿಗೆ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಸರತಿ ಸಾಲಿನಲ್ಲಿ ನಿಂತು ಅಪಾರ ಸಂಖ್ಯೆಯ ಭಕ್ತರು ಸ್ವಾಮೀಜಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.       ವಿವಿಧ ಮಠಾಧೀಶರು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಗೃಹಸಚಿವ ಎಂ.ಬಿ.…

ಮುಂದೆ ಓದಿ...

ಸಿದ್ಧಗಂಗಾ ಶ್ರೀ ಲಿಂಗೈಕ್ಯ : ಮಠಕ್ಕೆ ಬರುವ ಮಾರ್ಗದಲ್ಲಿ ಬದಲಾವಣೆ!!

ತುಮಕೂರು:       ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ.       ಲಿಂಗೈಕ್ಯರಾದ ಪರಮಪೂಜ್ಯ ಶ್ರೀ ಶಿವಕುಮಾರ ಸ್ವಾಮಿ ಅವರ ಪಾರ್ಥಿವ ಶರೀರವನ್ನು ಪಲ್ಲಕ್ಕಿಯ ಮೆರವಣಿಗೆಯೊಂದಿಗೆ ಗೋಸಲ ಸಿದ್ದೇಶ್ವರ ವೇದಿಕೆಗೆ ತರಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.       ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುವಾಗುವಂತೆ ಶಾಲಾ ಕಾಲೇಜುಗಳು ಸೇರಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.        ಮಠಕ್ಕೆ ಆಗಮಿಸಲು ರಾಷ್ಟ್ರೀಯ ಹೆದ್ದಾರಿ-4 ಒಂದೇ ಸಂಚಾರಿ ಮಾರ್ಗವಿದ್ದು, ಸಂಚಾರವನ್ನು ಸುಗಮವಾಗಿಸಲು ರಸ್ತೆ ಮಾರ್ಗವನ್ನು ಬದಲಾಯಿಸಲಾಗಿದೆ. ಪೂನಾ, ಶಿರಾ ಮಾರ್ಗದ ಕಡೆ ಹೋಗುವ ವಾಹನಗಳನ್ನು ಡಾಬಸ್‍ಪೇಟೆ ಜಂಕ್ಷನ್‍ನಿಂದ ಹಾಗೂ ಶಿವಮೊಗ್ಗ ಕಡೆ ಹೋಗುವ ವಾಹನಗಳಿಗೆ ನೆಲಮಂಗಲ ಜಂಕ್ಷನ್‍ನಿಂದ ಡೈವರ್ಟ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ-4ನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ…

ಮುಂದೆ ಓದಿ...

ಡಾ: ಶ್ರೀಶ್ರೀಶ್ರೀಶಿವಕುಮಾರ ಸ್ವಾಮೀಜಿ ಶಿವಸಾಯುಜ್ಯ: ರಾಜ್ಯಾದ್ಯಂತ 3 ದಿನಗಳ ಶೋಕಾಚರಣೆ

 ತುಮಕೂರು :       ಹಲವಾರು ದಿನಗಳಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಡಾ: ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಬೆಳಿಗ್ಗೆ ಶಿವಸಾಯುಜ್ಯ ಹೊಂದಿದ್ದು, ರಾಜ್ಯಾದ್ಯಂತ 3 ದಿನಗಳ ಶೋಕಾಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.       ಮಠದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಇಂದು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಪಾರ್ಥೀವ ಶರೀರವನ್ನು ಮಠದ ಗೋಸಲ ಸಿದ್ಧೇಶ್ವರ ವೇದಿಕೆಯಲ್ಲಿ ಮಂಗಳವಾರ ಸಂಜೆವರೆಗೂ ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. ಗೌರವಾರ್ಥವಾಗಿ ರಾಜ್ಯಾದ್ಯಂತ ಶೋಕಾಚರಣೆ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಜರುಗುವುದಿಲ್ಲ ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಿದರು. ಪರಮಪೂಜ್ಯ ಸ್ವಾಮೀಜಿಯವರ ಕ್ರಿಯಾಸಮಾಧಿಯ ಕಾರ್ಯಗಳು, ಅಂತ್ಯಸಂಸ್ಕಾರವನ್ನು ಮಂಗಳವಾರ…

ಮುಂದೆ ಓದಿ...

ವೆಂಟಿಲೇಟರ್ ಇಲ್ಲದೆ ಸಹಜ ಉಸಿರಾಟ ನಡೆಸುತ್ತಿರುವ ಶ್ರೀಗಳು

ತುಮಕೂರು:       ಸಿದ್ಧಗಂಗಾ ಶ್ರೀಗಳು ವೆಂಟಿಲೇಟರ್ ಇಲ್ಲದೆ ಸಹಜವಾಗಿ ಉಸಿರಾಟ ನಡೆಸುತ್ತಿದ್ದಾರೆ. ಎಂದಿನಂತೆ ಸಾರ್ವಜನಿಕರಿಗೆ ದರ್ಶನ ನೀಡುತ್ತಿದ್ದಾರೆ. ಶ್ರೀಗಳ ಆರೋಗ್ಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದಾರೆ. ಈ ಕುರಿತು ವಿಜಯ ಕರ್ನಾಟಕ ಪ್ರತ್ಯಕ್ಷವಾಗಿ ಪರಿಶೀಲಿಸಿದ್ದು, ಶ್ರೀಗಳು ಸಹಜವಾಗಿ ಉಸಿರಾಟ ನಡೆಸುತ್ತಿದ್ದಾರೆ.        ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಕಿಟಕಿ ಮೂಲಕ ಭಕ್ತರಿಗೆ ದರ್ಶನ ನೀಡುತ್ತಿದ್ದಾರೆ. ಶ್ರೀಗಳ ದರ್ಶನ ಮಾಡಿದ ಭಕ್ತರು, “ಶ್ರೀಗಳು ಚೆನ್ನಾಗಿದ್ದಾರೆ. ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ಹಬ್ಬುತ್ತಿದ್ದಾರೆ”, ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ದರ್ಶನಕ್ಕೆ ತೊಂದರೆ ಇಲ್ಲ:  ಸಿದ್ಧಗಂಗಾ ಶ್ರೀಗಳ ಸಾರ್ವಜನಿಕ ದರ್ಶನಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ.        ಆದರೂ ನಡೆದಾಡುವ ದೇವರು ಸಿದ್ಧಗಂಗಾ ಮಠದ ಹಿರಿಯ ಶ್ರೀ ಡಾ.ಶಿವಕುಮಾರ ಸ್ವಾಮಿಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ ಎನ್ನುವುದು…

ಮುಂದೆ ಓದಿ...