870 ಪಿಡಬ್ಲ್ಯುಡಿ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅನುಮತಿ -ಡಿಸಿಎಂ

ತುಮಕೂರು:       ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿಯಿರುವ 870 ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅನುಮತಿ ನೀಡಲಾಗಿದ್ದು, ಶೀಘ್ರದಲ್ಲೇ ಕೆಪಿಎಸ್‍ಸಿ ಇಂದ ಅಧಿಸೂಚನೆ ಪ್ರಕಟವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ್ ತಿಳಿಸಿದರು.       ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳ ಸಹಯೋಗದಲ್ಲಿಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 2 ದಿನಗಳ ತುಮಕೂರು-ಚಿತ್ರದುರ್ಗ ಜಿಲ್ಲೆಗಳ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಸುಮಾರು 12 ಲಕ್ಷ ಪದವೀಧರ ನಿರುದ್ಯೋಗಿಗಳಿದ್ದು, ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆಗಳಲ್ಲಿ ಖಾಲಿಯಿರುವ ಸಾವಿರಾರು ಹುದ್ದೆಗಳನ್ನು ಪಟ್ಟಿ ಮಾಡಲಾಗಿದೆ. ಶೀಘ್ರದಲ್ಲೇ ಹುದ್ದೆಗಳ ಭರ್ತಿಗೆ ಕ್ರಮ…

ಮುಂದೆ ಓದಿ...

60 ಕೋಟಿ ರೂ. ವೆಚ್ಚದಲ್ಲಿ ಮಲ್ಟಿ-ಯುಟಿಲಿಟಿ ಮಾಲ್

 ತುಮಕೂರು  :       ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ಮಲ್ಟಿ-ಯುಟಿಲಿಟಿ ಮಾಲ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆಯ ಅಧ್ಯಕ್ಷೆ ಡಾ: ಶಾಲಿನಿ ರಜನೀಶ್ ತಿಳಿಸಿದರು.       ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೋರ್ಡ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ತುಮಕೂರು ಕೈಗಾರಿಕಾ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಯುಟಿಲಿಟಿ ಮಾಲ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಸ್ಮಾರ್ಟ್ ಸಿಟಿ ಲಿಮಿಟೆಡ್ ಸಂಸ್ಥೆ ವತಿಯಿಂದ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ನಗರವನ್ನು ಅಭಿವೃದ್ಧಿಪಡಿಸಲಾಗುವುದು. ಸುಮಾರು 19592 ಚ.ಮೀ.(sqm)ಅಳತೆಯಲ್ಲಿ ಮೂರು ಅಂತಸ್ತಿನ ಮಲ್ಟಿ-ಯುಟಿಲಿಟಿ ಮಾಲ್ ಅನ್ನು ನಿರ್ಮಾಣ ಮಾಡಲಾಗುವುದು. ಖಾಯಂ ಹೆಲಿಪ್ಯಾಡ್ ಸೇರಿದಂತೆ ಉದ್ಯಮಿಗಳು ಸಭೆ ನಡೆಸಲು ಸಭಾಂಗಣ, ಹೋಟೆಲ್, ರೆಸ್ಟೋರೆಂಟ್, ಸೆಲೋನ್ ಸೆಂಟರ್, ಎಟಿಎಂಗಳು, ಸೂಪರ್ ಮಾರುಕಟ್ಟೆ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ಈ…

ಮುಂದೆ ಓದಿ...