ಜ. 31ಕ್ಕೆ ಸಿದ್ಧಗಂಗಾ ಶ್ರೀಗಳ ಪುಣ್ಯಾರಾಧನೆ

 ತುಮಕೂರು:        ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ, ಬಸವ ಪ್ರಶಸ್ತಿ ಪುರಸ್ಕøತರಾದ ಲಿಂಗೈಕ್ಯ ಡಾ: ಶ್ರೀಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪುಣ್ಯ ಸ್ಮರಣೆ ಸಮಾರಂಭವನ್ನು ಜನವರಿ 31ರ ಬೆಳಿಗ್ಗೆ 10.30 ಗಂಟೆಗೆ ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ ನಡೆಸಲಾಗುವುದು ಎಂದು ಸಿದ್ಧಗಂಗಾ ಮಠದ ಶ್ರೀಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ತಿಳಿಸಿದರು.       ಮಠದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನವರಿ 21ರಂದು ಪ್ರಾತಃಕಾಲ 11.44 ಸಮಯದಲ್ಲಿ ಲಿಂಗೈಕ್ಯರಾದ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಪುಣ್ಯಸ್ಮರಣೆ ಸಮಾರಂಭವನ್ನು 11ನೇ ದಿನವಾದ ಜ.31ರಂದು ಮಠದ ಆವರಣದಲ್ಲಿರುವ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಸಿರಿಗೆರೆಯ ತರಳಬಾಳು ಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಡಾ: ಶ್ರೀಶ್ರೀ…

ಮುಂದೆ ಓದಿ...

 ತುಮಕೂರು : ಮುಸ್ಲಿಂ ಮಹಿಳೆಗೆ ಮೇಯರ್ ಸ್ಥಾನ ನೀಡಲು ಒತ್ತಾಯ

 ತುಮಕೂರು:       ತುಮಕೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನವನ್ನು ಅಲ್ಪಸಂಖ್ಯಾತರಿಗೆ ಕೊಡುವಂತೆ ಜೆಡಿಎಸ್ ವರಿಷ್ಠರಿಗೆ ಅಲ್ಪಸಂಖ್ಯಾತರ ಘಟಕದ ನಗರ ಕಾರ್ಯದರ್ಶಿ ಮಖ್‍ದುಲ್ ಅಲಿ ಒತ್ತಾಯಿಸಿದರು.       ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಮೇಯರ್ ಸ್ಥಾನವು ಬಿಸಿಎಂ(ಎ) ಮಹಿಳೆಗೆ ಮೀಸಲಾಗಿದ್ದು, 29ನೇ ವಾರ್ಡಿನಿಂದ ಗೆದ್ದಿರುವ ನಾಜಿಮಾ ಬಿ ಇಸ್ಮಾಯಿಲ್ ಹಾಗೂ 21ನೇ ವಾರ್ಡಿನಿಂದ ಗೆದ್ದಿರುವ ಲಲಿತಾ ರವೀಶ್ ನಡುವೆ ಪೈಪೋಟಿ ಇದ್ದು, ಈ ಹಿಂದೆ 2013ರಲ್ಲಿ ಈಗಾಗಲೇ ಲಲಿತಾ ರವೀಶ್ ಅವರು ಮೇಯರ್ ಆಗಿರುವ ಕಾರಣದಿಂದಾಗಿ ಈ ಭಾರೀ ಅಲ್ಪಸಂಖ್ಯಾತ ಮಹಿಳೆಗೆ ಅವಕಾಶ ನೀಡುವಂತೆ ವರಿಷ್ಠರಿಗೆ ಈಗಾಗಲೇ ಮೌಖಿಕವಾಗಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.       ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದಂತೆ ತುಮಕೂರು ಮಹಾನಗರ ಪಾಲಿಕೆಯಲ್ಲಿಯೂ ಆಡಳಿತ ನಡೆಸಲು ಎರಡು ಪಕ್ಷಗಳು ಮುಂದಾಗಿದ್ದು, ಜೆಡಿಎಸ್ ಮೇಯರ್ ಸ್ಥಾನವನ್ನು, ಕಾಂಗ್ರೆಸ್ ಉಪಮೇಯರ್ ಸ್ಥಾನವನ್ನು…

ಮುಂದೆ ಓದಿ...

ಫೆ.05 ರಂದು ಜ್ಞಾನಬುತ್ತಿಯ 500ನೇ ಕಾರ್ಯಕ್ರಮ

 ತುಮಕೂರು:       ಕಳೆದ 10 ವರ್ಷಗಳಿಂದ ನಗರದಲ್ಲಿ ನಿರಂತರವಾಗಿ ಸಾಹಿತ್ಯ,ಸಂಗೀತ,ನಾಡು, ನುಡಿ, ಭಾರತೀಯ ಸಂಸ್ಕøತಿಯ ವಿಚಾರವಾಗಿ ಉಪನ್ಯಾಸಗಳನ್ನು ಏರ್ಪಡಿಸುತ್ತಾ ಬಂದಿರುವ ಜ್ಞಾನಬುತ್ತಿ ಸತ್ಸಂಗ ಕೇಂದ್ರದ 500ನೇ ಕಾರ್ಯಕ್ರಮ 2019ರ ಫೆಬ್ರವರಿ 05 ರಂದು ಸೋಮೇಶ್ವರಪುರಂನ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಆಯೋಜಿಸಲಾಗಿದೆ ಎಂದು ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಪಿ.ಶಾಂತಿಲಾಲ್ ತಿಳಿಸಿದ್ದಾರೆ.       ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಶಿಸ್ತು ಮತ್ತು ಸಮಯ ಪ್ರಜ್ಞೆಯನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡು ಕಳೆದ 10 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು,ಪ್ರತಿ ಮಂಗಳವಾರ ವಿದ್ಯಾವಾಹಿನಿ ಕಾಲೇಜಿನಲ್ಲಿ,ಗುರುವಾರ ಸಾಯಿಬಾಬಾ ದೇವಾಲಯದಲ್ಲಿ ಮತ್ತು ಭಾನುವಾರಗಳಂದು ರಾಮದೇವರ ಬೆಟ್ಟದಲ್ಲಿ ನಿರಂತರವಾಗಿ ಕಾರ್ಯಕ್ರಮಗಳನ್ನು ಏರ್ಪಡಿಸುತಿದ್ದು,ಇದು ಗಿನ್ನಿಸ್ ದಾಖಲೆ ಸೇರಿದೆ.ಇದರ 500 ನೇ ಕಾರ್ಯಕ್ರಮವನ್ನು ಸಹ ವಿಶೇಷವಾಗಿ ಆಚರಿಸಲು ತೀರ್ಮಾನಿಸಿದ್ದು,ಫೆಬ್ರವರಿ 05 ರಂದು ವಾಸವಿ ದೇವಾಲಯದಲ್ಲಿ ಕುಮಾರವ್ಯಾಸ ಭಾರತ ಕಾವ್ಯದಲ್ಲಿರುವ ನವರಸಗಳು ಎಂಬ ವಿಷಯ ಕುರಿತು ಗಮಕ…

ಮುಂದೆ ಓದಿ...

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಿ : ಎಡಿಸಿ

ತುಮಕೂರು:       ಗಂಡು ಹೆಣ್ಣೆಂಬ ತಾರತಮ್ಯ ತೋರದೆ ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ತಿಳಿಸಿದರು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಅಭಿವೃದ್ಧಿ ಸಾಮಾಜಿಕ ಸೇವಾ ಸಂಸ್ಥೆ, ಜಿಲ್ಲಾ ಬಾಲಭವನ ಸಂಘಗಳ ಸಹಯೋಗದಲ್ಲಿಂದು ನಗರದ ಸೆಂಟ್‍ಮೇರಿಸ್ ಶಾಲೆಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡುತ್ತಾ, ಹೆಣ್ಣು ಮಕ್ಕಳ ಲಿಂಗಾನುಪಾತ 1000ಕ್ಕೆ 943 ಇದ್ದು, ಇದನ್ನು ಸರಿದೂಗಿಸವ ಹಾಗೂ ಹೆಣ್ಣು ಮಗುವಿನ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.       ಕಾರ್ಯಕ್ರಮ ಉದ್ದೇಶಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಉಪನಿರ್ದೇಶಕ ನಟರಾಜ್ ಮಾತನಾಡಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ವಿದ್ಯಾಭ್ಯಾಸಕ್ಕಾಗಿ ಕೇಂದ್ರ…

ಮುಂದೆ ಓದಿ...