ಫೆ.15, 16 ತುಮಕೂರಿನಲ್ಲಿ ಬೃಹತ್ ಆರೋಗ್ಯ ಮೇಳ

 ತುಮಕೂರು:

      ನಗರದ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜು ಆವರಣದಲ್ಲಿ ಫೆಬ್ರುವರಿ 15 ಹಾಗೂ 16ರಂದು ಬೃಹತ್ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದರು.

      ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಆರೋಗ್ಯ ಮೇಳದಲ್ಲಿ ಕಿದ್ವಾಯಿ ಆರೋಗ್ಯ ಸಂಸ್ಥೆ, ಅಪೊಲೋ ಆಸ್ಪತ್ರೆ, ಸಿದ್ದಾರ್ಥ ಮೆಡಿಕಲ್ ಕಾಲೇಜಿನಿಂದ ತಜ್ಞ ವೈದ್ಯರು ಪಾಲ್ಗೊಂಡು ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. ದೀರ್ಘ ಕಾಲದಿಂದ ರೋಗದಿಂದ ಬಳಲುತ್ತಿರುವವರು ಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು.

      ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಿಕಾ ಮಾತನಾಡಿ ಮೇಳದಲ್ಲಿ ಹೃದಯ ಸಂಬಂಧಿ ಕಾಯಿಲೆ, ಕಣ್ಣಿನ ಸಮಸ್ಯೆ, ಕುಷ್ಠರೋಗ, ಕ್ಷಯರೋಗ, ಕ್ಯಾನ್ಸರ್, ಚರ್ಮ ಸಂಬಂಧಿ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ: ವೀರಭದ್ರಯ್ಯ, ಕೆಎಸ್‍ಆರ್‍ಟಿಸಿ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮತ್ತಿತರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

(Visited 13 times, 1 visits today)

Related posts

Leave a Comment