ರಸ್ತೆ ಸುರಕ್ಷತೆ : ಜೀವದ ರಕ್ಷೆ

 ತುಮಕೂರು:

      ರಾಷ್ಟ್ರೀಯ ಸಪ್ತಾಹದ ಅಂಗವಾಗಿ ತುಮಕೂರು ರೋಟರಿ ಕ್ಲಬ್ ವತಿಯಿಂದ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಆವರಣದಲ್ಲಿಂದು ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

      ಪ್ರಾದೇಶಿಕ ಸಾರಿಗೆ ಇಲಾಖೆ, ರೋಟರಿ, ಜೆ.ಸಿ. ವಾಲೆಂಟರಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಈ ಶಿಬಿರವನ್ನುದ್ದೇಶಿಸಿ ಮಾತನಾಡಿದ ಉಪ ಸಾರಿಗೆ ಪ್ರಾದೇಶಿಕ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಕ ಬಸವರಾಜ್ ಆರಾಧ್ಯ, ರಕ್ತದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತಾಗುತ್ತದೆ. ತುರ್ತು ಸಂದರ್ಭಗಳಲ್ಲಿ ರಕ್ತದ ಅಗತ್ಯತೆ ಇರುವವರಿಗೆ ನೀಡುವ ಮೂಲಕ ಮಾನವೀಯತೆ ತೋರಬೇಕು ಎಂದು ತಿಳಿಸಿದರು.

      ತುಮಕೂರು ರೋಟರಿ ಅಧ್ಯಕ್ಷ ಉದಯ್ ಕುಮಾರ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಬಿರದಲ್ಲಿ ಸುಮಾರು 40ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.

(Visited 12 times, 1 visits today)

Related posts

Leave a Comment