ಹೇಮಾವತಿ ನೀರಿನ ಬಳಕೆಗೆ ಮಿತಿ ಇರಲಿ

ತುಮಕೂರು :       ಫೆಬ್ರವರಿ ತಿಂಗಳ ನಂತರ ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚಳವಾಗಲಿದ್ದು, 15ನೇ ವಾರ್ಡ್‍ನ ಸಾರ್ವಜ ನಿಕರು ಹೇಮಾವತಿ ನೀರನ್ನು ಮಿತವಾಗಿ ಬಳಸುವ ಮೂಲಕ ಸಹಕಾರ ನೀಡುವಂತೆ ಮಹಾನಗರ ಪಾಲಿಕೆ ಲೆಕ್ಕಪತ್ರಗಳ ಸ್ಥಾಯಿಸಮಿತಿ ಅಧ್ಯಕ್ಷೆ ಗಿರಿಜಾ ಧನಿಯಾಕುಮಾರ್ ಮನವಿ ಮಾಡಿದ್ದಾರೆ.       ಬುಗುಡನಹಳ್ಳಿಯಲ್ಲಿ ಲಭ್ಯವಿರುವ ನೀರಿನ ಬಗ್ಗೆ ಹಾಗೂ ಬೇಸಿಗೆಯಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಬಗ್ಗೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಪಾಲಿಕೆ ಎಂಜನಿಯರ್ ವಸಂತ್ ಅವರಿಂದ ಮಾಹಿತಿಯನ್ನು ಪಡೆದುಕೊಂಡರು.       ಫೆಬ್ರವರಿ ನಂತರ ನೀರಿನ ಬಾಷ್ಪೀಕರಣ ಹೆಚ್ಚಲಿದ್ದು, ನೀರಿನ ಲಭ್ಯತೆ ಕಡಿಮೆಯಾಗಲಿದೆ, ಈಗಾಗಲೇ ಕೊಳವೆಬಾವಿಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಹೇಮಾವತಿ ನೀರನ್ನು ಮಿತವಾಗಿ ಬಳಸಿದರೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ, ಹಾಗಾಗಿ ಸಾರ್ವಜನಿಕರು ಮಹಾನಗರ ಪಾಲಿಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.…

ಮುಂದೆ ಓದಿ...

ಮತಪಟ್ಟಿ: ಎರಡು ಹಂತದಲ್ಲಿ ನೋಂದಣಿಗೆ ವಿಶೇಷ ಅಭಿಯಾನ

 ತುಮಕೂರು:      ಲೋಕಸಭೆ ಚುನಾವಣೆ ಪ್ರಯುಕ್ತ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೆ ಹೊರಗುಳಿದವರಿಗಾಗಿ ಜಿಲ್ಲಾದ್ಯಂತ ಮೊದಲನೇ ಹಂತದಲ್ಲಿ ಫೆಬ್ರುವರಿ 23 ಮತ್ತು 24ರಂದು ಹಾಗೂ ಎರಡನೇ ಹಂತದಲ್ಲಿ ಮಾರ್ಚ್ 2 ಮತ್ತು 3ರಂದು ವಿಶೇಷ ನೋಂದಣಿ ಅಭಿಯಾನವನ್ನು ನಡೆಸಲಾಗುವುದು ಎಂದು ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.      ಜಿಲ್ಲಾ ಪಂಚಾಯತಿಯಲ್ಲಿಂದು ನಡೆದ ಕೆ.ಡಿ.ಪಿ. ಸಭೆಯ ನಂತರ ಮಾತನಾಡಿದ ಅವರು, ಅಭಿಯಾನ ದಿನಗಳಂದು ಸಂಬಂಧಿಸಿದ ಮತಗಟ್ಟೆ ಅಧಿಕಾರಿಯು ಜನವರಿ 16ರಂದು ಪ್ರಕಟಿಸಲಾದ ಅಂತಿಮ ಮತದಾರರ ಭೌತಿಕ ಪಟ್ಟಿಯೊಂದಿಗೆ ಆಯಾ ಮತಗಟ್ಟೆಯಲ್ಲಿ ಹಾಜರಿದ್ದು, ಮತದಾರರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.       ಈ ಅಭಿಯಾನದಲ್ಲಿ ದಿನಾಂಕ: 1-1-2019ಕ್ಕೆ 18ವರ್ಷ ಪೂರ್ಣಗೊಂಡ ಅರ್ಹ ಮತದಾರರು ಮತಪಟ್ಟಿಗೆ ನೋಂದಾಯಿಸಿಕೊಳ್ಳಲು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತಗಟ್ಟೆ…

ಮುಂದೆ ಓದಿ...