ಕೊರಟಗೆರೆ: ಕೊರಟಗೆರೆ ತಾಲ್ಲೂಕು ಕಛೇರಿಯಲ್ಲಿಯ ಭೂ ದಾಖಲೆಗಳ ಸಹಾಯ ನಿರ್ದೇಶಕರ ಕಛೇರಿಯಲ್ಲಿ 4:20 ರ ಸಮಯದಲ್ಲಿ 5000(ಐದು ಸಾವಿರ) ಲಂಚ ಪಡೆಯುವಾಗ ಎ.ಸಿ.ಬಿ ಬಲೆಗೆ ಸರ್ವೇಯರ್ ಎಚ್. ಆರ್. ಮಮತಾ ಬಿದ್ದಿದ್ದಾರೆ. ತಾಲ್ಲೂಕಿನ ಚನ್ನರಾಯನ ದುರ್ಗ ಹೋಬಳಿ ಕುರಂಕೋಟೆ ಗ್ರಾಮದ ನಿವಾಸಿಯೊಬ್ಬರು ಸರ್ವೇ ಹದ್ದುಬಸ್ತು ಕೋರಿ ತೋವಿನಕೆರೆ ನಾಡ ಕಛೇರಿಗೆ ಆನ್ ಲೈನ್ ಮೂಲಕ ಅರ್ಜಿಸಲ್ಲಿಸಿದ್ದು ಸರ್ವೇಯರ್ , ಹೆಚ್.ಆರ್ ಮಮತ ಸರ್ವೇ ಮಾಡಿಕೊಟ್ಟಿದ್ದು ಭೂ ದಾಖಲೆಗಳ ಸಹಾಯ ನಿರ್ದೇಶಕರ ಕಛೇರಿ, ತಾಲ್ಲೂಕು ದಂಡಾಧಿಕಾರಿಗಳ ಕಛೇರಿಯಲ್ಲಿ ಬೇಡಿಕೆ ಇಟ್ಟಿದ್ದ 10,000 (ಹತ್ತು ಸಾವಿರ ) ರೂಗಳ ಪೈಕಿ 5000(ಐದು ಸಾವಿರ) ಹಣ ಪಡೆಯುವಾಗ ಎ.ಸಿ.ಬಿ.ಬಲೆಗೆ ಬಿದ್ದಿದ್ದಾರೆ.
ಮುಂದೆ ಓದಿ...Day: February 4, 2019
ತುಮಕೂರು ಲೋಕಸಭೆಯನ್ನು ಜೆಡಿಎಸ್ಗೆ ಬಿಟ್ಟು ಕೊಟ್ರೆ ನನ್ನದೊಂದು ಅರ್ಜಿ ಇರುತ್ತೆ : ಕೆ.ಎನ್.ಆರ್
ತುಮಕೂರು: ತುಮಕೂರು ಲೋಕಸಭೆಯನ್ನು ಜೆಡಿಎಸ್ಗೆ ಬಿಟ್ಟು ಕೊಟ್ರೆ ನನ್ನದೊಂದು ಅರ್ಜಿ ಇರುತ್ತೆ ಎಂದು ಮಾಜಿ ಶಾಸಕ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆಎನ್ ರಾಜಣ್ಣ ಅವರು ಜೆಡಿಎಸ್ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರವನ್ನ ಜೆಡಿಎಸ್ಗೆ ಬಿಟ್ಟುಕೊಡುವ ವಿಚಾರದ ಕುರಿತು ಮಾಜಿ ಶಾಸಕ ಕೆ.ಎನ್.ಆರ್ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಸ್ತುತ ಕಾಂಗ್ರೆಸ್ ಸಂಸದರು ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವಾಗ ನಮಗೇ ಬಿಟ್ಟುಕೊಡಿ ಎಂದು ಜೆಡಿಎಸ್ ನವ್ರು ಕೇಳುತ್ತಿದ್ದಾರೆ. ಅವರಿಗೆ ಮಾನ ಮರ್ಯಾದೆ ಬೇಡ್ವಾ? 8 ಕ್ಷೇತ್ರದಲ್ಲಿ ನಾವೇ ಮುಂದಿದ್ದೇವೆ ಅನ್ನುವುದಾದರೆ, ಹಿಂದೆ ನಾಲ್ಕು ಕ್ಷೇತ್ರದಲ್ಲಿ ಠೇವಣಿ ಕಳೆದುಕೊಂಡಿದ್ದನ್ನ ಜೆಡಿಎಸ್ ನವ್ರು ಮರೆತು ಬಿಟ್ರಾ? ಒಂದು ವೇಳೆ ಜೆಡಿಎಸ್ಗೆ ಬಿಟ್ಟು ಕೊಟ್ರೆ ನನ್ನದೊಂದು ಅರ್ಜಿ ಇದ್ದೇ ಇರುತ್ತೆ ಎಂದು ಮಾಜಿ ಶಾಸಕ ರಾಜಣ್ಣ ಬಂಡಾಯವೆದ್ದು ಸ್ಪರ್ಧೆ ಮಾಡುವ ಬಗ್ಗೆಯೂ ಎಚ್ಚರಿಕೆ ನೀಡಿದರು.
ಮುಂದೆ ಓದಿ...ಇಂದಿನಿಂದ ಮತದಾರರ ಸಹಾಯವಾಣಿ-1950 ಕಾರ್ಯಾರಂಭ
ತುಮಕೂರು : ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಮುಂಬರುವ 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳಲು 1950 ಮತದಾರರ ಸಹಾಯವಾಣಿ ಕಾರ್ಯಾರಂಭಕ್ಕೆ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ಜಿಲ್ಲಾಧಿಕಾರಿಗಳ ಕಛೇರಿ ಸ್ಪಂದನ ಕೇಂದ್ರದಲ್ಲಿಂದು ಚಾಲನೆ ನೀಡಿದರು. ಈ ಸ್ಪಂದನ ಕೇಂದ್ರದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಪಟ್ಟಿಯಿಂದ ತೆಗೆದು ಹಾಕುವುದು, ವರ್ಗಾವಣೆ ಮಾಹಿತಿಗಳು, ಮತಗಟ್ಟೆ ಮಾಹಿತಿ, ಇವಿಎಂ, ವಿವಿ ಪ್ಯಾಟ್ಗಳ ಕಾರ್ಯಾಚರಣೆ ಕುರಿತು ಟೋಲ್ ಫ್ರೀ ಸಂಖ್ಯೆ 1950ಗೆ ಮೊಬೈಲ್ ಅಥವಾ ಸ್ಥಿರ ದೂರವಾಣಿಯಿಂದ ಕರೆ ಮಾಡುವ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಚುನಾವಣಾ ಸಂದರ್ಭದಲ್ಲಿ ಈ ಸಹಾಯವಾಣಿಗೆ ಕರೆ ಮಾಡುವ ಮೂಲಕ ಜಿಲ್ಲೆಗೆ ಸಂಬಂಧಿಸಿದ ದೂರುಗಳನ್ನು ಸಹ ದಾಖಲಿಸಬಹುದಾಗಿದ್ದು, ದೂರುದಾರರಿಗೆ ದೂರು ನೋಂದಣಿ ಸಂಖ್ಯೆಯನ್ನು ಒದಗಿಸಲಾಗುವುದು. ಜಿಲ್ಲೆಯ ಹೊರಗಿನಿಂದ ಕರೆ ಮಾಡಿ…
ಮುಂದೆ ಓದಿ...ಫೆ.16, 17ರಂದು ತುಮಕೂರಿನಲ್ಲಿ ಉದ್ಯೋಗ ಮೇಳ
ತುಮಕೂರು: ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಫೆಬ್ರವರಿ 16, 17ರಂದು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿರುವ ಉದ್ಯೋಗಮೇಳದ ಬಗ್ಗೆ ಎರಡೂ ಜಿಲ್ಲೆಗಳ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಟಾಂ-ಟಾಂ ಮೂಲಕ ಜನರಿಗೆ ಮಾಹಿತಿ ತಲುಪಿಸಬೇಕೆಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮೇಳದಲ್ಲಿ 18 ರಿಂದ 35 ವರ್ಷದೊಳಗಿನ 7ನೇ ತರಗತಿ ಉತ್ತೀರ್ಣ, 10ನೇ ತರಗತಿ ಉತ್ತೀರ್ಣ/ಅನುತ್ತೀರ್ಣ, ಪಿ.ಯು.ಸಿ., ಯಾವುದೇ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿದ ಪುರುಷ/ ಮಹಿಳಾ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗ ಹೊಂದಬಹುದಾಗಿದೆ ಎಂದು ತಿಳಿಸಿದ ಅವರು ಉದ್ಯೋಗ ಮೇಳದ ಬಗ್ಗೆ ಸ್ಥಳೀಯ ಸಂಸ್ಥೆಗಳು ಜನರಲ್ಲಿ ಅರಿವು ಮೂಡಿಸುವ ಸಂಪೂರ್ಣ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದರು. …
ಮುಂದೆ ಓದಿ...ಲಿಂ.ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ನೀಡಲು ಸಂಸದರ ಆಗ್ರಹ
ತುಮಕೂರು: ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಇಂದಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಜನವರಿ 21ರಂದು ಲಿಂಗೈಕ್ಯರಾದ ಶತಾಯುಷಿ, ನಡೆದಾಡುವ ದೇವರು, ಪರಮಪೂಜ್ಯ ಶ್ರೀಶ್ರೀಶ್ರೀ ಡಾ: ಶಿವಕುಮಾರ ಮಹಾಸ್ವಾಮೀಜಿ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಲು ಆಗ್ರಹಿಸಿದರು. ಅನ್ನದಾಸೋಹ, ಅಕ್ಷರ ದಾಸೋಹ, ಜ್ಞಾನ ದಾಸೋಹದ ಮೂಲಕ ವಿಶ್ವದಾದ್ಯಂತ ಕೋಟ್ಯಾಂತರ ಭಕ್ತರನ್ನು ಹೊಂದಿರುವ ಪರಮಪೂಜ್ಯರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸದೇ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಪರಮಪೂಜ್ಯರಿಗೆ ಭಾರತರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಈ ಹಿಂದೆ ಹಲವಾರು ಬಾರಿ ಒತ್ತಾಯ ಮಾಡಿದ್ದರೂ ಈವರೆಗೂ ನೀಡದೇ ಇರುವುದು ದುರಾದುಷ್ಟಕರ. ಈಗಲಾದರೂ ಪರಮಪೂಜ್ಯ ಶ್ರೀಗಳ ಸಾಧನೆಯನ್ನು ಗುರುತಿಸಿ ಮರಣೋತ್ತರವಾಗಿ ಭಾರತರತ್ನ ಪ್ರಶಸ್ತಿಯನ್ನು ನೀಡಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಮುಂದೆ ಓದಿ...